ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು

ಮಾಹಿತಿ ಪ್ರಕಾರ ರೈಲಿನಲ್ಲಿ ರಾತ್ರಿ 11.30ರ ಹೊತ್ತಿಗೆ ಬಾಲಕಿಯ ತಾಯಿ ವಾಶ್ ರೂಂಗೆ ಹೋದ ವೇಳೆ ರೈಲಿನ ಸಿಬ್ಬಂದಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಇದರಿಂದ ಕೋಪಗೊಂಡ ಕುಟುಂಬಸ್ಥರು ಹಾಗೂ ಇತರೆ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನಲ್ಲಿ ಹಲವು ಗಂಟೆಗಳ ಕಾಲ ಆತನಿಗೆ ಮನಬಂದಂತೆ ಥಳಿಸಿದ್ದಾರೆ.

ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ರೈಲ್ವೇ ಸಿಬ್ಬಂದಿಯನ್ನು ಹೊಡೆದು ಕೊಂದ ಪ್ರಯಾಣಿಕರು
Follow us
ಅಕ್ಷತಾ ವರ್ಕಾಡಿ
|

Updated on:Sep 14, 2024 | 11:30 AM

ರೈಲ್ವೇ ನೌಕರನೊಬ್ಬ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಎಂಬ ಕಾರಣಕ್ಕೆ ಆತನನ್ನು ಹೊಡೆದು ಕೊಂದ ಘಟನೆ ಬಿಹಾರದ ಬರೌನಿಯಿಂದ ದೆಹಲಿಗೆ ತೆರಳುತ್ತಿದ್ದ ಹಮ್ಸಫರ್ ಎಕ್ಸ್‌ಪ್ರೆಸ್ ರೈಲಿನಲ್ಲಿ ನಡೆದಿದೆ. ಆತನ ಕಿರುಕುಳದಿಂದ ಹೆದರಿದ ಬಾಲಕಿ ಕೂಡಲೇ ಕುಟುಂಬಸ್ಥರಿಗೆ ದೂರು ನೀಡಿದ್ದಾಳೆ. ಇದರಿಂದ ಕುಪಿತಗೊಂಡ ಬಾಲಕಿಯ ಕುಟುಂಬಸ್ಥರು ಹಾಗೂ ಇತರೆ ಪ್ರಯಾಣಿಕರು ವ್ಯಕ್ತಿಯನ್ನು ಥಳಿಸಿ ಸ್ಥಳದಲ್ಲೇ ಕೊಂದು ಹಾಕಿದ್ದಾರೆ.

ಮಾಹಿತಿ ಪ್ರಕಾರ ಬಿಹಾರದ ಸಿವಾನ್‌ನ ಕುಟುಂಬವೊಂದು ಹಮ್ಸಫರ್ ಎಕ್ಸ್‌ಪ್ರೆಸ್ ಮೂರನೇ ಎಸಿ ಕೋಚ್‌ನಲ್ಲಿ ಬುಧವಾರ ಪ್ರಯಾಣಿಸುತ್ತಿರುವ ವೇಳೆ, ಅದೇ ಕೋಚ್‌ನಲ್ಲಿ ರೈಲ್ವೆ ಉದ್ಯೋಗಿ ಪ್ರಶಾಂತ್ ಕುಮಾರ್ ಪ್ರಯಾಣಿಸುತ್ತಿದ್ದ. ಆ ಕುಟುಂಬದ 11 ವರ್ಷದ ಬಾಲಕಿಯನ್ನು ಈತ ತನ್ನ ಸೀಟಿನಲ್ಲಿ ಕೂರಿಸಿಕೊಂಡಿದ್ದ ಎಂದು ತಿಳಿದುಬಂದಿದೆ. ಈ ಕ್ರಮದಲ್ಲಿ ಬುಧವಾರ ರಾತ್ರಿ 11.30ಕ್ಕೆ ಬಾಲಕಿಯ ತಾಯಿ ವಾಶ್ ರೂಂಗೆ ಹೋದಾಗ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಅವಳು ತನ್ನ ತಾಯಿಯನ್ನು ವಾಶ್‌ರೂಮ್‌ಗೆ ಕರೆದೊಯ್ದು ನಡೆದದ್ದನ್ನು ಹೇಳಿದಳು.

ರೈಲ್ವೇ ಉದ್ಯೋಗಿ ಪ್ರಶಾಂತ್ ಕುಮಾರ್ ವರ್ತನೆಯ ಬಗ್ಗೆ ಮಹಿಳೆ ತನ್ನ ಪತಿ, ಚಿಕ್ಕಪ್ಪ ಮತ್ತು ಕೋಚ್‌ನಲ್ಲಿದ್ದ ಇತರ ಪ್ರಯಾಣಿಕರಿಗೆ ತಿಳಿಸಿದ್ದಾಳೆ. ಇದರಿಂದ ಕೋಪಗೊಂಡ ಕುಟುಂಬಸ್ಥರು ಹಾಗೂ ಇತರೆ ಪ್ರಯಾಣಿಕರು ಚಲಿಸುತ್ತಿದ್ದ ರೈಲಿನಲ್ಲಿ ಹಲವು ಗಂಟೆಗಳ ಕಾಲ ಆತನನ್ನು ಮನಬಂದಂತೆ ಥಳಿಸಿದ್ದಾರೆ.

ಇದನ್ನೂ ಓದಿ: ರೀಲ್ಸ್‌ ತಂದ ಪಜೀತಿ, ಟೆರೇಸ್‌ ಮೇಲೆ ರೀಲ್ಸ್‌ ಮಾಡಲು ಹೋಗಿ ಮುಗ್ಗರಿಸಿ ಬಿದ್ದ ಯುವತಿ

ಮರುದಿನ ರೈಲು ಗುರುವಾರ ಬೆಳಿಗ್ಗೆ 4.30 ರ ಸುಮಾರಿಗೆ ಉತ್ತರ ಪ್ರದೇಶದ ಕಾನ್ಪುರ ಕೇಂದ್ರ ನಿಲ್ದಾಣವನ್ನು ತಲುಪಿದ್ದು, ಪ್ರಯಾಣಿಕರು ಸರ್ಕಾರಿ ರೈಲ್ವೆ ಪೊಲೀಸರಿಗೆ ಪ್ರಶಾಂತ್ ಕುಮಾರ್ ನನ್ನು ಒಪ್ಪಿಸಿದ್ದಾರೆ. ಬಾಲಕಿಗೆ ಕಿರುಕುಳ ನೀಡಿದ್ದಾನೆ ಎಂದು ಆತನ ವಿರುದ್ಧ ದೂರು ದಾಖಲಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಆತನನ್ನು ಕೂಡಲೇ ರೈಲ್ವೆ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:28 am, Sat, 14 September 24

ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ