ಶಾಲೆಯ ತರಗತಿಯಲ್ಲಿ ಹಿಂದಿ ಹಾಡಿಗೆ ಭರ್ಜರಿ ಕುಣಿದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಶಿಕ್ಷಕಿಯರು ಅಮಾನತು

ವಿಡಿಯೋವನ್ನು ಈ ವರ್ಷದ ಮಾರ್ಚ್ 21ರಂದು ರೆಕಾರ್ಡ್ ಮಾಡಲಾಗಿದೆ. ಅದಾಗ್ಯೂ ಈ ವಿಡಿಯೋ ಆನ್​ಲೈನ್​ನಲ್ಲಿ ಕಳೆದ ಗುರುವಾರ ಕಾಣಿಸಿಕೊಂಡಿದೆ. ಈ ನಂತರ ಶಿಕ್ಷಣ ಇಲಾಖೆ ತನಿಖೆಯನ್ನು ಪ್ರಾರಂಭಿಸಿದೆ.

ಶಾಲೆಯ ತರಗತಿಯಲ್ಲಿ ಹಿಂದಿ ಹಾಡಿಗೆ ಭರ್ಜರಿ ಕುಣಿದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ಶಿಕ್ಷಕಿಯರು ಅಮಾನತು
Photo Credit: Twitter
Follow us
TV9 Web
| Updated By: shruti hegde

Updated on: Sep 27, 2021 | 1:14 PM

ತರಗತಿಯಲ್ಲಿ ಚಲಚಿತ್ರ ಹಾಡುಗಳಿಗೆ ನೃತ್ಯ ಮಾಡಿ ವಿಡಿಯೋ ಹರಿ ಬಿಟ್ಟ ಶಿಕ್ಷಕಿಯರನ್ನು ಅಮಾನತುಗೊಳಿಸಲಾಗಿದೆ. ಆಗ್ರಾದ ಸರ್ಕಾರಿ ಪ್ರಥಮಿಕ ಶಾಲೆಯ ಐವರು ಶಿಕ್ಷಕಿಯರನ್ನು ಅನೈತಿಕ ವರ್ತನೆಯಿಂದ ಅಮಾನತುಗೊಳಿಸಲಾಗಿದೆ ಎಂಬ ಮಾಹಿತಿ ವರದಿಗಳಿಂದ ತಿಳಿದು ಬಂದಿದೆ. ವಿಡಿಯೋ ವೈರಲ್ ಆದ ಬಳಿಕ ಸಹಾಯಕ ಶಿಕ್ಷಕಿಯರಾದ ರಶ್ಮಿ ಸಿಸೋಡಿಯಾ, ಜೀವಿಕಾ ಕುಮಾರಿ, ಅಂಜಲಿ ಯಾದವ್, ಸುಮನ್ ಕುಮಾರಿ ಮತ್ತು ಸುಧಾ ರಾಣಿ ಎಂದು ಗುರುತಿಸಲಾಗಿದೆ.

ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ, ವಿಡಿಯೋವನ್ನು ಈ ವರ್ಷದ ಮಾರ್ಚ್ 21ರಂದು ರೆಕಾರ್ಡ್ ಮಾಡಲಾಗಿದೆ. ಅದಾಗ್ಯೂ ಈ ವಿಡಿಯೋ ಆನ್​ಲೈನ್​ನಲ್ಲಿ ಕಳೆದ ಗುರುವಾರ ಕಾಣಿಸಿಕೊಂಡಿದೆ. ಈ ನಂತರ ಶಿಕ್ಷಣ ಇಲಾಖೆ ತನಿಖೆಯನ್ನು ಪ್ರಾರಂಭಿಸಿದೆ.

ಶಿಕ್ಷಕರು ಕುಣಿದ ಹಾಡುಗಳು ಶಿಕ್ಷಣ ನೀಡುವಂಥದ್ದಲ್ಲ. ತರಗತಿಯಲ್ಲಿ ನೃತ್ಯ ಮಾಡುವ ಮೂಲಕ ಶಿಕ್ಷಕರ ಸೇವಾ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಶಿಕ್ಷಣ ಇಲಾಖೆ ಪ್ರತಿಷ್ಠೆಗೆ ಧಕ್ಕೆ ಉಂಟು ಮಾಡುವ ಕೆಲಸವಿದು ಎಂದು ಶಿಕ್ಷಣ ಅಧಿಕಾರಿ (ಬಿಎಸ್ಎ) ಭೃಜರಾಜ್ ಸಿಂಗ್ ಅಮಾನತು ಆದೇಶದಲ್ಲಿ ಹೇಳಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕರಾದ ದಿನೇಶ್​ ಚಂದ್ರ ಪರಿಹಾರ್ ಅವರ ಪ್ರಕಾರ, ವಿಡಿಯೋವನ್ನು ಮಾರ್ಚ್ 17ರಂದು ಚಿತ್ರೀಕರಿಸಲಾಗಿದೆ. ಶೈಕ್ಷಣಿಕ ಕಾರ್ಯಾಗಾರಕ್ಕೆ ಪಾಲ್ಗೊಂಡಿದ್ದರಿಂದ ನಾನು ಆ ದಿನ ಶಾಲೆಯಲ್ಲಿರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ನಾಲ್ಕು ಶಿಕ್ಷಕರು ಸಲ್ಲಿಸಿದ ಸ್ಪಷ್ಟೀಕರಣವು ತೃಪ್ತಿಕರವಾಗಿರಲಿಲ್ಲ. ಶಿಕ್ಷಣ ಇಲಾಖೆಗೆ ಧಕ್ಕೆ ತಂದಿದ್ದಕ್ಕಾಗಿ ಅವರನ್ನು ಅಮಾನತುಗೊಳಿಸಲಾಗಿದೆ. ಅವರ ನಡವಳಿಕೆಯು ಅನೈತಿಕವಾಗಿತ್ತು. ತರಗತಿಯಲ್ಲಿ ಶಾಲಾ ಸಮಯದಲ್ಲಿ ಅವರು ಈ ರೀತಿಯಾಗಿ ವರ್ತಿಸಬಾರದಿತ್ತು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:

Viral Video: ಎಲ್ಲೆಡೆ ಸಖತ್ ಸದ್ದು ಮಾಡ್ತಿದೆ ಈ ‘ದೇಸಿ ಮೈಕಲ್ ಜಾಕ್ಸನ್’ ನೃತ್ಯ; ವಿಡಿಯೊ ನೋಡಿ

Viral News: ಹೆಣ್ಣು ಮಗು ಹುಟ್ಟಿದ ಸಂತೋಷಕ್ಕೆ 40,000 ರೂ. ಖರ್ಚು ಮಾಡಿ ಉಚಿತವಾಗಿ ಊರಿಗೆಲ್ಲಾ ಪಾನಿ ಪುರಿ ಹಂಚಿದ ವ್ಯಾಪಾರಿ!

(Agra teachers dance in school class room teacher suspended after video goes viral)

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ