AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಯುದ್ಧದ ನಡುವೆಯು ನಾಟು ನಾಟು ಹಾಡಿಗೆ ಸಖತ್​​ ಡ್ಯಾನ್ಸ್​​​ ಮಾಡಿದ ಉಕ್ರೇನ್ ಸೈನಿಕರು

ಉಕ್ರೇನ್​​​ನ ಸೈನಿಕರ ತಂಡ ಆರ್.ಆರ್.ಆರ್ ಚಲನಚಿತ್ರದ ಆಸ್ಕರ್ ಪ್ರಶಸ್ತಿ ವಿಜೇತ ಹಾಡು ನಾಟು ನಾಟು ಹಾಡಿಗೆ ಡಾನ್ಸ್ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.

Viral Video: ಯುದ್ಧದ ನಡುವೆಯು ನಾಟು ನಾಟು ಹಾಡಿಗೆ ಸಖತ್​​ ಡ್ಯಾನ್ಸ್​​​ ಮಾಡಿದ ಉಕ್ರೇನ್ ಸೈನಿಕರು
ವೈರಲ್ ವೀಡಿಯೊ
ಮಾಲಾಶ್ರೀ ಅಂಚನ್​
| Edited By: |

Updated on: Jun 05, 2023 | 10:45 AM

Share

ಬ್ಲಾಕ್ ಬ್ಲಸ್ಟರ್ ತೆಲುಗು ಚಲನಚಿತ್ರ ಆರ್.ಆರ್.ಆರ್ ಸಿನಿಮಾದ ಆಸ್ಕರ್ ಪ್ರಶಸ್ತಿ ವಿಜೇತ ಹಾಡು ನಾಟು ನಾಟು ಬಿಡುಗಡೆಯಾಗಿ ವರ್ಷವೇ ಕಳೆದರೂ ಈ ಹಾಡಿನ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ಸಾಮಾಜಿಕ ಜಾಲತಾಣದಲ್ಲಂತೂ ಜಾಗತಿಕವಾಗಿ ಸದ್ದು ಮಾಡಿರುವ ಈ ಹಾಡಿನದ್ದೇ ಹವಾ. ಪ್ರಪಂಚದಾತ್ಯಂತ ಅದೆಷ್ಟೋ ಜನರು ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿರುವ ರೀಲ್ಸ್ ವೀಡಿಯೋಗಳು ವೈರಲ್ ಆಗಿವೆ. ಇದೀಗ ಉಕ್ರೇನ್ ಸೈನಿಕರು ನಾಟು ನಾಟು ಹಾಡಿಗೆ ಹೆಜ್ಜೆ ಹಾಕಿದ್ದು, ಸೈನಿಕರ ಡಾನ್ಸ್ ವೀಡಿಯೋ ಟ್ವಿಟರ್ ನಲ್ಲಿ ಬಾರಿ ಸದ್ದು ಮಾಡುತ್ತಿದ್ದು, ನೋಡುಗರ ಮೆಚ್ಚುಗೆಗೆ ಪಾತ್ರವಾಗಿದೆ.

ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿರುವ ವೀಡಿಯೋದಲ್ಲಿ, ಉಕ್ರೇನ್ ಸೈನಿಕರು ಮೂಲತಃ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಹೆಜ್ಜೆ ಹಾಕಿರುವ ನಾಟು ನಾಟು ಹಾಡನ್ನು ಮರುಸೃಷ್ಟಿಸಿರುವುದನ್ನು ಕಾಣಬಹುದು. ಮೂಲ ಸಂಗೀತ ವೀಡಿಯೋದಲ್ಲಿ ಇಬ್ಬರು ನಟರು ಬ್ರಿಟೀಷರ ವಿರುದ್ಧ ಪ್ರದರ್ಶನ ಮಾಡುವ ಹಾಡು, ಉಕ್ರೇನ್ ಸೈನಿಕರು ರಷ್ಯಾದ ಆಕ್ರಮಣದ ವಿರುದ್ಧ ಈ ಡಾನ್ಸ್ ಪ್ರದರ್ಶನವನ್ನು ನೀಡಿದರು.

ಉಕ್ರೇನ್​​​​ನ ಲಿಬರಲ್ ಡೆಮಾಕ್ರಟಿಕ್ ಲೀಗ್​​​ನ ಉಪಾದ್ಯಕ್ಷ ಜೇನ್ ಫೆಡೋಟೋವಾ ಅವರು ಟ್ವಿಟರ್​​ನಲ್ಲಿ ಈ ವೀಡಿಯೋವನ್ನು ಹಂಚಿಕೊಂಡಿದ್ದು, 621.1 ಸಾವಿರ ವೀಕ್ಷಣೆಗಳನ್ನು ಹಾಗೂ 6.8 ಸಾವಿರ ಲೈಕ್ಸ್​​​​ಗಳನ್ನು ಪಡೆದುಕೊಂಡಿದೆ. ಹಾಗೂ ಹಲವಾರು ಕಮೆಂಟ್ಸ್ ಗಳೂ ಹರಿದುಬಂದಿವೆ.

ಇದನ್ನೂ ಓದಿ:ಸಫಾರಿ ಜೀಪನ್ನು ಅಟ್ಟಿಸಿಕೊಂಡುಬಂದ ಕಾಡಾನೆ, ರಿವರ್ಸ್​ ಗೇರ್​ನಲ್ಲೇ ಜೀಪ್ ಚಲಾಯಿಸಿದ ಚಾಲಕ: ವಿಡಿಯೋ ವೈರಲ್

ಒಬ್ಬ ಬಳಕೆದಾರರು ‘ಸೈನಿಕರು ಆರ್.ಆರ್.ಆರ್ ಚಲನಚಿತ್ರದ ನಾಟು ನಾಟು ಹಾಡಿನ ಮರು ಸೃಷ್ಟಿ ಮಾಡಿರುವುದನ್ನು ನೊಡಲು ಅದ್ಭುತವಾಗಿದೆ’ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಉಕ್ರೇನ್ ರಷ್ಯಾ ಯುದ್ಧದ ನಡುವೆ ಉಕ್ರೇನ್ ನ ಮಿಲಿಟರಿ ಸನ್ನಿವೇಶಕ್ಕೆ ನಾಟು ನಾಟು ಹಾಡಿನ ಅದ್ಭುತ ರೂಪಾಂತರ’ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ‘ಎರಡೂ ದೇಶಗಳು ಶಾಂತಿಯುತ ಮಾತುಕತೆ ಪುನರಾರಂಭಿಸಬೇಕು. ಯುದ್ಧದಲ್ಲಿ ಏನು ಇಲ್ಲ. ಅಮಾಯಕ ಮನುಷ್ಯರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ, ಎರಡೂ ದೇಶಗಳು ಉತ್ತಮವಾಗಿದೆ ಎಂದು ಹೇಳಿದ್ದಾರೆ.

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವರು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್