ಎಷ್ಟೇ ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತಂದ್ರೂ ಮಹಿಳೆಯ ಮೇಲಾಗುತ್ತಿರುವ ದೌರ್ಜನ್ಯ, ಕಿರುಕುಳ, ಅತ್ಯಾಚಾರಗಳ ಸಂಖ್ಯೆ ಕಡಿಮೆಯಾಗಿಲ್ಲ. ಪ್ರತಿನಿತ್ಯ ಮಹಿಳೆಯರು, ಹೆಣ್ಣು ಮಕ್ಕಳು ಒಂದಲ್ಲಾ ಒಂದು ರೀತಿಯಲ್ಲಿ ದೌರ್ಜನ್ಯಕ್ಕೆ ಒಳಗಾಗುತ್ತಿದ್ದಾರೆ. ಅದರಲ್ಲೂ ಕೆಲ ಕಾಮುಕರು ಮಕ್ಕಳೆಂಬುದನ್ನೂ ನೋಡದೆ ಪುಟ್ಟ ಪುಟ್ಟ ಹೆಣ್ಣು ಮಕ್ಕಳ ಮೇಲೂ ಕೂಡಾ ಲೈಂಗಿಕ ದೌರ್ಜನ್ಯವನ್ನು ಎಸಗುತ್ತಿದ್ದಾರೆ. ಇಂತಹ ನಾಚಿಕೆಗೇಡಿನ ಪ್ರಕರಣಗಳ ಸುದ್ದಿಗಳು ಕೇಳಿ ಬರುತ್ತಲೇ ಇರುತ್ತವೆ. ಇದೀಗ ಅಂತಹದ್ದೇ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ವ್ಯಕ್ತಿಯೊಬ್ಬ 7 ನೇ ತರಗತಿಯಲ್ಲಿ ಓದುತ್ತಿರುವ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಾಲಕಿಯ ಕಿರುಚಾಟಕ್ಕೆ ಓಡಿ ಬಂದ ಸ್ಥಳೀಯರು ಅತ್ಯಾಚಾರಕ್ಕೆ ಯತ್ನಿಸಿದ ಧೂರ್ತನನ್ನು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಈ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
ಈ ಘಟನೆ ಆಂಧ್ರಪ್ರದೇಶದ ನಂದ್ಯಾಲ-ಅವುಕು ಮಂಡಲ ವ್ಯಾಪ್ತಿಯ ಕಾಶಿಪುರು ಗ್ರಾಮದಲ್ಲಿ ನಡೆದಿದ್ದು, ದಾಸಯ್ಯ ಎಂಬ ವ್ಯಕ್ತಿ 7 ನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮೊದಲೇ ಬಾಲಕಿಯ ಮೇಲೆ ಕಣ್ಣಿಟ್ಟಿದ್ದ ಆತ, ಆ ಬಾಲಕಿ ಮನೆಯಲ್ಲಿ ಒಬ್ಬಳೇ ಇದ್ದ ವೇಳೆ ಆಕೆಯ ಮೇಲೆ ಅತ್ಯಾಚಾರ ಎಸಗಲು ಮುಂದಾಗಿದ್ದಾನೆ. ಬಾಲಕಿ ಜೋರಾಗಿ ಕಿರುಚಾಡಿದಾಗ ಓಡಿ ಬಂದ ಸ್ಥಳಿಯರು, ಕಾಮುಕನನ್ನು ಹಿಡಿದು ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಜಾಡಿಸಿ ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ.
బాలికపై అత్యాచారయత్నం చేసిన వ్యక్తికి దేహశుద్ది చేసిన ప్రజలు
నంద్యాల – అవుకు మండలం కాశిపురం గ్రామంలో ఏడో తరగతి చదువుతున్న విద్యార్థినిపై అత్యాచారయత్నం చేసిన దాసయ్య.
బాలిక కేకలు వేయటంతో దాసయ్యను పట్టుకున్న స్థానికులు.. కట్టేసి కొట్టి, నిందితుడిని పోలీసులకు అప్పగించిన స్థానికులు. pic.twitter.com/BqVHR7ks2D
— Telugu Scribe (@TeluguScribe) September 2, 2024
ಈ ಕುರಿತ ವಿಡಿಯೋವನ್ನು TeluguScribe ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಲು ಮುಂದಾದವನನ್ನು ಸ್ಥಳೀಯರೆಲ್ಲರೂ ಸೇರಿ ಆತನನ್ನು ಕಂಬಕ್ಕೆg ಕಟ್ಟಿ ಹಿಗ್ಗಾಮುಗ್ಗಾ ಥಳಿಸುವ ದೃಶ್ಯವನ್ನು ಕಾಣಬಹುದು. ನಂತರ ಪೊಲೀಸರು ಬಂದು ಆತನನ್ನು ಠಾಣೆಗೆ ಎಳೆದೊಯ್ದಿದ್ದಾರೆ.
ಇದನ್ನೂ ಓದಿ: ಜೀವನದಲ್ಲಿ ಏನ್ ಬೇಕಾದರೂ ಮಾಡಿ ಆದ್ರೆ ದಯವಿಟ್ಟು ಮದುವೆಯಾಗ್ಬೇಡಿ, ಹೆಂಡತಿ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಗಂಡ
ಸೆಪ್ಟೆಂಬರ್ 2 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 12 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸ್ಥಳೀಯರು ತುಂಬಾನೇ ಒಳ್ಳೆಯ ಕೆಲಸ ಮಾಡಿದ್ದಾರೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಇಂತಹವರಿಗೆ ಕಠಿಣ ಶಿಕ್ಷೆ ವಿಧಿಸಬೇಕುʼ ಎಂದು ಹೇಳಿದ್ದಾರೆ.
ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ