Viral Video: “ಎಲ್ಲಿ ರಾಮನೋ ಅಲ್ಲಿ ಹನುಮ” ಕಾರಿಂಜೇಶ್ವರ ರಾಮೋತ್ಸವದಲ್ಲಿ ರಾಮ ದೂತರು

| Updated By: ಅಕ್ಷಯ್​ ಪಲ್ಲಮಜಲು​​

Updated on: Jan 22, 2024 | 7:06 PM

ಇಂದು ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮ ಲಲ್ಲಾ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ಸಂಪನ್ನಗೊಂಡಿದೆ. ಈ ವಿಶೇಷ ಸಂದರ್ಭದಲ್ಲಿ  ಅಯೋಧ್ಯೆಯಲ್ಲಿ  ಮಾತ್ರವಲ್ಲದೆ ದೇಶದ ಪ್ರತಿಯೊಂದು ಊರುಗಳಲ್ಲಿರುವ ದೇವಾಲಯಗಳಲ್ಲಿ ರಾಮೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಳದಲ್ಲಿ ಏರ್ಪಡಿಸಲಾಗಿದ್ದ ರಾಮೋತ್ಸವ ಕಾರ್ಯಕ್ರಮದಲ್ಲಿ ಭಕ್ತರೊಂದಿಗೆ  ವಾನರ ಸೈನ್ಯವೂ ಕೂಡಾ ಭಾಗಿಯಾಗಿವೆ. ಈ ಕುರಿತ ವಿಶೇಷ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Viral Video: ಎಲ್ಲಿ ರಾಮನೋ ಅಲ್ಲಿ ಹನುಮ ಕಾರಿಂಜೇಶ್ವರ ರಾಮೋತ್ಸವದಲ್ಲಿ ರಾಮ ದೂತರು
Follow us on

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭವಾಗಿನಿಂದ ಭಕ್ತರು   ಪ್ರಭು ಶ್ರೀರಾಮನನ್ನು ಕಣ್ತುಂಬಿಕೊಳ್ಳಲು ಬಹಳ ಕಾತುರದಿಂದ  ಕಾಯುತ್ತಿದ್ದರು. ಇದೀಗ ಕೋಟ್ಯಾಂತರ ರಾಮ ಭಕ್ತರ ಕನಸು ನೆರವೇರಿದ್ದು, ಇಂದು  ಶುಭ ಅಭಿಜಿತ್ ಮುಹೂರ್ತದಲ್ಲಿ ಪ್ರಭು ಶ್ರೀರಾಮನು ಬಾಲ ರಾಮನಾಗಿ ಅಯೋಧ್ಯೆಯ ರಾಮ ಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ಈ ವಿಶೇಷ ಸಂದರ್ಭದಲ್ಲಿ ಕೇವಲ ಅಯೋಧ್ಯೆಯಲ್ಲಿ ಮಾತ್ರವಲ್ಲದೆ ದೇಶದೆಲ್ಲೆಡೆ ಸಂಭ್ರಮ ಬಹಳ ಜೋರಾಗಿಯೇ ಇತ್ತು. ಹೌದು ದೇಶದ ಪ್ರತಿಯೊಂದು ದೇವಾಲಯ, ರಾಮ ಮಂದಿರಗಳು ಹಾಗೇನೆ ಭಜನ ಮಂಡಳಿಗಳಲ್ಲಿ ಶ್ರೀರಾಮನ ಪೂಜೆ,  ರಾಮೋತ್ಸವ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾರಿಂಜೇಶ್ವರ ದೇವಳದಲ್ಲಿಯೂ ಕೂಡ ರಾಮೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು, ಆ ವೇಳೆಯಲ್ಲಿ ಎಲ್ಲಿ ರಾಮನೋ ಅಲ್ಲಿ ಹನುಮ ಎಂಬಂತೆ, ಅಲ್ಲಿ ನಡೆದ ರಾಮೋತ್ಸವ ಕಾರ್ಯಕ್ರಮದಲ್ಲಿ ವಾನರ ಸೈನ್ಯವೂ ಕೂಡಾ ಭಾಗಿಯಾಗಿವೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ನೆಟ್ಟಿಗರ ಮನ ಗೆದ್ದಿದೆ.

ಈ ವಿಡಿಯೋವನ್ನು @trollbogra  ಎಂಬ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಹಂಚಿಕೊಳ್ಳಲಾಗಿದ್ದು, ʼಶ್ರೀ ಕ್ಷೇತ್ರ ಕಾರಿಂಜೇಶ್ವರ ದೇವಸ್ಥಾನದಲ್ಲಿ ನಡೆದ ರಾಮೋತ್ಸವದಲ್ಲಿ ಭಾಗಿಯಾದ ರಾಮದಾಸರುʼ ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ. ವಿಡಿಯೋದಲ್ಲಿ ಎಲ್ಲಿ ರಾಮನೋ ಅಲ್ಲಿ ಹನುಮ ಎಂಬಂತೆ ಕಾರಿಂಜೇಶ್ವರ ದೇವಾಲಯದಲ್ಲಿ ನಡೆದಂತಹ ರಾಮೋತ್ಸವ ಕಾರ್ಯಕ್ರಮದಲ್ಲಿ ವಾನರ ಸೈನ್ಯವೂ ಬಹಳ ಸಂಭ್ರಮದಿಂದ ಭಾಗಿಯಾಗಿರುವ ದೃಶ್ಯವನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ:


ವೈರಲ್ ವಿಡಿಯೋದಲ್ಲಿ ದೇವಾಲಯದ ಅಂಗಳದಲ್ಲಿ ಕುರ್ಚಿಯ ಮೇಲೆ  ಶ್ರೀರಾಮ ದೇವರ ಫೋಟೋವನ್ನಿಟ್ಟು ಪೂಜಿಸಲಾಗಿತ್ತು. ಆ ಸಂದರ್ಭದಲ್ಲಿ ಎಲ್ಲಿ ರಾಮನೋ ಅಲ್ಲಿ ಹನುಮ ಎಂಬಂತೆ ಒಂದಷ್ಟು ವಾನರ ಸೈನ್ಯವೂ ಆಗಮಿಸಿ ರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾದವು. ಅದರಲ್ಲಿ ವಿಶೇಷವೇನೆಂದರೆ, ಒಂದು ವಾನರ ಶ್ರೀ ರಾಮ ದೇವರ  ಫೋಟೋವನ್ನೆ ನೋಡುತ್ತಾ ಮಂತ್ರಮುಗ್ಧವಾಗಿ ಕುಳಿತಿರುವಂತ ಸುಂದರ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಅಕ್ಕಿಯಲ್ಲಿ ಅರಳಿದ ಸೀತಾ ರಾಮ

ಕೆಲ ಗಂಟೆಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ ಆರು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ  ಹಲವಾರು ಲೈಕ್ಸ್ಗಳನ್ನು ಪಡೆದುಕೊಂಡಿದೆ. ಹಾಗೂ ನೆಟ್ಟಿಗರು ಕಮೆಂಟ್ಸ್ ಮಾಡುವ ಮೂಲಕ ಈ ಸುಂದರ ವಿಡಿಯೋಗೆ ಮೆಚ್ಚುಗೆನ್ನು ಸೂಚಿಸಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:02 pm, Mon, 22 January 24