Viral Video : ಬಾಲಕಿಯ ಸೂರ್ಯ ನಮಸ್ಕಾರಕ್ಕೆ ಆನಂದ್ ಮಹಿಂದ್ರಾ ಫುಲ್ ಫಿದಾ, ವಿಡಿಯೋ ವೈರಲ್

ಉದ್ಯಮಿ ಆನಂದ್ ಮಹಿಂದ್ರಾ ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರುತ್ತಾರೆ. ತಮಗೆ ಹೆಚ್ಚು ಇಷ್ಟವಾದ ವಿಡಿಯೋಗಳನ್ನು ಆಗಾಗ ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಪುಟಾಣಿಯೊಬ್ಬಳು ಶಾಲಾ ಸಮವಸ್ತ್ರದಲ್ಲಿ ಸೂರ್ಯ ನಮಸ್ಕಾರ ಮಾಡುತ್ತಿರುವ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ಈ ಬಾಲಕಿಯೂ ಸೂರ್ಯ ನಮಸ್ಕಾರ ಮಾಡುವ ರೀತಿಗೆ ಸ್ವತಃ ಆನಂದ್ ಮಹಿಂದ್ರಾ ಫುಲ್ ಫಿದಾ ಆಗಿದ್ದು, ನೆಟ್ಟಿಗರು ಈ ವಿಡಿಯೋವನ್ನು ಮೆಚ್ಚಿಕೊಂಡಿದ್ದಾರೆ.

Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Nov 02, 2024 | 12:19 PM

ದಿನನಿತ್ಯ ಯೋಗ ಮಾಡುವುದರಿಂದ ಆರೋಗ್ಯವನ್ನು ವೃದ್ಧಿಸಿಕೊಳ್ಳಬಹುದು ಎನ್ನುವುದು ಎಲ್ಲರಿಗೂ ತಿಳಿದಿರುವ ವಿಚಾರ. ಹೀಗಾಗಿ ಬೆಳಗ್ಗೆ ಸೂರ್ಯ ಆಗಸದಲ್ಲಿ ತನ್ನ ಕೆಲಸವನ್ನು ಆರಂಭಿಸುವ ಮೊದಲೇ ಹೆಚ್ಚಿನವರು ಯೋಗಾಸನ ಮಾಡಲು ಆರಂಭಿಸುತ್ತಾರೆ. ಅದಲ್ಲದೇ, ಸೋಶಿಯಲ್ ಮೀಡಿಯಾದಲ್ಲಿ ಪುಟಾಣಿ ಮಕ್ಕಳು ಸಲೀಸಾಗಿ ಯೋಗ ಮಾಡುವ ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತದೆ. ಆದರೆ ಇದೀಗ ಉದ್ಯಮಿ ಆನಂದ್ ಮಹಿಂದ್ರಾಯವರು ಬಾಲಕಿಯೊಬ್ಬಳು ಶಾಲಾ ಸಮವಸ್ತ್ರದಲ್ಲಿ ಸೂರ್ಯ ನಮಸ್ಕಾರ ಮಾಡುತ್ತಿರುವ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ.

ವೈರಲ್ ಆಗಿರುವ ವಿಡಿಯೋದಲ್ಲಿ ಬಾಲಕಿಯೊಬ್ಬಳು ಶಾಲಾ ಸಮವಸ್ತ್ರದಲ್ಲಿ ಕಾಣಿಸಿಕೊಂಡಿದ್ದಾಳೆ. ಈ ಪೋರಿಯೂ ಸೂರ್ಯ ನಮಸ್ಕಾರ ಮಾಡುತ್ತಿರುವುದನ್ನು ಕಾಣಬಹುದು. ಸೂರ್ಯ ನಮಸ್ಕಾರದ ಪ್ರತಿಯೊಂದು ಭಂಗಿಯನ್ನು ಅಚ್ಚುಕಟ್ಟಾಗಿ ಮಾಡಿ ಮುಗಿಸುತ್ತಿದ್ದಾಳೆ. ಈ ಹುಡುಗಿಯು ದೇಹವನ್ನು ಸಲೀಸಾಗಿ ಭಾಗಿಸುವ ಮೂಲಕ ಸೂರ್ಯನಮಸ್ಕಾರ ಮಾಡುತ್ತಿದ್ದು, ಈ ವಿಡಿಯೋವನ್ನು ಆನಂದ್ ಮಹೀಂದ್ರಾ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋದೊಂದಿಗೆ, ‘ನಾನು ಕೂಡ ನನ್ನ ಮನೆಯಲ್ಲಿ ಪ್ರತಿದಿನ ಸೂರ್ಯ ನಮಸ್ಕಾರ ಮಾಡುತ್ತೇನೆ. ಆದರೆ ಹುಡುಗಿ ಇದನ್ನು ತುಂಬಾ ಸುಲಭವಾಗಿ ಮಾಡುತ್ತಿದ್ದಾಳೆ’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಪ್ರಿಯಕರನೊಂದಿಗೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ಗಂಡನ ಕೈಗೆ ಸಿಕ್ಕಿ ಬಿದ್ದ ಹೆಂಡ್ತಿ; ರೈಲ್ವೆ ಸ್ಟೇಷನ್‌ನಲ್ಲಿ ನಡೆಯಿತು ಹೈ ಡ್ರಾಮ

ಉದ್ಯಮಿ ಆನಂದ್ ಮಹಿಂದ್ರಾ ಹಂಚಿಕೊಂಡ ವಿಡಿಯೋ ಇಲ್ಲಿದೆ ನೋಡಿ

ಈ ವಿಡಿಯೋದಲ್ಲಿರುವ ಹುಡುಗಿಯ ಹೆಸರು ಪ್ರಣತಿ ಬಿಷ್ಣೋಯ್. ಆದರೆ ಹುಡುಗಿಯ ವಯಸ್ಸು ಎಷ್ಟು? ಅವಳು ಎಲ್ಲಿ ವಾಸಿಸುತ್ತಾಳೆ ಎಂಬುದರ ಕುರಿತು ಯಾವುದೇ ಮಾಹಿತಿಯನ್ನು ಹಂಚಿಕೊಳ್ಳಲಾಗಿಲ್ಲ. ಪೋಸ್ಟ್ ಮಾಡಿದ ಕೆಲವೇ ಗಂಟೆಗಳಲ್ಲಿ 2500 ಕ್ಕೂ ಹೆಚ್ಚು ಜನರು ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ನೋಡಿದ ನೆಟ್ಟಿಗರು ಮೆಚ್ಚುಗೆಯ ಸುರಿಮಳೆ ಗೈದಿದ್ದಾರೆ. ಬಳಕೆದಾರರೊಬ್ಬರು, ‘ ನಮ್ಮೆಲ್ಲರ ಆಶೀರ್ವಾದ ಈ ಹುಡುಗಿಯ ಮೇಲೆ ಸದಾ ಇರುತ್ತದೆ ಎಂದಿದ್ದಾರೆ. ಮತ್ತೊಬ್ಬರು, ‘ಈ ವಿಡಿಯೋವು ತುಂಬಾನೇ ಅದ್ಭುತವಾಗಿದೆ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ‘ನೀವು ಇತರ ಆತ್ಮವಿಶ್ವಾಸವನ್ನು ಹೆಚ್ಚಿಸುವ ರೀತಿ ನಿಜಕ್ಕೂ ನಮಗೆಲ್ಲರಿಗೂ ಮಾದರಿ. ಹೃದಯದಿಂದ ನೀವು ಅದ್ಭುತ ವ್ಯಕ್ತಿ’ ಎಂದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ