AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಹಿಳೆಯ ತಲೆಗೆ ಟೋಪಿ ಇಟ್ಟು, ಕೆನ್ನೆಗೆ ಮುತ್ತು ಕೊಟ್ಟ ಗಜರಾಜ

ಆನೆಗಳು ಭಾವನಾತ್ಮಕ ಮಾತ್ರವಲ್ಲ, ಬುದ್ಧಿವಂತ ಜೀವಿಗಳು. ಇದಕ್ಕೆ ಸಾಕ್ಷಿಯಾಗಿದೆ ಈ ದೃಶ್ಯ. ಆನೆಯೊಂದು ಮಹಿಳೆಯ ತಲೆಗೆ ಟೋಪಿ ಇಟ್ಟು, ಕೆನ್ನೆಗೆ ಮುತ್ತು ನೀಡಿದೆ. ಈ ಕ್ಯೂಟ್ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಆನೆಯ ತುಂಟಾಟಕ್ಕೆ ನೆಟ್ಟಿಗರು ಫುಲ್‌ ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮಹಿಳೆಯ ತಲೆಗೆ ಟೋಪಿ ಇಟ್ಟು, ಕೆನ್ನೆಗೆ ಮುತ್ತು ಕೊಟ್ಟ ಗಜರಾಜ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Nov 17, 2026 | 12:53 PM

Share

ಆನೆಗಳು (elephants) ಏನು ಮಾಡಿದ್ರು ನೋಡೋಕೆ ಚಂದ. ಅವುಗಳ ಆಟ ತುಂಟಾಟಗಳನ್ನು ಕಣ್ತುಂಬಿಸಿಕೊಳ್ಳಲು ಕಣ್ಣು ಸಾಲದು.ಸೋಶಿಯಲ್ ಮೀಡಿಯಾದಲ್ಲಿ ಗಜರಾಜನ ವಿಡಿಯೋಗಳು ವೈರಲ್ ಆಗುತ್ತಿರುತ್ತವೆ. ಇದೀಗ ಅಂತಹದ್ದೇ ವಿಡಿಯೋ ವೈರಲ್ ಆಗಿದೆ. ಆನೆಯೊಂದು ಮಹಿಳೆಯ ತಲೆಗೆ ಟೋಪಿಯನ್ನಿಟ್ಟು, ಕೆನ್ನೆಗೆ ಚುಂಬಿಸಿದೆ. ಆನೆಯ ಮುತ್ತು ನೀಡುತ್ತಿದ್ದಂತೆ ಮಹಿಳೆ ನಾಚಿ ನೀರಾಗಿದ್ದಾಳೆ. ಈ ವಿಡಿಯೋ ಸದ್ಯ ವೈರಲ್ ಆಗಿದ್ದು ನೆಟ್ಟಿಗರ ಹೃದಯ ಗೆದ್ದಿದೆ.

ತಲೆಗೆ ಟೋಪಿ ಇಟ್ಟು, ಮಹಿಳೆಯ ಕೆನ್ನೆಗೆ ಮುತ್ತನ್ನಿಟ್ಟ ಗಜರಾಜ

ಸ್ಮೈಲ್ ಲೇ (Smile lay) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್ ನಲ್ಲಿ ಆನೆಯೊಂದು ಮಹಿಳೆಯ ಜತೆಗೆ ತುಂಟಾಟ ಆಡಿದೆ. ಮೊದಲಿಗೆ ಮಹಿಳೆಯ ತಲೆ ಮೇಲೆ ಟೋಪಿ ಇಟ್ಟಿದೆ. ಅಲ್ಲೇ ಇದ್ದ ವ್ಯಕ್ತಿ ಮುತ್ತು ಕೊಡು ಎನ್ನುತ್ತಿದ್ದಂತೆ ಮೆಲ್ಲನೆ ಮಹಿಳೆಯ ಕೆನ್ನೆಗೆ ಚುಂಬಿಸಿದೆ. ಗಜರಾಜನ ತುಂಟತನಕ್ಕೆ ಮಹಿಳೆ ನಾಚಿ ನೀರಾಗಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

View this post on Instagram

A post shared by Smile Lay (@bank.mahout)

ಇದನ್ನೂ ಓದಿ: ಕೆಸರು ನೀರಿನಲ್ಲಿ ಮಿಂದೆದ್ದ ಮರಿಯಾನೆ, ವೈರಲ್ ಆಯ್ತು ದೃಶ್ಯ

ಈ ವಿಡಿಯೋ ಇದುವರೆಗೆ ಒಂದೂವರೆ ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಶುದ್ಧ ಪ್ರೀತಿ ಎಂದರೆ, ಮತ್ತೊಬ್ಬರು ಈ ಆನೆಗಳು ಬುದ್ಧಿವಂತ ಪ್ರಾಣಿಗಳು ಎಂದಿದ್ದಾರೆ. ಇನ್ನೊಬ್ಬರು, ಕ್ಯೂಟ್ ಆಗಿದೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
19 ವರ್ಷದ ಇಬ್ಬರು ವಿದ್ಯಾರ್ಥಿನಿಯರು ರಸ್ತೆ ಅಪಘಾತದಲ್ಲಿ ಬಲಿ
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಚಳ್ಳಕೆರೆ ಬಳಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಸಾರಿಗೆ ಬಸ್: 42 ಮಂದಿ ಪಾರು
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಸ್ಟಿಂಗ್ ಪ್ರಕರಣ: ಪೊಲೀಸರಿಗೆ ಮೊಬೈಲ್ ನೀಡಲು ಕೃಪಾ ಆಳ್ವ ನಿರಾಕರಣೆ!
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ಪ್ರಧಾನಿ ಮೋದಿ ಆಡಳಿತದ ಯಶೋಗಾಥೆ, ಯೋಜನೆಗಳ ಅಧ್ಯಯನ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
ವೀರಾಂಜನೇಯ ವಿಗ್ರಹಕ್ಕೆ ಲೇಪಿಸಿದ ಬೆಣ್ಣೆ 17 ದಿನ ಕಳೆದರೂ ಕರಗಿಲ್ಲ
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
‘ಮಾಡಿರೋದೇ ಒಂದು ಸಿನಿಮಾ, ಗಂಡಸರ ಹಾಗೆ ನಡೆದುಕೋ; ಜಗ್ಗುಗೆ ಮಂಜು ಅವಾಜ್
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ಸೆಂಟ್ರಲ್ ಜೈಲಿನ ಬಳಿ ನಿಷಿದ್ಧ ವಸ್ತುಗಳು: ಕೈದಿಗಳಿಗೆ ತಲುಪಿಸುವ ಯತ್ನ ವಿಫಲ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ವೃತ್ತಿಯಲ್ಲಿ ಬಡ್ತಿ, ಆರ್ಥಿಕ ಪ್ರಗತಿ ಹಾಗೂ ಅಪವಾದಗಳಿಂದ ಮುಕ್ತಿ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಧರ್ಮಸ್ಥಳಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ಕುಟುಂಬಕ್ಕೆ ಪೂರ್ಣಕುಂಭ ಸ್ವಾಗತ
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?
ಒಂದೇ ಪ್ರಕರಣ, ಎರಡು FIR: ಮೈಸೂರಿನಲ್ಲಿ ಎರಡು ಕೋಮಿನ ಮಧ್ಯೆ ನಡೆದಿದ್ದೇನು?