AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video : ಈ ಮಹಿಳಾ ಅಧಿಕಾರಿಯ ಧೈರ್ಯಕ್ಕೆ ಮೆಚ್ಚಲೇಬೇಕು, 18 ಅಡಿ ಉದ್ದದ ಕಿಂಗ್‌ ಕೋಬ್ರಾವನ್ನು ರಕ್ಷಣೆ ಮಾಡಿದ ಲೇಡಿ ಸಿಂಗಂ

ಕೇರಳದ ಪರುತಿಪಲ್ಲಿ ರೇಂಜ್‌ನ ಫಾರೆಸ್ಟ್ ಬೀಟ್ ಆಫೀಸರ್ ರೋಶ್ನಿ ಅವರ ಈ ಧೈರ್ಯವನ್ನು ಮೆಚ್ಚಲೇಬೇಕು. ಇದೀಗ ಈ ಮಹಿಳಾ ಸಿಂಗಂ ಎಲ್ಲಾ ಕಡೆಯಿಂದ ಭಾರೀ ಮೆಚ್ಚುಗೆಯನ್ನು ಪಡೆಯುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಎಲ್ಲರೂ ಕೂಡ ಈ ಮಹಿಳಾ ಅಧಿಕಾರಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಕೇರಳದ ಈ ಅರಣ್ಯಾಧಿಕಾರಿ, 18 ಅಡಿ ಉದ್ದದ ಕಿಂಗ್‌ ಕೋಬ್ರಾವನ್ನು ರಕ್ಷಣೆ ಮಾಡಿದ್ದಾರೆ. ಈ ಬಗೆಗಿನ ವಿಡಿಯೋ.

Video : ಈ ಮಹಿಳಾ ಅಧಿಕಾರಿಯ ಧೈರ್ಯಕ್ಕೆ ಮೆಚ್ಚಲೇಬೇಕು, 18 ಅಡಿ ಉದ್ದದ ಕಿಂಗ್‌ ಕೋಬ್ರಾವನ್ನು ರಕ್ಷಣೆ ಮಾಡಿದ ಲೇಡಿ ಸಿಂಗಂ
ವೈರಲ್​​ ವಿಡಿಯೋ Image Credit source: Twitter
ಸಾಯಿನಂದಾ
|

Updated on: Jul 07, 2025 | 2:05 PM

Share

ಕೇರಳ, ಜುಲೈ 07:  ಕೇರಳದ ( Kerala) ಮಹಿಳಾ ಅಧಿಕಾರಿಯೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​​ ಆಗಿದ್ದಾರೆ. ಅಷ್ಟಕ್ಕೂ ಈ ಲೇಡಿ ಸಿಂಗಂ ಮಾಡಿದ ಕೆಲಸ ಏನು ಗೊತ್ತಾ? ಇಲ್ಲಿದೆ ನೋಡಿ. ಕೇರಳದಲ್ಲಿ ಅರಣ್ಯ ಬೀಟ್ ಅಧಿಕಾರಿಯೊಬ್ಬರು ದೈತ್ಯ ಕಾಳಿಂಗ ಸರ್ಪವನ್ನು (king cobra) ರಕ್ಷಿಸುವ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​​ ಆಗಿದೆ. ಈ ವಿಡಿಯೋವನ್ನು ರಾಜನ್ ಮೇಧೇಕರ್ ತಮ್ಮ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಕೇರಳದ ಪರುತಿಪಲ್ಲಿ ವಲಯದಲ್ಲಿ ಈ ಕಾರ್ಯಾಚರಣೆಯನ್ನು ಅರಣ್ಯ ಬೀಟ್ ಅಧಿಕಾರಿ ಜಿಎಸ್ ರೋಶ್ನಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಪರುತಿಪಲ್ಲಿಯ ಹೊಳೆಯ ಒಂದು ಬದಿಯಲ್ಲಿ ಸಿಲುಕಿಕೊಂಡಿದ್ದ ದೈತ್ಯ ಕಾಳಿಂಗವನ್ನು ಕೋಲು ಬಳಸಿ, ರಕ್ಷಣೆ ಮಾಡಿದ್ದಾರೆ.

ಈ ಬಗ್ಗೆ ವಿಡಿಯೋವನ್ನು ರಾಜನ್ ಮೇಧೇಕರ್ ತಮ್ಮ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಇದರ ಜತೆಗೆ ಹೀಗೆ ಬರೆದುಕೊಂಡಿದ್ದಾರೆ 18 ಅಡಿ ಉದ್ದದ ಕಿಂಗ್‌ ಕೋಬ್ರಾವನ್ನು ಕೇರಳದ ಪರುತಿಪಲ್ಲಿ ರೇಂಜ್‌ನ ಫಾರೆಸ್ಟ್ ಬೀಟ್ ಆಫೀಸರ್ ರೋಶ್ನಿ ನೋಡಿ, ರಕ್ಷಣೆ ಮಾಡಿದ್ದಾರೆ. ಈ ಕಿಂಗ್‌ ಕೋಬ್ರಾ ಕೇರಳದ ತಿರುವನಂತಪುರದ ಪೆಪ್ಪರಾದ ಅಂಚುಮರುತುಮೂಟ್‌ನ ವಸತಿ ಪ್ರದೇಶದಿಂದ ಕಂಡು ಬಂದಿದೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ
Image
ರ‍್ಯಾಂಪ್ ವಾಕ್ ಮಾಡುವಾಗ ಮಾಡೆಲ್‌ಗಳು ನಗುವುದಿಲ್ಲ, ಯಾಕೆ ಗೊತ್ತಾ?
Image
ಈ ಬುಡಕಟ್ಟಿನ ಹೆಣ್ಣು ಮಕ್ಕಳು ತುಟಿಯನ್ನೇ ತೂತು ಮಾಡ್ತಾರೆ? ಯಾಕೆ ಗೊತ್ತಾ?
Image
ಕಂದಮ್ಮನಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಕರೆದುಕೊಂಡು ಬಂದ ತಾಯಿ ಬೆಕ್ಕು
Image
ಚಾಟ್ ಜಿಪಿಟಿ ಸಲಹೆ ಪಡೆದು 30 ದಿನಗಳಲ್ಲಿ ಹತ್ತು ಲಕ್ಷ ಸಾಲ ತೀರಿಸಿದ ಮಹಿಳೆ

ಇದನ್ನೂ ಓದಿ: ಹೇರ್ ಕ್ಲಿಪ್‌, ಚಾಕು ಬಳಸಿ ರೈಲ್ವೆ ನಿಲ್ದಾಣದಲ್ಲಿ ಮಹಿಳೆಗೆ ಹೆರಿಗೆ ಮಾಡಿಸಿದ ಭಾರತೀಯ ಸೇನೆಯ ವೈದ್ಯ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಭೂಮಿಯ ಮೇಲಿನ ಅತ್ಯಂತ ವಿಷಕಾರಿ ಸರೀಸೃಪಗಳಲ್ಲಿ ಕಾಳಿಂಗ ಸರ್ಪ ಒಂದು, ಆದರೆ ಇದನ್ನು ಹಿಡಿಯುವುದು ಅಷ್ಟೊಂದು ಸುಲಭವಲ್ಲ, ಆದರೆ ಮಹಿಳಾ ಅಧಿಕಾರಿ ರೋಶ್ನಿ ಅವರು ಇದಕ್ಕೆ ಯಾವುದೇ ತೊಂದರೆ ಆಗದಂತೆ ಅದನ್ನು ಹಿಡಿದು ರಕ್ಷಣೆ ಮಾಡಿದ್ದಾರೆ. ಇನ್ನು ಕಾರ್ಯಚರಣೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ವೀಡಿಯೊ 54,000 ಕ್ಕೂ ಹೆಚ್ಚು ವೀಕ್ಷಣೆಗಳನ್ನು ಗಳಿಸಿದೆ. ಅನೇಕರು ಈ ಮಹಿಳಾ ಅಧಿಕಾರಿಯ ಕಾರ್ಯಕ್ಕೆ ಬಳಕೆದಾರರೂ ಕಾಮೆಂಟ್ ಮಾಡಿದ್ದಾರೆ. ಅಧಿಕಾರಿ ರೋಶ್ನಿ ಅವರ ಧೈರ್ಯ ಮತ್ತು ತಾಳ್ಮೆಗೆ ನಮ್ಮ ಸಲಾಂ ಎಂದು ಕಾಮೆಂಟ್​ ಮಾಡಿದ್ದಾರೆ. ಒಬ್ಬ ಬಳಕೆದಾರ, ಇದು ಅನೇಕರಿಗೆ ಸ್ಫೂರ್ತಿ ಮೇಡಂ, ನಿಮ್ಮ ಧೈರ್ಯಕ್ಕೆ ಮೆಚ್ಚಲೇಬೇಕು ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರ ಅವರ ಕೌಶಲ್ಯಗಳಿಗೆ ಹ್ಯಾಟ್ಸ್ ಆಫ್ ಎಂದು ಹೇಳಿದ್ದಾರೆ. ಇದು ಉತ್ತಮ ಕೆಲಸ, ಇನ್ನಷ್ಟು ಹೀಗೆ ಕೆಲಸ ಮಾಡುವ ಧೈರ್ಯ ನಿಮ್ಮಲ್ಲಿ ಇರಲಿ ಎಂದು ಹೇಳಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ