Viral Video: ಬೀದಿನಾಯಿಗಾಗಿ ಸೆಕ್ಯುರಿಟಿ ಗಾರ್ಡ್​ನನ್ನು ಥಳಿಸುತ್ತಿರುವ ಆಗ್ರಾ ಯುವತಿ

Animal Rights Activist : ಬೀದಿನಾಯಿಗಳನ್ನು ಕೆಟ್ಟದಾಗಿ ನಡೆಸಿಕೊಂಡ ಆರೋಪದ ಮೇಲೆ ಆಗ್ರಾ ಸೊಸೈಟಿಯ ಸೆಕ್ಯುರಿಟಿ ಗಾರ್ಡ್​ಗೆ ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಥಳಿಸಿದ ವಿಡಿಯೋ ವೈರಲ್ ಆಗಿದೆ.

Viral Video: ಬೀದಿನಾಯಿಗಾಗಿ ಸೆಕ್ಯುರಿಟಿ ಗಾರ್ಡ್​ನನ್ನು ಥಳಿಸುತ್ತಿರುವ ಆಗ್ರಾ ಯುವತಿ
ಸೆಕ್ಯುರಿಟಿ ಗಾರ್ಡ್​ನನ್ನು ಥಳಿಸುತ್ತಿರುವ ಆಗ್ರಾ ಯುವತಿ
Follow us
TV9 Web
| Updated By: ಶ್ರೀದೇವಿ ಕಳಸದ

Updated on: Aug 16, 2022 | 11:23 AM

Animal Rights Activist : ಈ ವೀಡಿಯೋದಲ್ಲಿ ಇಪ್ಪತ್ತರ ಆಸುಪಾಸಿನಲ್ಲಿರುವ ಯುವತಿ ಮೊದಲು ತನ್ನನ್ನು ತಾನು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಡಿಂಪಿ ಮಹೇಂದ್ರ ಎಂದು ಪರಿಚಯಿಸಿಕೊಳ್ಳುತ್ತಾಳೆ. ನಂತರ ಆಗ್ರಾದ ರೆಸಿಡೆನ್ಶಿಯಲ್ ಸೊಸೈಟಿಯ ಸೆಕ್ಯುರಿಟಿ ಗಾರ್ಡ್‌ಗೆ ಥಳಿಸುತ್ತಾಳೆ. ಅವನು ಬೀದಿನಾಯಿಗಳನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾನೆ ಎಂದು ಆರೋಪಿಸಿ ಬೀದಿಯಲ್ಲಿ ದೌರ್ಜನ್ಯ ಎಸಗುತ್ತಾಳೆ. ಭಾನುವಾರ ನಡೆದ ಈ ಘಟನೆಯ ವಿಡಿಯೋ ವೈರಲ್ ಆಗಿದೆ. ಆಗ್ರಾ ಪೊಲೀಸರು ವಿಡಿಯೋವನ್ನು ಗಮನಿಸಿ, ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಎಂದು ಹೇಳಿಕೊಳ್ಳುವ ಈ ಯುವತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಸುಮಾರು 2.10 ನಿಮಿಷಗಳ ಈ ಕ್ಲಿಪ್‌ನಲ್ಲಿ ಈ ಯುವತಿ, ಬಿಜೆಪಿ ಸಂಸದೆ ಮತ್ತು ಪ್ರಾಣಿ ಹಕ್ಕುಗಳ ಕಾರ್ಯಕರ್ತೆ ಮೇನಕಾ ಗಾಂಧಿ ಅವರಿಗೆ ದೂರು ನೀಡುವುದಾಗಿ ವ್ಯಕ್ತಿಗೆ ಬೆದರಿಕೆ ಹಾಕಿದ್ದಾಳೆ.

ಪೊಲೀಸ್ ಅಧೀಕ್ಷಕ (ನಗರ) ವಿಕಾಸ್ ಕುಮಾರ್, ‘ಯುವತಿಯೊಬ್ಬಳು ಸಿಬ್ಬಂದಿಗೆ ಕೋಲಿನಿಂದ ಥಳಿಸುವ ವಿಡಿಯೋ ವೈರಲ್ ಆಗುತ್ತಿದೆ, ಆಗ್ರಾ ಪೊಲೀಸರು ಈ ವಿಡಿಯೋ ಆಧಾರದ ಮೇಲೆ ಕಾನೂನು ಕ್ರಮ ಕೈಗೊಳ್ಳುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಹೊಸ ಆಗ್ರಾ ಪೊಲೀಸ್ ಠಾಣೆಯ ಎಸ್‌ಎಚ್‌ಒ ವಿಜಯ್ ವಿಕ್ರಮ್ ಸಿಂಗ್,  ‘ಎಲ್‌ಐಸಿ ಅಧಿಕಾರಿ ಕಾಲೊನಿಯಲ್ಲಿ ಕೆಲಸ ಮಾಡುವ ಗಾರ್ಡ್ ಅಖಿಲೇಶ್ ಸಿಂಗ್ ಅವರು ದೂರು ನೀಡಿದ್ದಾರೆ. ವೈರಲ್ ವಿಡಿಯೋದಲ್ಲಿ ಥಳಿಸಿದ ಈ ಯುವತಿಯ ಮಾಹಿಯನ್ನು ಪಡೆಯಲು ಪ್ರಯತ್ನಿಸುತ್ತಿದ್ದೇವೆ’ ಎಂದು ಪಿಟಿಐಗೆ ತಿಳಿಸಿದ್ದಾರೆ.

ಈ ವ್ಯಕ್ತಿ ನ್ಯೂ ಆಗ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಎಲ್ಐಸಿ ಆಫೀಸರ್ ಕಾಲೊನಿಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾನೆ. ತಾನು ಮಾಜಿ ಸೈನಿಕ ಎಂದು ವಿಡಿಯೋದಲ್ಲಿ ಹೇಳಿರುವುದು ಕೇಳುತ್ತದೆ. ತಾನು ಕಾಲೊನಿಯಿಂದ ಬೀದಿನಾಯಿಗಳನ್ನು ಓಡಿಸಲು ಪ್ರಯತ್ನಿಸುತ್ತಿದ್ದೆ ಎನ್ನುವುದೂ ಕೇಳಿಸುತ್ತದೆ.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್