ಕೋವಿಡ್-19 ಲಸಿಕೆ ಅಡ್ಡ ಪರಿಣಾಮದಿಂದ ನನ್ನ ಮಗಳು ಸಾವನ್ನಪಿದ್ದಾಳೆ ಎಂದು ಆರೋಪಿಸಿ; 1000 ಕೋಟಿ ರೂ. ಪರಿಹಾರ ಕೋರಿದ ವ್ಯಕ್ತಿ

ಅರ್ಜಿದಾರರಾದ ದಿಲೀಪ್ ಲುನಾವತ್ ಅವರು ನಾಸಿಕ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ತಮ್ಮ ಮಗಳು ಸ್ನೇಹಲ್‌ಗೆ ಲಸಿಕೆಯ ಎರಡೂ ಡೋಸ್‌ಗಳನ್ನು ನೀಡಲಾಯಿತು.

ಕೋವಿಡ್-19 ಲಸಿಕೆ ಅಡ್ಡ ಪರಿಣಾಮದಿಂದ ನನ್ನ ಮಗಳು ಸಾವನ್ನಪಿದ್ದಾಳೆ ಎಂದು ಆರೋಪಿಸಿ; 1000 ಕೋಟಿ ರೂ. ಪರಿಹಾರ ಕೋರಿದ ವ್ಯಕ್ತಿ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on: Feb 04, 2022 | 8:16 AM

ಔರಂಗಾಬಾದ್ ನಿವಾಸಿಯೊಬ್ಬರು ಮಹಾರಾಷ್ಟ್ರ ಸರ್ಕಾರ, ಸೆಂಟರ್ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ 1000 ಕೋಟಿ ರೂಪಾಯಿ ಪರಿಹಾರವನ್ನು ಕೋರಿ ಬಾಂಬೆ ಹೈಕೋರ್ಟ್‌ಗೆ ಮೊರೆ ಹೋಗಿರುವಂತಹ ಘಟನೆ ನಡೆದಿದೆ. ವೈದ್ಯಕೀಯ ವಿದ್ಯಾರ್ಥಿನಿಯಾಗಿದ್ದ ನನ್ನ ಮಗಳು ಕಳೆದ ವರ್ಷ ಜನವರಿಯಲ್ಲಿ ನೀಡಿದ ಕೋವಿಶೀಲ್ಡ್ (Covishield vaccine) ಲಸಿಕೆಯ ಅಡ್ಡ ಪರಿಣಾಮದಿಂದ ಸಾವನ್ನಪ್ಪಿದ್ದಾಳೆ ಎಂದು ಔರಂಗಾಬಾದ್ ನಿವಾಸಿಯೊಬ್ಬರು ಹೇಳಿಕೊಂಡಿದ್ದಾರೆ. ಕಳೆದ ವಾರ ಹೈಕೋರ್ಟ್‌ನ ಪ್ರಧಾನ ಪೀಠದ ಮುಂದೆ ಅರ್ಜಿ ಸಲ್ಲಿಸಿರುವ ಅರ್ಜಿದಾರ ದಿಲೀಪ್ ಲುನಾವತ್, ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕುವ ರಾಜ್ಯ ಸರ್ಕಾರದ ಉಪಕ್ರಮದ ಭಾಗವಾಗಿ ನಾಸಿಕ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯಾಗಿರುವ ನನ್ನ ಮಗಳು ಸ್ನೇಹಲ್‌ಗೆ ಲಸಿಕೆಯ ಎರಡೂ ಡೋಸ್‌ಗಳನ್ನು ನೀಡಲಾಗಿತ್ತು.

ಕೋವಿಡ್ ಲಸಿಕೆ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಮತ್ತು ದೇಹಕ್ಕೆ ಯಾವುದೇ ಅಪಾಯ ಅಥವಾ ಅಡ್ಡ ಪರಿಣಾಮ ಉಂಟುಮಾಡುವುದಿಲ್ಲ ಎಂದು ಸ್ನೇಹಲ್ ಅವರಿಗೆ ಭರವಸೆ ನೀಡಲಾಗಿತ್ತು. ಆದ್ದರಿಂದ ಅವರು ಆರೋಗ್ಯ ಕಾರ್ಯಕರ್ತೆಯಾಗಿದ್ದರಿಂದ ಕಾಲೇಜಿನಲ್ಲಿ ಲಸಿಕೆ ತೆಗೆದುಕೊಳ್ಳಲು ಒತ್ತಾಯಿಸಲಾಯಿತು” ಎಂದು ಮನವಿಯಲ್ಲಿ ತಿಳಿಸಿದ್ದಾರೆ.  ಡ್ರಗ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ), ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಎಐಐಎಂಎಸ್), ಮಹಾರಾಷ್ಟ್ರ ಸರ್ಕಾರ ಮತ್ತು ಒಕ್ಕೂಟದ ನಿರ್ದೇಶಕರು ಸೃಷ್ಟಿಸಿದ ಸುಳ್ಳು ನಿರೂಪಣೆಗಳಿಂದಾಗಿ ತಮ್ಮ ಮಗಳಂತಹ ಆರೋಗ್ಯ ಕಾರ್ಯಕರ್ತರು ಲಸಿಕೆ ತೆಗೆದುಕೊಳ್ಳುವಂತೆ ಒತ್ತಾಯಿಸಿದ್ದಾರೆ ಎಂದು ಲುನಾವತ್ ಮನವಿ ಮಾಡಿದ್ದಾರೆ. ಲಸಿಕೆ ಹಾಕಿಸಿಕೊಳ್ಳುವದು ಸುರಕ್ಷಿತ ಎಂದು ಸರ್ಕಾರ ಹೇಳಿದೆ. ಅವರ ಮಗಳು ಜನವರಿ 28, 2021 ರಂದು ಲಸಿಕೆಯನ್ನು ತೆಗೆದುಕೊಂಡಿದ್ದು, ಆ ಲಸಿಕೆಗಳ ಅಡ್ಡಪರಿಣಾಮಗಳಿಂದಾಗಿ ಕೆಲವು ವಾರಗಳ ನಂತರ ಅಂದರೇ ಮಾರ್ಚ್ 1 ರಂದು ನಿಧನರಾದರು ಎಂದು ಅವರು ಹೇಳಿದ್ದಾರೆ.

2021 ರ ಅಕ್ಟೋಬರ್ 2 ರಂದು ಕೇಂದ್ರ ಸರ್ಕಾರದ AEFI ಸಮಿತಿಯು ಕೋವಿಶೀಲ್ಡ್ ಲಸಿಕೆಯ ಅಡ್ಡ ಪರಿಣಾಮಗಳಿಂದ ನನ್ನ ಮಗಳ ಸಾವು ಸಂಭವಿಸಿದೆ ಎಂದು ಲುನಾವತ್ ಅವರು ಹೇಳಿಕೊಂಡಿದ್ದಾರೆ. ನನ್ನ ಮಗಳಿಗೆ ನ್ಯಾಯ ಒದಗಿಸಲು ಮತ್ತು ಪ್ರತಿವಾದಿ ಅಧಿಕಾರಿಗಳ ಇಂತಹ ಕಾನೂನುಬಾಹಿರ ಚಟುವಟಿಕೆಗಳಿಂದ ಕೊಲೆಯಾಗುವ ಸಾಧ್ಯತೆಯಿರುವ ಇನ್ನೂ ಹೆಚ್ಚಿನ ಜನರ ಜೀವವನ್ನು ಉಳಿಸುವ ಸಲುವಾಗಿ ಈ ಅರ್ಜಿಯನ್ನು ಸಲ್ಲಿಸುತ್ತಿದ್ದೇನೆ ಎಂದು ಮನವಿಯಲ್ಲಿ ಹೇಳಿದ್ದಾರೆ. ಮಹಾರಾಷ್ಟ್ರ ಮತ್ತು ಕೇಂದ್ರ ಸರ್ಕಾರಗಳು, ಲಸಿಕೆ ತಯಾರಕ ಸೆರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾ ಮತ್ತು ಬಿಲ್ ಗೇಟ್ಸ್ ಪ್ರತಿವಾದಿ ಪಕ್ಷಗಳನ್ನು ಮಾಡಿದ ಮನವಿಯ ವಿಚಾರಣೆಯ ದಿನಾಂಕವನ್ನು ಹೈಕೋರ್ಟ್ ಇನ್ನೂ ನಿಗದಿಪಡಿಸಿಲ್ಲ.

(ಈ ಮೇಲಿನ ಮಾಹಿತಿಗಳು ಟಿವಿ9 ಡಿಜಿಟಲ್​ನ ಅಭಿಪ್ರಾಯವಾಗಿರುವುದಿಲ್ಲ. ಡಿಎನ್​ಎ ವೆಬ್​ಸೈಟ್ ವರದಿಯನ್ನು ಆಧರಿಸಿ ಮಾಹಿತಿ ನೀಡಲಾಗಿರುತ್ತದೆ.)

ಇದನ್ನೂ ಓದಿ;

Viral News: ಕಪ್ಪು ಕಣ್ಣು, ಕೊಂಬು, ಅರ್ಧ ಕಿವಿ: ಇದು ರಾಕ್ಷಸನ ಅವತಾರವಂತೆ..!

ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್