Viral Video: ಪೊಲೀಸರಿಗೆ ಇಲ್ಲವಾಯ್ತಾ ರಕ್ಷಣೆ; ಠಾಣೆಗೆ ನುಗ್ಗಿ ಆರಕ್ಷಕರ ಮೇಲೆ ಅಮಾನುಷವಾಗಿ ಹಲ್ಲೆ 

ಸಾಮಾನ್ಯ ಜನರಿಗೆ ರಕ್ಷಣೆ ನೀಡಲು ಪೊಲೀಸರು ಬೇಕು. ಆದರೆ ಇದೀಗ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಹೌದು ಇದಕ್ಕೆ ನಿದರ್ಶನದಂತಿರುವ  ಆಘಾತಕಾರಿ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಪೊಲೀಸ್ ಠಾಣೆಯೊಳಗೆ ನುಗ್ಗಿ ಗೂಂಡಾಗಳು ನಮ್ಮ ರಕ್ಷಣೆ ಮಾಡುವ  ಪೊಲೀಸರ ಮೇಲೆಯೇ  ಅಮಾನುಷವಾಗಿ  ಹಲ್ಲೆ ನಡೆಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

Viral Video: ಪೊಲೀಸರಿಗೆ ಇಲ್ಲವಾಯ್ತಾ ರಕ್ಷಣೆ; ಠಾಣೆಗೆ ನುಗ್ಗಿ ಆರಕ್ಷಕರ ಮೇಲೆ ಅಮಾನುಷವಾಗಿ ಹಲ್ಲೆ 
ವೈರಲ್​​ ವಿಡಿಯೋ ಇಲ್ಲಿದೆ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 15, 2024 | 6:14 PM

ಇತ್ತೀಚಿನ ದಿನಗಳಲ್ಲಿ ಜನರಿಗೆ ರಕ್ಷಣೆ ನೀಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಹೌದು ಜನಗಳೇ ಪೊಲೀಸರ ಮೇಲೆ ಹಲ್ಲೆ ನಡೆಸುವಂತಹ ಅವಾಚ್ಯ ಶಬ್ಧಗಳಿಂದ ಬೈಯುವಂತಹ ಅದೆಷ್ಟೋ ಘಟನೆಗಳನ್ನು ನೀವು ನೋಡಿರಬಹುದು. ಅದೇ ರೀತಿ ಇಲ್ಲೊಂದು  ಘಟನೆ ನಡೆದಿದ್ದು, ಠಾಣೆಗೆ ನುಗ್ಗಿದಂತಹ ಗೂಂಡಾಗಳು ಪೊಲೀಸರ ಮೇಲೆಯೇ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ.  ಈ ಘಟನೆ ಸುಮಾರು ಒಂದು ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಈ ವಿಡಿಯೋ ಚುನಾವಣೆ ಹತ್ತಿರವಾಗುತ್ತಿದ್ದಂತೆ ವೈರಲ್​​ ಆಗುತ್ತಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ.  ಅಲ್ಲಿನ ಉತ್ತರ ದಿನಾಜ್ಪುರದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದರು. ಆ ಸಂದರ್ಭದಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ ಎಂದು ತೀವ್ರ ಆಕ್ರೋಶಗೊಂಡ ಪ್ರತಿಭಟನಾಕಾರರು, ಪ್ರತಿಭಟನಾ ಸ್ಥಳದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು ಮಾತ್ರವಲ್ಲದೆ, ಬಂಗಾಳದ ಕಲಿಯಾಗಂಜ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಠಾಣೆಗೂ ಬೆಂಕಿ ಇಟ್ಟಿದ್ದರು.  ಈ ಘಟನೆಯ ಕುರಿತ ವಿಡಿಯೋವೊಂದು ಇದೀಗ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಠಾಣೆಗೆ ನುಗ್ಗಿದ ಪ್ರತಿಭಟನಾಕಾರರು, ಅಮಾನವೀಯ ರೀತಿಯಲ್ಲಿ ಪೋಲೀಸರ ಮೇಲೆ  ಹಲ್ಲೆ ನಡೆಸಿರುವಂತಹ  ದೃಶ್ಯವನ್ನು ಕಾಣಬಹುದು. ಈ ವಿಡಿಯೋವನ್ನು @SaffronSwamyy ಎಂಬ ಹೆಸರಿನ X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಭಯಾನಕ ಸನ್ನಿವೇಶ; ನಮ್ಮನ್ನು ರಕ್ಷಿಸುವ ಪೊಲೀಸರಿಗೆ ಇಂತಹ ಸ್ಥಿತಿ ಬಂದರೆ, ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು ಊಹಿಸಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

13 ಸೆಕೆಂಡುಗಳ ವೈರಲ್ ವಿಡಿಯೋದಲ್ಲಿ ಪೋಲೀಸ್ ಠಾಣೆಗೆ ನುಗ್ಗಿದಂತಹ ಗೂಂಡಾಗಳು ಪೊಲೀಸರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ, ಪೊಲೀಸರು ಕೈ ಮುಗಿದು ಕೇಳಿಕೊಂಡರು ಕರಗದ ಇವರುಗಳು ಸಿಕ್ಕ ಸಿಕ್ಕ ವಸ್ತುಗಳನ್ನು ಕೈಯಲ್ಲಿ ಹಿಡಿದುಕೊಂಡು ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವಂತಹ ಭೀಕರ  ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಇಲಿ ಬೋನು ಕಾಲಿಗೆ ಕಟ್ಟಿ ಹೊಸ ಫ್ಯಾಶನ್​​​ನಲ್ಲಿ ಬೀದಿಗಿಳಿದ ಯುವತಿ

ಫೆಬ್ರವರಿ 15 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಲ್ಲೆಲ್ಲಿ ಇಂತಹ ಪರಿಸ್ಥಿತಿ ಇದೆಯೋ ಅಲ್ಲಿ ರಾಷ್ಟ್ರಪತಿಗಳು ಕೂಡಲೇ ರಾಷ್ಟ್ರಪತಿಗಳ ಆಳ್ವಿಕೆಯನ್ನು ಹೇರಬೇಕುʼ ಎಂಬ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ದೃಶ್ಯ ತುಂಬಾ ಭಯಾನಕವಾಗಿದೆʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ನಮ್ಮನ್ನು ಕಾಪಾಡುವಂತಹ ಪೊಲೀಸರಿಗೆಯೇ ರಕ್ಷಣೆ ಇಲ್ಲದಂತಾಯಿತೇ  ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ತ್ಯಾಜ್ಯದ ರಾಶಿ: ಭಕ್ತರ ಮೇಲೆ ಸಿಟ್ಟಾದ ವೈದ್ಯನಾಥ ದೈವ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಶಿಕ್ಷಕರ ಕೊರತೆ ಬಗ್ಗೆ ವಿದ್ಯಾರ್ಥಿಗಳ ವಿಡಿಯೋ ವೈರಲ್​: ಶಾಲೆಗೆ ಸಂಸದ ಭೇಟಿ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ