Video: ಅಮ್ಮಾ… ಓ ಅಮ್ಮಾ… ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ

ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುವ ಕೆಲವೊಂದು ವಿಡಿಯೋಗಳು ನಿಜಕ್ಕೂ ನಮ್ಮ ಕಣ್ಣಂಚಲ್ಲಿ ನೀರು ತರಿಸುತ್ತವೆ. ಇದೀಗ ಅಂತಹದ್ದೇ ದೃಶ್ಯವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ..... ಓ ಅಮ್ಮಾ.... ಎಂದು ಪುಟ್ಟ ಕಂದಮ್ಮ ರೋಧಿಸುವ ದೃಶ್ಯ ಕರುಳು ಹಿಂಡುವಂತಿದೆ.

Video: ಅಮ್ಮಾ... ಓ ಅಮ್ಮಾ... ತಾಯಿ ಸಮಾಧಿ ಮುಂದೆ ಕರುಳ ಕುಡಿಯ ನೋವಿನ ಆಕ್ರಂದನ
ವೈರಲ್​​ ವಿಡಿಯೋ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 23, 2024 | 12:15 PM

ಮಕ್ಕಳಿಗೆ ತಾಯಿನೇ ಎಲ್ಲಾ. ಈ ತಾಯಿ ನನ್ನೊಂದಿಗೆ ಇನ್ನು ಮುಂದೆ ಇರಲ್ಲ ಅನ್ನೋ ನೋವಿದೆಯಲ್ಲಾ, ಅದನ್ನು ಅರಗಿಸಿಕೊಳ್ಳಲು ಸಾಧ್ಯವಿಲ್ಲ. ತಾಯಿ ಇಲ್ಲದ ಕ್ಷಣವನ್ನು ಕಲ್ಪಿಸಿಕೊಳ್ಳಲು ಕೂಡಾ ಸಾಧ್ಯವಿಲ್ಲ. ತಾಯಿಯನ್ನು ಕಳೆದುಕೊಂಡ ಬಳಿಕ ಯಾರೇ ಬಂದರೂ, ಎಷ್ಟೇ ಕೊಟ್ಟರೂ, ಏನೇ ಮಾಡಿದರೂ ಈ ಅಮ್ಮನ ಸ್ಥಾನವನ್ನು ತುಂಬುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಇದೀಗ ಅದೇ ರೀತಿ ತಾಯಿಯನ್ನು ಕಳೆದುಕೊಂಡು ಅಮ್ಮಾ ಬಾರಮ್ಮ ಎಂದು ರೋಧಿಸುತ್ತಿರುವ ಪುಟ್ಟ ಕಂದಮ್ಮನ ವಿಡಿಯೋವೊಂದು ವೈರಲ್ ಆಗಿದ್ದು, ಹೆತ್ತಮ್ಮನ ಹೆತ್ತಮ್ಮನ ಸಮಾಧಿ ಮುಂದೆ ಕುಳಿತು ಅಮ್ಮಾ….. ಓ ಅಮ್ಮಾ…. ಎಂದು ಆ ಪುಟಾಣಿ ಆಕ್ರಂದಿಸುವ ದೃಶ್ಯ ಕರುಳು ಹಿಂಡುವಂತಿದೆ.

ಈ ಕುರಿತ ಪೋಸ್ಟ್ ಒಂದನ್ನು ಯಶೋಧಾ ಪೂಜಾರಿ (yashodha_poojary_journalist) ಎಂಬವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ವೈರಲ್ ವಿಡಿಯೋದಲ್ಲಿ ಪುಟ್ಟ ಕಂದಮ್ಮ ತನ್ನ ತಾಯಿಯ ಸಮಾಧಿ ಮುಂದೆ ಕುಳಿತು ರೋಧಿಸುತ್ತಿರುವ ದೃಶ್ಯವನ್ನು ಕಾಣಬಹುದು. ತನ್ನ ತಾಯಿಯ ಮರಣದ ನಂತರ, ಈ ಚಿಕ್ಕ ಹುಡುಗ ಅಮ್ಮನ ಸಮಾಧಿಯ ಬಳಿ ಹೋಗಿ, ಪಕ್ಕದಲ್ಲಿಯೇ ಕುಳಿತು ಅಮ್ಮಾ….. ಓ ಅಮ್ಮಾ….. ಎಂದು ನಿರಂತರವಾಗಿ ಕರೆಯುತ್ತಾ ಸಮಾಧಿಯಿಂದ ಎದ್ದು ಬರುವಂತೆ ರೋಧಿಸಿದ್ದಾನೆ. ಈ ದೃಶ್ಯ ಎಂತಹ ಕಲ್ಲು ಹೃದಯವನ್ನು ಕೂಡಾ ಕರಗಿಸುವಂತಿದೆ.

ಇದನ್ನೂ ಓದಿ: ಬೈಕ್ ಚೈನ್​​​ಗೆ ಸಿಲುಕಿದ ದುಪಟ್ಟಾ, ಯುವತಿಯ ರಕ್ಷಣೆಗೆ ಧಾವಿಸಿದ ವ್ಯಕ್ತಿ

ವೈರಲ್​​​ ವಿಡಿಯೋ ಇಲ್ಲಿದೆ ನೋಡಿ:

ಎರಡು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ನಾಲ್ಕುವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ 1 ಲಕ್ಷಕ್ಕೂ ಅಧಿಕ ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಈ ಮನಕಲಕುವ ದೃಶ್ಯವನ್ನು ಕಂಡು ನೋಡುಗರು ಮರುಕ ವ್ಯಕ್ತಪಡಿಸಿದ್ದಾರೆ.

ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಬಟ್ಟೆ ಕದಿಯಲು ರಜತ್ ಪ್ಲ್ಯಾನ್; ಬಾತ್ ರೂಮ್​ನಲ್ಲಿ ಕಣ್ಣೀರು ಹಾಕಿದ ಗೌತಮಿ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಕೊಟ್ಟ ಖರ್ಗೆ ಆಪ್ತ
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
‘ನಾನು ಶಿಸ್ತುಬದ್ಧವಾಗಿ ಆಡಲಿಲ್ಲ’; ಆಸೀಸ್ ಪ್ರವಾಸದ ಬಗ್ಗೆ ಕೊಹ್ಲಿ ಮಾತು
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಚೈತ್ರಾ ಕುಂದಾಪುರ ಯಾವುದಕ್ಕೂ ಲಾಯಕ್ಕಿಲ್ಲ: ಸಾಕ್ಷಿ ಸಮೇತ ವಿವರಿಸಿದ ರಜತ್
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಪ್ರತಾಪ್​ ಸಿಂಹ ಬಕೆಟ್​​ ಹಿಡಿಯುವುದನ್ನು ನಿಲ್ಲಿಸಲಿ: ಬಿಜೆಪಿ ಮುಖಂಡ ಕಿಡಿ
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಕೊಹ್ಲಿ ಜೊತೆಗಿನ ಭುಜಬಲದ ಕಾಳಗದ ಬಗ್ಗೆ ಮೌನ ಮುರಿದ ಕೊನ್​ಸ್ಟಾಸ್
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಆಧುನಿಕ ಗಾಂಧಿಗಳ ಕಟೌಟ್! ಕಾಂಗ್ರೆಸ್ ಅಧಿವೇಶನ ಬಗ್ಗೆ ಕುಮಾರಸ್ವಾಮಿ ವ್ಯಂಗ್ಯ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ಉಗ್ರಂ ಮಂಜು ತಲೆ ಮೇಲೆ ಬಾಟಲಿ ಹೊಡೆದ ಮೋಕ್ಷಿತಾ
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವಾಟ್ ಎ ಬಾಲ್... ಡೇಂಜರಸ್ ಟ್ರಾವಿಸ್ ಹೆಡ್ ಕ್ಲೀನ್ ಬೌಲ್ಡ್
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ
ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿದ್ದರಾಮಯ್ಯ, ಡಿಕೆಶಿ