AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮುಸ್ಲಿಂ ಯುವಕನೊಂದಿಗಿನ ಬಿಜೆಪಿ ಮುಖಂಡನ ಮಗಳ ಮದುವೆ ರದ್ದು

ಇತ್ತೀಚೆಗಷ್ಟೇ ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಮಗಳ ಮದುವೆಗೆ ಸಂಬಂಧಿಸಿದಂತೆ ಸುದ್ದಿ ಭಾರೀ ವೈರಲ್​​ ಆಗಿತ್ತು. ಇದೀಗಾ ಭಾರೀ ಟೀಕೆಗೆ ಕಾರಣವಾಗಿರುವುದರಿಂದ ತನ್ನ ಮಗಳ ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ಮುಖಂಡ ತಿಳಿಸಿದ್ದಾರೆ.

Viral News: ಮುಸ್ಲಿಂ ಯುವಕನೊಂದಿಗಿನ ಬಿಜೆಪಿ ಮುಖಂಡನ ಮಗಳ ಮದುವೆ ರದ್ದು
ಮುಸ್ಲಿಂ ಯುವಕನೊಂದಿಗಿನ ಬಿಜೆಪಿ ಮುಖಂಡನ ಮಗಳ ಮದುವೆ ರದ್ದುImage Credit source: Housing
ಅಕ್ಷತಾ ವರ್ಕಾಡಿ
|

Updated on:May 21, 2023 | 10:42 AM

Share

ಮುಖ್ಯಾಂಶಗಳು

  • ಇತ್ತೀಚೆಗಷ್ಟೇ ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಮಗಳ ಮದುವೆಗೆ ಸಂಬಂಧಿಸಿದಂತೆ ಸುದ್ದಿ ಭಾರೀ ವೈರಲ್​​ ಆಗಿತ್ತು.
  • ಇದೀಗಾ ಭಾರೀ ಟೀಕೆಗೆ ಕಾರಣವಾಗಿರುವುದರಿಂದ ತನ್ನ ಮಗಳ ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ಮುಖಂಡ ತಿಳಿಸಿದ್ದಾರೆ.
  • ಭಾರೀ ವಿವಾದ ವಿರೋಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳು 28 ರಂದು ನಡೆಯಬೇಕಿದ್ದ ಮದುವೆಗೆ ತೆರೆಬಿದ್ದಿದೆ.

ಇತ್ತೀಚೆಗಷ್ಟೇ ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಮಗಳ ಮದುವೆಗೆ ಸಂಬಂಧಿಸಿದಂತೆ ಸುದ್ದಿ ಭಾರೀ ವೈರಲ್​​ ಆಗಿತ್ತು. ಇದೀಗಾ ಭಾರೀ ಟೀಕೆಗೆ ಕಾರಣವಾಗಿರುವುದರಿಂದ ತನ್ನ ಮಗಳ ಮದುವೆಯನ್ನು ರದ್ದುಗೊಳಿಸಲಾಗಿದೆ ಎಂದು ಬಿಜೆಪಿ ಮುಖಂಡ ತಿಳಿಸಿದ್ದಾರೆ. ಉತ್ತರಾಖಂಡದಲ್ಲಿ ಬಿಜೆಪಿ ಮುಖಂಡ ಹಾಗೂ ನಗರಸಭೆ ಅಧ್ಯಕ್ಷ ಯಶಪಾಲ್ ಬೇನಂ ಅವರ ಪುತ್ರಿ ಮೋನಿಕಾ ಅವರ ಮದುವೆ ಮೇ 28 ರಂದು ರೈಸ್ ಅಹ್ಮದ್ ಅವರ ಮಗ ಮೋನಿಸ್ ಅಹ್ಮದ್ ಅವರೊಂದಿಗೆ ನಡೆಯಬೇಕಿತ್ತು. ಮದುವೆಗೆ ಸಂಬಂಧಿಸಿದಂತೆ ಲಗ್ನ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಲಗ್ನ ಪತ್ರಿಕೆ ಎಲ್ಲೆಡೆ ಹರಿದಾಡುತ್ತಿದ್ದಂತೆ ಈ ಮದುವೆಗೆ ಹಲವು ಬಿಜೆಪಿ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಯಶ್ಪಾಲ್ ಬೇನಾಮ್ ಪಕ್ಷದ ಅನೇಕರು ಮದುವೆ ನಿಲ್ಲಿಸುವಂತೆ ಒತ್ತಾಯಿಸಲಾಗಿತ್ತು.

ಇದನ್ನೂ ಓದಿ: ಬಿಜೆಪಿ ಮುಖಂಡನ ಮಗಳಿಗೆ ಮುಸ್ಲಿಂ ಯುವಕನ ಜತೆಗೆ ಮದುವೆ, ಬೆಂಬಲಿಗರು, ಪಕ್ಷದಿಂದ ಭಾರೀ ವಿರೋಧ

ಭಾರೀ ವಿವಾದ ವಿರೋಧಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಇದೇ ತಿಂಗಳು 28 ರಂದು ನಡೆಯಬೇಕಿದ್ದ ಮದುವೆಗೆ ತೆರೆಬಿದ್ದಿದೆ.ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಯಶ್ಪಾಲ್ ಬೇನಮ್, ಮಗಳ ಸಂತೋಷಕ್ಕಾಗಿ ಮುಸ್ಲಿಂ ಯುವಕನೊಂದಿಗೆ ಮದುವೆ ಮಾಡಲು ಒಪ್ಪಿಕೊಂಡಿದ್ದೇನೆ. ಆದರೆ ಮದುವೆಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಪ್ರತಿಕ್ರಿಯಿಸಿದ ರೀತಿಯನ್ನು ಗಮನದಲ್ಲಿಟ್ಟುಕೊಂಡು ಮದುವೆ ನಿಲ್ಲಿಸಲಾಗಿದೆ. ಈಗ ನಾನು ಸಾರ್ವಜನಿಕರ ಧ್ವನಿಯನ್ನೂ ಕೇಳಬೇಕಾಗಿದೆ ಎಂದು ಬೇನಾಮ್ ಹೇಳಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ:

Published On - 10:42 am, Sun, 21 May 23

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್