AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಫ್ಯಾಮಿಲಿ ರೆಸ್ಟೋರೆಂಟ್​​​ನಲ್ಲಿ ಬಿಗ್ ಫೈಟ್, ಕಾರಣ ಏನು ಗೊತ್ತಾ? ಇಲ್ಲಿದೆ ವಿಡಿಯೋ ವೈರಲ್

ಕ್ಷುಲ್ಲಕ ಕಾರಣಕ್ಕೆ ಗ್ರಾಹಕರು ಅಥವಾ ರೆಸ್ಟೋರೆಂಟ್ ಸಿಬ್ಬಂದಿಗಳ ನಡುವೆ ಜಗಳ ನಡೆಯುವುದನ್ನು ನೋಡಿರಬಹುದು. ಕೆಲವೊಮ್ಮೆ ಇದೇ ಜಗಳಗಳು ತಾರಕಕ್ಕೇರಿ ಹೊಡೆದಾಟದ ಹಂತಕ್ಕೂ ತಲುಪಬಹುದು. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ರೆಸ್ಟೋರೆಂಟ್‌ನಲ್ಲಿ ಇಬ್ಬರು ವ್ಯಕ್ತಿಗಳು ಪರಸ್ಪರ ಮನಬಂದಂತೆ ಹೊಡೆದಾಡಿಕೊಂಡಿದ್ದಾರೆ. ಹೌದು, ಈ ಜಗಳದ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಾಮೆಂಟ್ ಗಳ ಸುರಿಮಳೆಗೈದಿದ್ದಾರೆ.

ಫ್ಯಾಮಿಲಿ ರೆಸ್ಟೋರೆಂಟ್​​​ನಲ್ಲಿ ಬಿಗ್ ಫೈಟ್, ಕಾರಣ ಏನು ಗೊತ್ತಾ? ಇಲ್ಲಿದೆ ವಿಡಿಯೋ ವೈರಲ್
ವೈರಲ್​​ ವಿಡಿಯೋ
ಸಾಯಿನಂದಾ
| Edited By: |

Updated on: May 14, 2025 | 3:55 PM

Share

ಈಗಿನ ಕಾಲದಲ್ಲಿ ಸಾರ್ವಜನಿಕ ಸ್ಥಳ (public place) ಗಳಲ್ಲಿ ಕೆಲವರಿಗೆ ಹೇಗೆ ವರ್ತಿಸಬೇಕು ಎಂದು ತಿಳಿದಿರುವುದಿಲ್ಲ. ಹೀಗಾಗಿ ಕ್ಷುಲ್ಲಕ ಕಾರಣಕ್ಕಾಗಿ ಕೆಲವರು ಎಲ್ಲೆಂದರಲ್ಲಿ ಜಗಳ ಕ್ಕೆ ಇಳಿರುತ್ತಾರೆ. ಸಣ್ಣ ಸಣ್ಣ ವಿಷಯಗಳನ್ನು ದೊಡ್ಡದು ಮಾಡುತ್ತಾರೆ. ಸೋಶಿಯಲ್ ಮೀಡಿಯಾದಲ್ಲಿ ಈ ಜಗಳಕ್ಕೆ ಸಂಬಂಧ ಪಟ್ಟ ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ರತ್ನಸಂಗರ್ ಫ್ಯಾಮಿಲಿ ರೆಸ್ಟೋರೆಂಟ್ (ratnasangar family restaurant) ನಲ್ಲಿ ವ್ಯಕ್ತಿಗಳಿಬ್ಬರೂ ಮನಸ್ಸೋ ಇಚ್ಛೆ ಬಂದಂತೆ ಕಿತ್ತಾಡಿಕೊಂಡಿದ್ದಾರೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ಬಳಕೆದಾರರು ನಾನಾ ರೀತಿಯ ಪ್ರತಿಕ್ರಿಯೆ ನೀಡಿದ್ದಾರೆ.

@gharkekalesh ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಈ ವಿಡಿಯೋದ ಪ್ರಾರಂಭದಲ್ಲಿ ರೆಸ್ಟೋರೆಂಟ್ ನಲ್ಲಿ ಇಬ್ಬರೂ ವ್ಯಕ್ತಿಗಳು ಪರಸ್ಪರ ಕಿತ್ತಾಡಿಕೊಳ್ಳುತ್ತಿರುವುದನ್ನು ಕಾಣಬಹುದು. ಅಲ್ಲೇ ಇದ್ದ ಜನರು ಈ ಜಗಳವನ್ನು ಬಿಡಿಸಲು ಮುಂದಾಗಿದ್ದಾರೆ. ಆದರೆ ಈ ವ್ಯಕ್ತಿಗಳು ಪರಸ್ಪರ ಹೊಡೆದಾಡಿಕೊಳ್ಳುತ್ತಿರುವುದು ಮಾತ್ರ ನಿಂತಿಲ್ಲ.

ಇದನ್ನೂ ಓದಿ
Image
ಮಹಾಭಾರತ ಕಾಲದಲ್ಲಿ ಅಖಂಡ ಭಾರತ ಹೇಗಿತ್ತು ಗೊತ್ತಾ?
Image
ಫುಟ್ ಬೋರ್ಡ್ ನಲ್ಲಿ ನೇತಾಡಿಕೊಂಡೇ ಪ್ರಯಾಣಿಸುತ್ತಿರುವ ಮಹಿಳಾ ಪ್ರಯಾಣಿಕರು
Image
ಚಾಟ್ ಜಿಪಿಟಿನಿಂದಲೇ ಗಂಡ ಕುಡಿದ ಕಾಫಿ ಕಪ್ ವಿಶ್ಲೇಷಣೆ ಮಾಡಿದ ಮಹಿಳೆ
Image
ವೇದಿಕೆ ಮೇಲೆ ಬೆಂಗಳೂರು ಕಾಲೇಜಿನ ವಿದ್ಯಾರ್ಥಿಗಳಿಬ್ಬರ ಚಿಂದಿ ಡಾನ್ಸ್

ವೈರಲ್ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋವೊಂದು ಎರಡು ಲಕ್ಷ ಎಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆ ಪಡೆದುಕೊಂಡಿದ್ದು, ಈ ವ್ಯಕ್ತಿಗಳು ಪರಸ್ಪರ ಯಾಕಾಗಿ ಕಿತ್ತಾಡಿಕೊಂಡಿದ್ದಾರೆ ಎನ್ನುವುದು ಮಾತ್ರ ತಿಳಿದು ಬಂದಿಲ್ಲ. ಆದರೆ ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಳಕೆದಾರರು ಕಾಮೆಂಟ್ ಮಾಡಿದ್ದು ಈ ಜಗಳ ಹಿಂದಿನ ಕಾರಣವೇನು ಎನ್ನುವುದನ್ನು ಪ್ರಶ್ನಿಸಿದ್ದಾರೆ. ಬಳಕೆದಾರರೊಬ್ಬರು, ‘ಈ ವ್ಯಕ್ತಿಗಳ ನಡುವಿನ ಜಗಳದ ಹಿಂದಿನ ಕಾರಣವೇನು’ ಎಂದು ಕೇಳಿದ್ದಾರೆ.

ಇದನ್ನೂ ಓದಿ : ಸಂಗೀತ ಕಾರ್ಯಕ್ರಮದಲ್ಲಿ ಅವಾಂತರ ಸೃಷ್ಟಿಸಿದ ಗೂಳಿ, ಎದ್ನೋ ಬಿದ್ನೋ ಎಂದು ಓಡಿದ ಜನ

ಇನ್ನೊಬ್ಬರು, ‘ಕ್ಯಾಮೆರಾ ಮ್ಯಾನ್ ಊಟ ಮಾಡುವುದರಲ್ಲಿಯೇ ಬ್ಯುಸಿಯಿರಬೇಕು, ಈ ವೇಳೆಯಲ್ಲಿ ಈ ಜಗಳ ಶುರುವಾಗಿರಬೇಕು’ ಎಂದು ಹೇಳಿದ್ದಾರೆ. ಮತ್ತೊಬ್ಬರು, ‘ಫ್ಯಾಮಿಲಿ ರೆಸ್ಟೋರೆಂಟ್ ಗಳಲ್ಲಿ ಈ ರೀತಿ ಜಗಳಗಳು ನಡೆಯಬಾರದು. ಆದರೆ ಈಗಿನ ದಿನಗಳಲ್ಲಿ ಪಬ್ ಹಾಗೂ ಕ್ಲಬ್ ಹೊರತುಪಡಿಸಿ ಫ್ಯಾಮಿಲಿ ರೆಸ್ಟೋರೆಂಟ್ ಗಳು ಸುರಕ್ಷಿತವಾಗಿಲ್ಲ’ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿ ಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ