ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿ ಎರಡು ತಿಂಗಳಾಗುತ್ತಾ ಬಂದಿದೆ. ಪರಪ್ಪನ ಅಗ್ರಹಾರಕ್ಕೆ ದರ್ಶನ್ ನೋಡಲು ಕುಟುಂಬಸ್ಥರು, ಸ್ನೇಹಿತರು ಬರ್ತಾನೆ ಇದ್ದಾರೆ. ಇನ್ನೂ ದರ್ಶನ್ ಅವರ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಭಿಮಾನಿಗಳು ಡಿಬಾಸ್ ಆದಷ್ಟು ಆಚೆ ಬರಲಿ ಎಂದು ಸಿಕ್ಕ ಸಿಕ್ಕ ದೇವರಿಗೆ ಹರಕೆ ಹೊರುತ್ತಿದ್ದಾರೆ. ಇನ್ನೂ ಕೆಲ ಅಭಿಮಾನಿಗಳಂತೂ ದರ್ಶನ್ ಖೈದಿ ಸಂಖ್ಯೆಯನ್ನು ಕೈ, ಕುತ್ತಿಗೆ, ಎದೆ ಭಾಗದಲ್ಲಿ ಹಚ್ಚೆ ಹಾಕಿಸಿಕೊಳ್ಳುತ್ತಿದ್ದಾರೆ. ಆದ್ರೆ ಇಲ್ಲೊಬ್ಬ ದರ್ಶನ್ ಅಭಿಮಾನಿ ಡಿ ಬಾಸ್ ಹೆಸರನ್ನು ಹಣೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ಈ ವಿಡಿಯೋ ಇದೀಗ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ಅಭಿಮಾನಿಗಳು ತಮ್ಮ ನೆಚ್ಚಿನ ಸಿನೆಮಾ ತಾರೆಯರ ಚಿತ್ರವನ್ನು, ಹೆಸರನ್ನು ಕೈ ಮೇಲೆ ಅಥವಾ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಳ್ಳುತ್ತಾರೆ. ಆದ್ರೆ ಇಲ್ಲೊಬ್ಬ ದರ್ಶನ್ ಅಭಿಮಾನಿ ʼಡಿ ಬಾಸ್ʼ ಹೆಸರನ್ನು ತನ್ನ ಹಣೆಯ ಮೇಲೆ ಹಚ್ಚೆ ಹಾಕಿಸಿಕೊಂಡಿದ್ದಾನೆ. ಈ ಕುರಿತ ಪೋಸ್ಟ್ ಒಂದನ್ನು karunada_adhipati_official ಹೆಸರಿನ ಇನ್‌ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದೆ.
Darshan fans tattoo craze 🔥 #dboss #darshan #sandalwood#kannada pic.twitter.com/SjBwE2Tukp
— kannada box-office /ಕನ್ನಡ ಬಾಕ್ಸ್ ಆಫೀಸ್ (@kannadaboxoffic) August 4, 2024
ವೈರಲ್ ವಿಡಿಯೋದಲ್ಲಿ ನಟ ದರ್ಶನ್ ಅವರ ಹುಚ್ಚು ಅಭಿಮಾನಿಯೊಬ್ಬ ತನ್ನ ಹಣೆಯ ಮೇಲೆ ಡಿ ಬಾಸ್ ಹೆಸರಿನ ಹಚ್ಚೆ ಹಾಕಿಸಿಕೊಳ್ಳುವ ದೃಶ್ಯವನ್ನು ಕಾಣಬಹುದು.
ಇದನ್ನೂ ಓದಿ: ವಿದ್ಯಾದೇಗುಲದಲ್ಲಿ ಇದೆಂತಾ ಅಸಹ್ಯ ಕೃತ್ಯ, ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿಗಳ ಕಿಸ್ಸಿಂಗ್
ಒಂದು ದಿನದ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 2 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼತಂದೆ-ತಾಯಿ ಹೆಸರನ್ನು ಹಚ್ಚೆ ಹಾಕಿಸಿಕೊಳ್ಳುವುದು ಬಿಟ್ಟು ಇದೆಲ್ಲಾ ಬೇಕಿತ್ತಾʼ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಯೋಧರ ಹೆಸರನ್ನು ಟ್ಯಾಟೂ ಹಾಕಿದ್ರೆ ನಿನಗೆ ಪುಣ್ಯಾನಾದ್ರೂ ಸಿಕ್ತಿತ್ತು ಕಣಯ್ಯʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇದೆಲ್ಲಾ ಶೋಕಿ ಬೇಕಾ?ʼ ಎಂದು ಕೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ