AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video Viral: ಮತಗಟ್ಟೆಯಿಂದ ಮತ ಪೆಟ್ಟಿಗೆ ಕದ್ದು ಓಡಿಹೋದ ವ್ಯಕ್ತಿ; ವಿಡಿಯೋ ಇಲ್ಲಿದೆ ನೋಡಿ

West Bengal panchayat poll: ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಮತದಾನ ನಡೆಯುತ್ತಿರುವಾಗಲೇ ಮತಪೆಟ್ಟಿಗೆಯನ್ನು ಕದ್ದು ಓಡಿ ಹೋಗಿದ್ದಾನೆ.

ಅಕ್ಷತಾ ವರ್ಕಾಡಿ
|

Updated on:Jul 08, 2023 | 4:06 PM

Share

ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ಮತದಾನ ನಡೆಯುತ್ತಿರುವಾಗಲೇ ಮತಪೆಟ್ಟಿಗೆಯನ್ನು ಕದ್ದು ಓಡಿ ಹೋಗಿದ್ದಾನೆ. ಈತ ಓಡಿಹೋಗುತ್ತಿರುವುದು ವಿಡಿಯೋದಲ್ಲಿ ಸೆರೆಹಿಡಿಯಲಾಗಿದ್ದು, ವಿಡಿಯೋವನ್ನು ಸೋಶಿಯಲ್​ ಮೀಡಿಯಾಗಳಲ್ಲಿ ಹಂಚಿಕೊಳ್ಳಲಾಗಿದೆ. ಇದೀಗಾ ಈ ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ. ಆತ ಹಾಡು ಹಗಲೇ ಮತಗಟ್ಟೆಯಿಂದ ಮತಪೆಟ್ಟಿಗೆಯನ್ನು ಕದ್ದು ಓಡುತ್ತಿರುವಾಗ ರಾಜ್ಯದ ಪೊಲೀಸ್, ಆಡಳಿತ ಮತ್ತು ಭದ್ರತಾ ವ್ಯವಸ್ಥೆಯ ಇರಲ್ಲಿಲ್ಲವೇ ಎಂದು ನೆಟ್ಟಿಗರು ಪ್ರಶ್ನಿಸಿದ್ದಾರೆ.

ಇಲ್ಲಿ ನಡೆಯುತ್ತಿರುವ ನಕಲಿ ಮತದಾನದಿಂದ ಕುಪಿತಗೊಂಡ ಮತದಾರರು ಕೂಚ್ ಬೆಹಾರ್ ಜಿಲ್ಲೆಯ ದಿನ್ಹಟಾದ ಬರನಾಚಿನಾ ಎಂಬಲ್ಲಿನ ಮತಗಟ್ಟೆಯೊಂದರಲ್ಲಿ ಮತಯಂತ್ರಕ್ಕೆ ಬೆಂಕಿ ಹಚ್ಚಿರುವ ಮತ್ತೊಂದು ಘಟನೆ ನಡೆದಿದೆ.

ಪಶ್ಚಿಮ ಬಂಗಾಳದಲ್ಲಿ ಒಂದೇ ಹಂತದ ಪಂಚಾಯತ್ ಚುನಾವಣೆ ನಡೆಯುತ್ತಿದೆ. ಈ ಚುನಾವಣೆಗಳು 2024 ರ ಲೋಕಸಭೆ ಚುನಾವಣೆಗೆ ಮುನ್ನ ರಾಜಕೀಯ ಪಕ್ಷಗಳ ಪರೀಕ್ಷೆ ಎಂದು ಪರಿಗಣಿಸಲಾಗಿದೆ. 22 ಜಿಲ್ಲಾ ಪರಿಷತ್‌ಗಳು, 9,730 ಪಂಚಾಯತ್ ಸಮಿತಿಗಳು ಮತ್ತು 63,239-ಗ್ರಾಮ ಪಂಚಾಯತ್‌ಗಳ ಸ್ಥಾನಗಳಲ್ಲಿ ಹರಡಿರುವ ಸುಮಾರು 928 ಸ್ಥಾನಗಳಿಗೆ ಸ್ಥಳೀಯ ಮಟ್ಟದಲ್ಲಿ ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಸುಮಾರು 5.67 ಕೋಟಿ ಮತದಾರರು ಮತ ಚಲಾಯಿಸುವ ಸಾಧ್ಯತೆಯಿದೆ.

ಇದನ್ನೂ ಓದಿ: ಮಲೇಷಿಯಾದಲ್ಲಿ ರಾಕಿಂಗ್​​ ಸ್ಟಾರ್​​​ಗೆ ಸಿಕ್ತು ಸ್ಪೆಷಲ್​​​ ಗಿಫ್ಟ್​​​​; ವಿಡಿಯೋ ಇಲ್ಲಿದೆ

ಮತಗಟ್ಟೆಯಲ್ಲಿ ಇಂತಹ ಅಹಿತಕರ ಘಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಅಲ್ಲಿನ ಸರ್ಕಾರಗಳು ಭದ್ರತಾ ಪಡೆಗಳು ಏನು ಮಾಡುತ್ತಿದ್ದರು? ಮತಗಟ್ಟೆಯಲ್ಲಿ ಭದ್ರತಾ ಪಡೆಗಳು ನಿಯೋಜನೆ ಮಾಡಿಲ್ಲವೇ ಹೀಗೆ ಸಾಕಷ್ಟು ಪ್ರಶ್ನೆಗಳನ್ನು ಕಾಮೆಂಟ್​​ ಮೂಲಕ ಬರೆದುಕೊಂಡಿದ್ದಾರೆ. ಇಂದು(ಜು.08)ರಂದು ಮಧ್ಯಾಹ್ನ 12.38ಕ್ಕೆ ವಿನೀತ್​​ ಸಿಂಗ್​​ ಎಂಬ ಟ್ವಿಟರ್​​ ಬಳಕೆದಾರರು ಮತಗಟ್ಟೆಯಿಂದ ಮತ ಪೆಟ್ಟಿಗೆಯೊಂದಿಗೆ ಓಡಿಹೋದ ವ್ಯಕ್ತಿಯ ವಿಡಿಯೋ ಹಂಚಿಕೊಂಡಿದ್ದು, ವಿಡಿಯೋ ಎಲ್ಲೆಡೆ ವೈರಲ್​ ಆಗಿದೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 3:58 pm, Sat, 8 July 23

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ