Viral Video: 7 ವರ್ಷಗಳ ಹಿಂದೆ ಟ್ವಿಟರ್​​ನಲ್ಲಿ ಹಂಚಿಕೊಂಡ ಫೋಟೋದಲ್ಲಿದ್ದ ಬಾಲಕಿಯನ್ನು ಭೇಟಿಯಾದ ಆನಂದ್ ಮಹೀಂದ್ರಾ

ಏಳು ವರ್ಷಗಳ ಹಿಂದೆ ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಒಂದು ವರ್ಷದ ಮಗುವಿನ ಫೋಟೋವನ್ನು ಹಂಚಿಕೊಂಡಿದ್ದರು. ಈಗ ಏಳು ವರ್ಷಗಳ ಬಳಿಕ ಆ ಪುಟ್ಟ ಬಾಲಕಿಯನ್ನು ಮುಖತಃ ಭೇಟಿಯಾಗಿದ್ದಾರೆ. ಈ ಸುಂದರ ಭೇಟಿಯ ಫೋಟೊವನ್ನು ಅವರು ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ.

Viral Video: 7 ವರ್ಷಗಳ ಹಿಂದೆ ಟ್ವಿಟರ್​​ನಲ್ಲಿ ಹಂಚಿಕೊಂಡ ಫೋಟೋದಲ್ಲಿದ್ದ ಬಾಲಕಿಯನ್ನು ಭೇಟಿಯಾದ ಆನಂದ್ ಮಹೀಂದ್ರಾ
ವೈರಲ್ ವೀಡಿಯೊ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 12, 2023 | 5:05 PM

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಆಗಾಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಆಸಕ್ತಿದಾಯಕ ಪೋಸ್ಟ್ ಗಳನ್ನು ಹಂಚಿಕೊಳ್ಳುವ ಮೂಲಕ ಸುದ್ದಿಯಲ್ಲಿರುತ್ತಾರೆ. ಟ್ವಿಟರ್​​​ನಲ್ಲಿ ಸಾಕಷ್ಟು ಸಕ್ರಿಯವಾಗಿರುವ ಅವರು ಆಸಕ್ತಿದಾಯಕ ಟ್ವೀಟ್​​​ಗಳ ಮೂಲಕ ತಮ್ಮ ಅನುಯಾಯಿಗಳೊಂದಿಗೆ ಸಂವಹನ ನಡೆಸುತ್ತಿರುತ್ತಾರೆ. ಹಾಗೂ ಇವರ ಸ್ಪೂರ್ತಿದಾಯಕ ಪೋಸ್ಟ್​ಗಳಿಗೆ ಪ್ರತ್ಯೇಕ ಅಭಿಮಾನಿ ಬಳಗವೇ ಇದೆ. ಆನಂದ್ ಮಹೀಂದ್ರಾ ಅವರು ಹಂಚಿಕೊಳ್ಳುವ ಪ್ರಮುಖ ಜೀವನ ಪಾಠಗಳು, ಪ್ರೇರಕ ಮತ್ತು ಹಾಸ್ಯದ ಟ್ವೀಟ್​​​ಗಳು ಹೆಚ್ಚು ಆಸಕ್ತಿದಾಯಕವಾಗಿರುತ್ತವೆ. ಇತ್ತೀಚಿಗೆ ಇಂತಹದ್ದೇ ಹೃದಯಸ್ಪರ್ಶಿ ಕಥೆಯೊಂದರ ಕುರಿತ ಪೋಸ್ಟ್​ನ್ನು ಆನಂದ್ ಮಹೀಂದ್ರಾ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಸುಮಾರು 7 ವರ್ಷಗಳ ಹಿಂದೆ ಅವರು 1 ವರ್ಷ ವಯಸ್ಸಿನ ಪುಟ್ಟ ಬಾಲಕಿಯೊಬ್ಬಳ ಫೋಟೊವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು, ಹಾಗೂ ಅದಕ್ಕೆ ‘ನನಗೆ ಯಾವಾಗ 18 ವರ್ಷ ತುಂಬುತ್ತದೆ, ಇನ್ನೂ 16.5 ವರ್ಷ ಬಾಕಿ ಇವೆ, ನಾನು ಕಾರ್ ಓಡಿಸಲು’ ಎಂಬ ತಮಾಷೆಯ ಶೀರ್ಷಿಕೆಯನ್ನು ಬರೆದುಕೊಂಡಿದ್ದರು. ಈಗ ಸುಮಾರು 7 ವರ್ಷಗಳ ಬಳಿಕ ಅದೇ ಪುಟ್ಟ ಬಾಲಕಿಯನ್ನು ಆನಂದ್ ಮಹೀಂದ್ರಾ ಅವರು ಮುಖತಃ ಭೇಟಿಯಾಗಿದ್ದಾರೆ. ಜೊತೆಗೆ ಈ ಸಂತೋಷದ ಸಂಗತಿಯನ್ನು ಟ್ವಿಟರ್​​​ನಲ್ಲಿ ಹಂಚಿಕೊಂಡಿದ್ದಾರೆ.

ಆನಂದ್ ಮಹೀದ್ರಾ ಅವರು ಇತ್ತೀಚಿನ ಪೋಸ್ಟ್​​ನಲ್ಲಿ ಪುಟ್ಟ ಬಾಲಕಿ ರೀಯಾಳ ಜೊತೆಗೆ ನಿಂತ ಫೋಟೊವನ್ನು ಹಂಚಿಕೊಂಡಿದ್ದಾರೆ. ‘ನಿನ್ನೆ ಸಂಜೆ ಈ ಪುಟ್ಟ ಮಗು ರಿಯಾ, ನನ್ನ ಬಳಿಗೆ ಬಂದು, ಏಳು ವರ್ಷಗಳ ಹಿಂದೆ ಆ ಬಾಲಕಿ ಒಂದು ವರ್ಷದವಳಾಗಿದ್ದಾಗ ನಾನು ಅವಳ ಫೋಟೋವನ್ನು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದೆ ಎಂದು ನನಗೆ ನೆನಪಿಸಿದಳು’ ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ಏಳು ವರ್ಷಗಳ ಹಿಂದೆ ಟ್ವಿಟರ್ ನಲ್ಲಿ ಹಂಚಿಕೊಳ್ಳಲಾಗಿದ್ದ ಪೋಸ್ಟ್​​ನಲ್ಲಿ ಬಾಲಕಿ ರೀಯಾ 1 ವರ್ಷ ವಯಸ್ಸಿನವಳಾಗಿದ್ದಳು. ಆಕೆ ಕಾರಿನಲ್ಲಿ ಚಾಲಕನ ಸೀಟಿನಲ್ಲಿ ಕುಳಿತು ಗಾಡಿ ಚಲಾಯಿಸುತ್ತಿರುವ ಪೋಸ್ ನೀಡಿದ್ದಳು. ಆ ಫೋಟೋವನ್ನು ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಈಗ ಸುಮಾರು ಏಳು ವರ್ಷಗಳ ಬಳಿಕ ಆ ಬಾಲಕಿಯನ್ನು ಮುಖತಃ ಭೇಟಿಯಾದದ್ದು ತುಂಬಾ ಸಂತೋಷವಾಯಿತು ಎಂದು ಆನಂದ್ ಮಹೀಂದ್ರಾ ಹೇಳಿದ್ದಾರೆ.

ಇದನ್ನೂ ಓದಿ: Viral Video: ಹಿಂದಿ ಹಾಡಿಗೆ ಸೀರೆಯುಟ್ಟು ಹೆಜ್ಜೆ ಹಾಕಿದ ಸುಂದರಿಯರು, ಇದು ಅದ್ಭುತ ಎಂದ ನೆಟ್ಟಿಗರು

ಅವರು ಟ್ವೀಟ್​​​ನಲ್ಲಿ ಬಾಲಕಿಯ ಜೊತೆಗೆ ನಿಂತ ಫೋಟೋ ಹಾಗೂ 7 ವರ್ಷಗಳ ಹಿಂದೆ ಹಂಚಿಕೊಂಡಿದ್ದ ಟ್ವೀಟ್​​​ನ ಸ್ಕ್ರೀನ್ ಶಾಟ್ ಶಾಟ್ ಫೋಟೋವನ್ನು ಹಂಚಿಕೊಂಡಿದ್ದಾರೆ. ಜೂನ್ 11 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 287.7 ಸಾವಿರ ವೀಕ್ಷಣೆಗಳನ್ನು ಹಾಗೂ 4.3 ಸಾವಿರ ಲೈಕ್ಸ್​​​ಗಳನ್ನು ಪಡೆದುಕೊಂಡಿದೆ. ಹಲವಾರು ಕಮೆಂಟ್ಸ್ ಗಳೂ ಹರಿದುಬಂದಿವೆ. ಒಬ್ಬ ಬಳಕೆದಾರರು ‘ಆ ಬಾಲಕಿ ಖಂಡಿತ ಮುಂದೊಂದು ದಿನ ಮಹೀಂದ್ರಾ ವಾಹನವನ್ನು ಖರೀದಿಸುತ್ತಾಳೆ’ ಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಒಂದು ಸುಂದರ ಕ್ಷಣ’ ಎಂದು ಕಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು ‘ನಿಮ್ಮನ್ನು ಭೇಟಿಯಾಗುವ ಅವಕಾಶ ನನಗೆ ಯಾವಾಗ ಸಿಗುತ್ತದೆಯೋ ಎಂದು ಕಾಯುತ್ತಿದ್ದೇನೆ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ಬಾಲಕಿಯೊಂದಿಗೆ ಶ್ರೀ ಆನಂದ್ ಮಹೀಂದ್ರಾ ಅವರರ ಸೌಜನ್ಯತೆಯ ನಡೆ. ನಿಮ್ಮ ಸರಳತೆಗೆ ನನ್ನದೊಂದು ನಮನ’ ಎಂದು ಕಮೆಂಟ್ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ