Video: ಹಣೆ ಮೇಲೆ ಡಿ ಬಾಸ್‌ ಹೆಸರನ್ನ ಹಚ್ಚೆ ಹಾಕಿಸಿಕೊಂಡ ಅಭಿಮಾನಿ; ವೈರಲ್‌ ಆಯ್ತು ವಿಡಿಯೋ

ಅಭಿಮಾನಿಗಳು ತಮ್ಮ ನೆಚ್ಚಿನ ಸಿನೆಮಾ ತಾರೆಯರು, ರಾಜಕೀಯ ನಾಯಕರ ಚಿತ್ರವನ್ನು ಅಥವಾ ಹೆಸರನ್ನು ಕೈ ಮೇಲೆ, ಎದೆಯ ಮೇಲೆ ಹಚ್ಚೆ ಹಾಕಿಸಿಕೊಳ್ಳುವ ಮೂಲಕ ತಮ್ಮ ಅಭಿಮಾನ, ಪ್ರೀತಿಯನ್ನು ತೋರ್ಪಡಿಸುತ್ತಾರೆ. ಆದ್ರೆ ಇಲ್ಲೊಬ್ಬ ದರ್ಶನ್‌ ಅಭಿಮಾನಿ ತನ್ನ ಹಣೆಯ ಮೇಲೆ ‌ʼಡಿ ಬಾಸ್ʼ ಹೆಸರಿನ ಹಚ್ಚೆಯನ್ನು ಹಾಕಿಸಿಕೊಂಡಿದ್ದಾನೆ. ಈ ವಿಡಿಯೋ ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ಇದೆಂಥಾ ಹುಚ್ಚು ಅಭಿಮಾನ ಎನ್ನುತ್ತಿದ್ದಾರೆ ನೆಟ್ಟಿಗರು.

Video: ಹಣೆ ಮೇಲೆ ಡಿ ಬಾಸ್‌ ಹೆಸರನ್ನ ಹಚ್ಚೆ ಹಾಕಿಸಿಕೊಂಡ ಅಭಿಮಾನಿ; ವೈರಲ್‌ ಆಯ್ತು ವಿಡಿಯೋ
ವೈರಲ್​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 05, 2024 | 5:29 PM

ನಟ ದರ್ಶನ್‌ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಎರಡು ತಿಂಗಳಾಗುತ್ತಾ ಬಂದಿದೆ. ಪರಪ್ಪನ ಅಗ್ರಹಾರಕ್ಕೆ ದರ್ಶನ್‌ ನೋಡಲು ಕುಟುಂಬಸ್ಥರು, ಸ್ನೇಹಿತರು ಬರ್ತಾನೆ ಇದ್ದಾರೆ. ಇನ್ನೂ ದರ್ಶನ್‌ ಅವರ ಕ್ರೇಜ್‌ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಭಿಮಾನಿಗಳು ಡಿಬಾಸ್‌ ಆದಷ್ಟು ಆಚೆ ಬರಲಿ ಎಂದು ಸಿಕ್ಕ ಸಿಕ್ಕ ದೇವರಿಗೆ ಹರಕೆ ಹೊರುತ್ತಿದ್ದಾರೆ. ಇನ್ನೂ ಕೆಲ ಅಭಿಮಾನಿಗಳಂತೂ ದರ್ಶನ್ ಖೈದಿ ಸಂಖ್ಯೆಯನ್ನು ಕೈ, ಕುತ್ತಿಗೆ, ಎದೆ ಭಾಗದಲ್ಲಿ ಹಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ದರ್ಶನ್‌ ಅಭಿಮಾನಿ ಡಿ ಬಾಸ್‌ ಹೆಸರನ್ನು ಹಣೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

ಅಭಿಮಾನಿಗಳು ತಮ್ಮ ನೆಚ್ಚಿನ ಸಿನೆಮಾ ತಾರೆಯರ ಚಿತ್ರವನ್ನು, ಹೆಸರನ್ನು ಕೈ ಮೇಲೆ ಅಥವಾ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದ್ರೆ ಇಲ್ಲೊಬ್ಬ ದರ್ಶನ್‌ ಅಭಿಮಾನಿ ʼಡಿ ಬಾಸ್‌ʼ ಹೆಸರನ್ನು ತನ್ನ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ಈ ಕುರಿತ ಪೋಸ್ಟ್‌ ಒಂದನ್ನು karunada_adhipati_official ಹೆಸರಿನ ಇನ್‌ಸ್ಟಾಗ್ರಾಮ್‌ ಪೇಜ್‌ ಒಂದರಲ್ಲಿ ಹಂಚಿಕೊಳ್ಳಲಾಗಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ (ಎಕ್ಸ್​​ ಖಾತೆ)

ವೈರಲ್‌ ವಿಡಿಯೋದಲ್ಲಿ ನಟ ದರ್ಶನ್‌ ಅವರ ಹುಚ್ಚು ಅಭಿಮಾನಿಯೊಬ್ಬ ತನ್ನ ಹಣೆಯ ಮೇಲೆ ಡಿ ಬಾಸ್‌ ಹೆಸರಿನ ಹಚ್ಚೆ ಹಾಕಿಸಿಕೊಳ್ಳುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ವಿದ್ಯಾದೇಗುಲದಲ್ಲಿ ಇದೆಂತಾ ಅಸಹ್ಯ ಕೃತ್ಯ, ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಕಿಸ್ಸಿಂಗ್‌

ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼತಂದೆ-ತಾಯಿ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳುವುದು ಬಿಟ್ಟು ಇದೆಲ್ಲಾ ಬೇಕಿತ್ತಾʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಯೋಧರ ಹೆಸರನ್ನು ಟ್ಯಾಟೂ ಹಾಕಿದ್ರೆ ನಿನಗೆ ಪುಣ್ಯಾನಾದ್ರೂ ಸಿಕ್ತಿತ್ತು ಕಣಯ್ಯʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದೆಲ್ಲಾ ಶೋಕಿ ಬೇಕಾ?ʼ ಎಂದು ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್