Sign In

By signing in or creating an account, you agree with Associated Broadcasting Company's Terms & Conditions and Privacy Policy.

Anant Radhika Pre Wedding Event: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು

ಅನಂತ್ ಮತ್ತು ರಾಧಿಕಾ ವಿವಾಹ ಪೂರ್ವ ಸಮಾರಂಭಕ್ಕೆ ಆಗಮಿಸುವ ಅತಿಥಿಗಳಿಗೆ ಮುಕೇಶ್ ಅಂಬಾನಿ ಕುಟುಂಬ ಭರ್ಜರಿ ಭೋಜನವನ್ನು ನೀಡಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅತಿಥಿಗಳಿಗೆ ಸುಮಾರು 2,500 ಬಗೆಯ ಖಾದ್ಯಗಳನ್ನು ಒಳಗೊಂಡ ಮೆನುವನ್ನು ಯೋಜಿಸಲಾಗಿದೆ.

Anant Radhika Pre Wedding Event: ಅನಂತ್ ಅಂಬಾನಿ ವಿವಾಹ ಪೂರ್ವ ಸಮಾರಂಭಕ್ಕೆ ತಯಾರಾಗುತ್ತಿದೆ 2500 ಬಗೆಯ ಖಾದ್ಯಗಳು
Anant Radhika Pre Wedding EventImage Credit source: Pinterest
Follow us
ಅಕ್ಷತಾ ವರ್ಕಾಡಿ
|

Updated on: Feb 27, 2024 | 5:41 PM

ರಿಲಯನ್ಸ್‌ ಇಂಡಸ್ಟ್ರೀಸ್‌ ಮುಖ್ಯಸ್ಥ ಮುಖೇಶ್ ಅಂಬಾನಿ ಮತ್ತು ನೀತಾ ಅಂಬಾನಿ ಅವರ ಕಿರಿಯ ಪುತ್ರ ಅನಂತ್ ಅಂಬಾನಿ ಮದುವೆ ಸಂಭ್ರಮ ಶುರುವಾಗಿದೆ. ವರದಿಗಳ ಪ್ರಕಾರ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ಸ್ ಜುಲೈ 12ರಂದು ಸಪ್ತಪದಿ ತುಳಿಯಲಿದ್ದಾರೆ. ಅಂಬಾನಿ ಅವರ ತವರೂರಾದ ಗುಜರಾತ್‌ನ ಜಾಮ್‌ನಗರದಲ್ಲಿ ಮಾರ್ಚ್ 1 ರಿಂದ 3ರ ವರೆಗೆ ವಿವಾಹ ಪೂರ್ವ ಸಂಭ್ರಮಾರಣೆ ನಡೆಯಲಿದೆ.

ಗ್ರ್ಯಾಂಡ್ ಪ್ರಿ ವೆಡ್ಡಿಂಗ್ ಸೆಲೆಬ್ರೇಷನ್ಸ್:

ಅನಂತ್ ಮತ್ತು ರಾಧಿಕಾ ವಿವಾಹ ಪೂರ್ವ ಸಮಾರಂಭಕ್ಕೆ ಆಗಮಿಸುವ ಅತಿಥಿಗಳಿಗೆ ಮುಕೇಶ್ ಅಂಬಾನಿ ಕುಟುಂಬ ಭರ್ಜರಿ ಭೋಜನವನ್ನು ನೀಡಲಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗುವ ಅತಿಥಿಗಳಿಗೆ ಸುಮಾರು 2,500 ಖಾದ್ಯಗಳನ್ನು ಒಳಗೊಂಡ ಮೆನುವನ್ನು ಯೋಜಿಸಲಾಗಿದೆ.

ಇದನ್ನೂ ಓದಿ: ಅಂಬಾನಿಯ ಕಿರಿಯ ಪುತ್ರನ ವಿವಾಹ ಪೂರ್ವ ಸಮಾರಂಭದ ಆಮಂತ್ರಣ ಪತ್ರಿಕೆ ವೈರಲ್

25 ಕ್ಕೂ ಹೆಚ್ಚು ಜನಪ್ರಿಯ ಬಾಣಸಿಗರು:

ಈವೆಂಟ್‌ಗಾಗಿ 65 ಬಾಣಸಿಗರು 135 ಜನರ ವಿಶೇಷ ತಂಡ ಇಂದೋರ್‌ನಿಂದ ಜಾಮ್‌ನಗರಕ್ಕೆ ತಲುಪಿರುವುದಾಗಿ ವರದಿಯಾಗಿದೆ. ಮೂರು ದಿನಗಳ ವರೆಗೆ ನಡೆಯುವ ಈ ವಿವಾಹ ಪೂರ್ವ ಕಾರ್ಯಕ್ರಮದಲ್ಲಿ ಒಟ್ಟು 2,500 ಬಗೆಯ ಖಾದ್ಯಗಳನ್ನು ತಯಾರಿಸಲಾಗುತ್ತದೆ.

ಪ್ಯಾನ್ ಏಷ್ಯನ್, ಮೆಡಿಟರೇನಿಯನ್,ಥಾಯ್, ಮೆಕ್ಸಿಕನ್ ಪಾರ್ಸಿ ಮತ್ತು ಜಪಾನೀಸ್ ವರೆಗಿನ ಪಾಕಪದ್ಧತಿಗಳಿವೆ. ಒಂದೇ ಒಂದು ಖಾದ್ಯವೂ ಪುನರಾವರ್ತನೆಯಾಗದಿರುವುದು ಕಂಡುಬರುತ್ತದೆ. ಬೆಳಗಿನ ಉಪಾಹಾರವು 70 ಕ್ಕೂ ಹೆಚ್ಚು ಆಯ್ಕೆಗಳನ್ನು ನೀಡಲಾಗುತ್ತಿದೆ. ಊಟಕ್ಕೆ 250 ಆಯ್ಕೆಗಳು ಮತ್ತು ರಾತ್ರಿಯ ಊಟಕ್ಕೆ 250 ಆಯ್ಕೆಗಳು ಇರುತ್ತವೆ. ಅತಿಥಿಗಳಿಗೆ ಸಸ್ಯಾಹಾರಿ ಖಾದ್ಯಗಳ ವಿಶೇಷ ಸೌಲಭ್ಯವೂ ಇದೆ. ವಿಶೇಷವೆಂದರೆ ಮಧ್ಯರಾತ್ರಿಯೂ ತಿಂಡಿ ನೀಡಲಾಗುತ್ತದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಅರ್ಜುನ್ ಜನ್ಯಗೆ ಹಾಡು ಹೊಳೆಯುವುದೆಲ್ಲಿ: ಸಂಗತಿ ವಿವರಿಸಿದ ಪ್ರೇಮ್
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ