AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AI Teacher: ನ್ಯೂಸ್ ಆ್ಯಂಕರ್ ಆಯ್ತು, ಈಗ ಶಾಲೆಗೆ ಬಂದ್ರು ಐರಿಸ್ ಮೇಡಂ: ರೋಬೋಟ್ ಟೀಚರ್ ಬಗ್ಗೆ ತಿಳಿಯಿರಿ

ಆರ್ಟಿಫೀಶಿಯಲ್ ಇಂಟೆಲಿಜನ್ಸ್ ನಮ್ಮ ಜೀವನದ ಭಾಗವಾಗಿಬಿಟ್ಟಿದೆ. ಕೃತಕ ಬುದ್ಧಿಮತ್ತೆಯ ತಂತ್ರಜ್ಞಾನ ಅನೇಕ ಕ್ಷೇತ್ರಗಳಿಗೆ ಕಾಲಿಟ್ಟಿದೆ. ಈ ಹಿಂದೆ ಎ.ಐ ನ್ಯೂಸ್ ಆಂಕರ್ ಲೀಸಾ ಕುರಿತ ಸುದ್ದಿಗಳು ಭಾರಿ ಸದ್ದು ಮಾಡಿತ್ತು. ಇದೀಗ ಶಿಕ್ಷಣ ಕ್ಷೇತ್ರಕ್ಕೂ ಈ ಎ.ಐ ತಂತ್ರಜ್ಞಾನ ಕಾಲಿಟ್ಟಿದ್ದು, ದೇಶದಲ್ಲಿ ಇದೇ ಮೊದಲ ಬಾರಿಗೆ ಕೇರಳದ ತಿರುವನಂತಪುರದಲ್ಲಿರುವ ಶಾಲೆಯೊಂದು ಮಕ್ಕಳಿಗೆ ಪಾಠ ಕಲಿಸಲು ಎ.ಐ ರೋಬೋಟ್ ಶಿಕ್ಷಕಿಯನ್ನು ನೇಮಕ ಮಾಡಿದೆ. ಈ ಸುದ್ದಿ ಇದೀಗ ಭಾರಿ ವೈರಲ್ ಆಗಿದೆ.

AI Teacher: ನ್ಯೂಸ್ ಆ್ಯಂಕರ್ ಆಯ್ತು, ಈಗ ಶಾಲೆಗೆ ಬಂದ್ರು ಐರಿಸ್ ಮೇಡಂ: ರೋಬೋಟ್ ಟೀಚರ್ ಬಗ್ಗೆ ತಿಳಿಯಿರಿ
AI TeacherImage Credit source: instagram
ಮಾಲಾಶ್ರೀ ಅಂಚನ್​
| Edited By: |

Updated on: Mar 06, 2024 | 6:49 PM

Share

ಕೃತಕ ಬುದ್ಧಿ ಮತ್ತೆಯ ಕ್ಷೇತ್ರವು ನಿರಂತರವಾಗಿ ಪ್ರಗತಿಯಲ್ಲಿದೆ. ಪ್ರತಿದಿನ ಈ ಕ್ಷೇತ್ರದಲ್ಲಿ ಹೊಸ ಹೊಸ ಬದಲಾವಣೆಗಳು ಆಗುತ್ತಿವೆ. ಭಾರತದಲ್ಲಿಯೂ ಈ ಕ್ಷೇತ್ರದಲ್ಲಿ ನಿರಂತರ ಪ್ರಯೋಗಗಳನ್ನು ಮಾಡಲಾಗುತ್ತಿದೆ. ಈ ಹಿಂದೆ ಸುದ್ದಿ ಮಾಧ್ಯಮಕ್ಕೆ ಕಾಲಿಟ್ಟ ಎ.ಐ ನ್ಯೂಸ್ ಆ್ಯಂಕರ್​​ ಲೀಸಾ ಕುರಿತ ಸುದ್ದಿಗಳು ಭಾರಿ ಸದ್ದು ಮಾಡಿತ್ತು. ಇದೀಗ ಭಾರತದಲ್ಲಿ ಶಿಕ್ಷಣ ಕ್ಷೇತ್ರದಲ್ಲಿಯೂ ಕೃತಕ ಬುದ್ಧಿಮತ್ತೆ ತನ್ನ ಪ್ರಾಬಲ್ಯವನ್ನು ಸಾಧಿಸಲು ಆರಂಭಿಸಿದೆ. ಹೌದು ಇದೀಗ ಕೇರಳದ ತಿರುವನಂತಪುರದ ಕೆಟಿಸಿಟಿ ಹೈಯರ್ ಸೆಕೆಂಡರಿ ಶಾಲೆಗೆ ಮಕ್ಕಳಿಗೆ ಪಾಠ ಮಾಡಲು ಚಂದವಾಗಿ ಸೀರೆಯುಟ್ಟು AI ಶಿಕ್ಷಕಿ ʼಐರಿಸ್ʼ ಎಂಟ್ರಿ ಕೊಟ್ಟಿದ್ದಾರೆ. ಈ ಕುರಿತ ಸುದ್ದಿಯೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗುತ್ತಿದೆ.

ಶಿಕ್ಷಣದಲ್ಲಿ ಮುಂದುವರೆದಿರುವ ಕೇರಳವು ಜನರೇಟಿವ್ ಎಐ ಟೀಚರ್ ʼಐರಿಸ್ʼ ಅನ್ನು ಪರಿಚಯಿಸುವ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಮತ್ತೊಂದು ವಿನೂತನ ಹೆಜ್ಜೆ ಇಟ್ಟಿದೆ. ಮೇಕರ್ ಲ್ಯಾಬ್ಸ್ ಎಜುಟೆಕ್ ಫ್ರೈವೆಟ್ ಲಿಮಿಟೆಡ್ ನ ಸಹಯೋಗದೊಂದಿಗೆ ಅಭಿವೃದ್ಧಿ ಪಡಿಸಲಾದ ಐರಿಸ್ ಟೀಚರನ್ನು ಶಾಲೆಗಳಲ್ಲಿ ಪಠ್ಯೇತರ ಚಟುವಟಿಕೆಗಳನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾಗಿದೆ. ಐರಿಸ್ ಮೂರು ಭಾಷೆಗಳನ್ನು ಮಾತನಾಡುವ ಸಾಮಾರ್ಥ್ಯವನ್ನು ಹೊಂದಿದ್ದು, ಸಂವಾದಾತ್ಮಕ ಕಲಿಕೆ, ಕುಶಲ ಸಾಮರ್ಥ್ಯಗಳು ಮತ್ತು ಚಲನಶೀಲತೆ ಸೇರಿದಂತೆ ವಿವಿಧ ವೈಶಿಷ್ಟ್ಯಗಳೊಂದಿಗೆ ವಿದ್ಯಾರ್ಥಿಗಳ ಕಷ್ಟಕರವಾದ ಪ್ರಶ್ನೆಗಳಿಗೂ ಉತ್ತರಿಸಬಲ್ಲ ಸಾಮಾರ್ಥ್ಯವನ್ನು ಹೊಂದಿದೆ.

ಐರಿಸ್ ಹೇಗೆ ಕೆಲಸ ಮಾಡುತ್ತದೆ?

ಹೊಸ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ತಂತ್ರಜ್ಞಾನದೊಂದಿಗೆ ರಚಿಸಲಾದ ಈ AI ಜನರೇಟಿವ್ ಶಿಕ್ಷಕಿ ಮನುಷ್ಯರಂತೆ ಮಾತನಾಡುವ, ಇತರೆ ಶಿಕ್ಷಕರಂತೆ ಮಕ್ಕಳಿಗೆ ಉತ್ತಮವಾಗಿ ಪಾಠ ಮಾಡುವ, ಮಕ್ಕಳ ಪ್ರಶ್ನೆಗಳಿಗೆ ಉತ್ತರಿಸುವ ಮತ್ತು ಮಕ್ಕಳಿಗೆ ಪ್ರೋತ್ಸಾಹವನ್ನು ನೀಡುವ ಸಾಮರ್ಥ್ಯವನ್ನು ಹೊಂದಿದೆ. ಮೇಕರ್ ಲ್ಯಾಬ್ ಪ್ರಕಾರ, ಶಾಲೆಗಳಲ್ಲಿ ವಿದ್ಯಾರ್ಥಿಗಳ ಪಠ್ಯೇತರ ಚಟುವಟಿಕೆಗಳನ್ನು ಹೆಚ್ಚಿಸಲು 2021 ರ NITI ಆಯೋಗ್ ಪ್ರಾರಂಭಿಸಿದ ಅಟಲ್ ಟಿಂಕರಿಂಗ್ ಲ್ಯಾಬ್ (ATL) ನ ಯೋಜನೆಯಡಿಯಲ್ಲಿ ಐರಿಸ್ ಅನ್ನು ತಯಾರಿಸಲಾಗಿದೆ.

ವರದಿಗಳ ಪ್ರಕಾರ, ಐರಿಸ್ ಮೂರು ಭಾಷೆಗಳಲ್ಲಿ ಮಾತನಾಡಬಲ್ಲದು ಮತ್ತು ವಿದ್ಯಾರ್ಥಿಗಳ ಕಷ್ಟಕರ ಪ್ರಶ್ನೆಗಳಿಗೆ ಉತ್ತರಿಸಬಲ್ಲದು. ಚಾಟ್ಜಿಪಿಟಿಯಂತಹ ಪ್ರೋಗ್ರಾಮಿಂಗ್ ನಿಂದ ನಿರ್ಮಿಸಲಾದ ಐರಿಸ್ ನ ಜ್ಞಾನದ ಮೂಲ ಇತರೆ ಸ್ವಯಂ ಚಾಲಿತ ಕಲಿಕ ಸಾಧನಗಳಿಗಿಂತ ಹೆಚ್ಚು ವಿಶಾಲವಾಗಿದೆ.

ಇದನ್ನೂ ಓದಿ: Mental Abuse: ಫಸ್ಟ್ ನೈಟ್‌ ದಿನದಿಂದಲೇ ಗಂಡು ಮಗು ಹೆರುವಂತೆ ಅತ್ತೆ ಮಾವನಿಂದ ಕಿರುಕುಳ; ಕೋರ್ಟ್​​​ ಮೆಟ್ಟಿಲೇರಿದ ಯುವತಿ

ಈ ಕುರಿತ ವಿಶೇಷ ವಿಡಿಯೋವೊಂದನ್ನು ಮೇಕರ್ ಲ್ಯಾಬ್ಸ್ (@makerlabs_official) ತನ್ನ ಅಧೀಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಹಂಚಿಕೊಂಡಿದ್ದು, ಶಿಕ್ಷಣದ ಗಡಿಯನ್ನು ದಾಟಿ: ಭಾರತದ ಮೊದಲ ಎಐ ರೋಬೋಟ್ ಟೀಚರ್ ʼಐರಿಸ್ʼ ಅನ್ನು ಪರಿಚಯಿಸಲು ನಮಗೆ ಹೆಮ್ಮೆಯಾಗುತ್ತಿದೆ; ಮಕ್ಕಳ ಕಲಿಕಾ ಸಾಮಾರ್ಥ್ಯವನ್ನು ಹೆಚ್ಚಿಸಲು, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತ್ರಿಯನ್ನು ಮಾಡಲು AI ಶಕ್ತಿಯನ್ನು ಬಳಸಲು ಹೊರಟಿದ್ದೇವೆ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಚೆಂದವಾಗಿ ಸೀರೆಯುಟ್ಟು ಬಂದಂತಹ ಐರಿಸ್ ಟೀಚರ್ ವಿದ್ಯಾರ್ಥಿಗಳಿಗೆ ಶೇಕ್ ಹ್ಯಾಂಡ್ ಮಾಡುತ್ತಾ ವಿದ್ಯಾರ್ಥಿಗಳನ್ನು ಪರಿಚಯ ಮಾಡುತ್ತಿರುವ ದೃಶ್ಯವನ್ನು ಕಾಣಬಹುದು.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ