ಇತ್ತೀಚಿನ ದಿನಗಳಲ್ಲಿ ಜನರಿಗೆ ರಕ್ಷಣೆ ನೀಡುವ ಪೊಲೀಸರಿಗೆ ರಕ್ಷಣೆ ಇಲ್ಲದಂತಾಗಿದೆ. ಹೌದು ಜನಗಳೇ ಪೊಲೀಸರ ಮೇಲೆ ಹಲ್ಲೆ ನಡೆಸುವಂತಹ ಅವಾಚ್ಯ ಶಬ್ಧಗಳಿಂದ ಬೈಯುವಂತಹ ಅದೆಷ್ಟೋ ಘಟನೆಗಳನ್ನು ನೀವು ನೋಡಿರಬಹುದು. ಅದೇ ರೀತಿ ಇಲ್ಲೊಂದು ಘಟನೆ ನಡೆದಿದ್ದು, ಠಾಣೆಗೆ ನುಗ್ಗಿದಂತಹ ಗೂಂಡಾಗಳು ಪೊಲೀಸರ ಮೇಲೆಯೇ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗುತ್ತಿದೆ. ಈ ಘಟನೆ ಸುಮಾರು ಒಂದು ವರ್ಷಗಳ ಹಿಂದೆ ಪಶ್ಚಿಮ ಬಂಗಾಳದಲ್ಲಿ ನಡೆದಿದ್ದು, ಈ ವಿಡಿಯೋ ಚುನಾವಣೆ ಹತ್ತಿರವಾಗುತ್ತಿದ್ದಂತೆ ವೈರಲ್ ಆಗುತ್ತಿದೆ ಎಂದು ನೆಟ್ಟಿಗರು ಹೇಳುತ್ತಿದ್ದಾರೆ. ಅಲ್ಲಿನ ಉತ್ತರ ದಿನಾಜ್ಪುರದಲ್ಲಿ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಶಿಕ್ಷೆಗೆ ಒತ್ತಾಯಿಸಿ ಜನರು ಪ್ರತಿಭಟನೆ ನಡೆಸುತ್ತಿದ್ದರು. ಆ ಸಂದರ್ಭದಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಲಿಲ್ಲ ಎಂದು ತೀವ್ರ ಆಕ್ರೋಶಗೊಂಡ ಪ್ರತಿಭಟನಾಕಾರರು, ಪ್ರತಿಭಟನಾ ಸ್ಥಳದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದು ಮಾತ್ರವಲ್ಲದೆ, ಬಂಗಾಳದ ಕಲಿಯಾಗಂಜ್ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಠಾಣೆಗೂ ಬೆಂಕಿ ಇಟ್ಟಿದ್ದರು. ಈ ಘಟನೆಯ ಕುರಿತ ವಿಡಿಯೋವೊಂದು ಇದೀಗ ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ವೈರಲ್ ಆಗುತ್ತಿರುವ ಈ ವಿಡಿಯೋದಲ್ಲಿ ಠಾಣೆಗೆ ನುಗ್ಗಿದ ಪ್ರತಿಭಟನಾಕಾರರು, ಅಮಾನವೀಯ ರೀತಿಯಲ್ಲಿ ಪೋಲೀಸರ ಮೇಲೆ ಹಲ್ಲೆ ನಡೆಸಿರುವಂತಹ ದೃಶ್ಯವನ್ನು ಕಾಣಬಹುದು. ಈ ವಿಡಿಯೋವನ್ನು @SaffronSwamyy ಎಂಬ ಹೆಸರಿನ X ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, “ಭಯಾನಕ ಸನ್ನಿವೇಶ; ನಮ್ಮನ್ನು ರಕ್ಷಿಸುವ ಪೊಲೀಸರಿಗೆ ಇಂತಹ ಸ್ಥಿತಿ ಬಂದರೆ, ಇನ್ನೂ ಜನಸಾಮಾನ್ಯರ ಪರಿಸ್ಥಿತಿ ಹೇಗಿರಬಹುದು ಊಹಿಸಿ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.
Horrific Scenario & Situation !!
If that’s the Police/Security personal being treated then imagine the Plight of common public pic.twitter.com/Xy1bEEng1i
— Saffron Swamy (@SaffronSwamyy) February 15, 2024
13 ಸೆಕೆಂಡುಗಳ ವೈರಲ್ ವಿಡಿಯೋದಲ್ಲಿ ಪೋಲೀಸ್ ಠಾಣೆಗೆ ನುಗ್ಗಿದಂತಹ ಗೂಂಡಾಗಳು ಪೊಲೀಸರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ್ದಾರೆ, ಪೊಲೀಸರು ಕೈ ಮುಗಿದು ಕೇಳಿಕೊಂಡರು ಕರಗದ ಇವರುಗಳು ಸಿಕ್ಕ ಸಿಕ್ಕ ವಸ್ತುಗಳನ್ನು ಕೈಯಲ್ಲಿ ಹಿಡಿದುಕೊಂಡು ಪೊಲೀಸರ ಮೇಲೆ ಹಲ್ಲೆ ನಡೆಸುತ್ತಿರುವಂತಹ ಭೀಕರ ದೃಶ್ಯವನ್ನು ಕಾಣಬಹುದು.
ಇದನ್ನೂ ಓದಿ: ಇಲಿ ಬೋನು ಕಾಲಿಗೆ ಕಟ್ಟಿ ಹೊಸ ಫ್ಯಾಶನ್ನಲ್ಲಿ ಬೀದಿಗಿಳಿದ ಯುವತಿ
ಫೆಬ್ರವರಿ 15 ರಂದು ಹಂಚಿಕೊಳ್ಳಲಾದ ಈ ವಿಡಿಯೋ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಎಲ್ಲೆಲ್ಲಿ ಇಂತಹ ಪರಿಸ್ಥಿತಿ ಇದೆಯೋ ಅಲ್ಲಿ ರಾಷ್ಟ್ರಪತಿಗಳು ಕೂಡಲೇ ರಾಷ್ಟ್ರಪತಿಗಳ ಆಳ್ವಿಕೆಯನ್ನು ಹೇರಬೇಕುʼ ಎಂಬ ಕಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ʼಈ ದೃಶ್ಯ ತುಂಬಾ ಭಯಾನಕವಾಗಿದೆʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ನಮ್ಮನ್ನು ಕಾಪಾಡುವಂತಹ ಪೊಲೀಸರಿಗೆಯೇ ರಕ್ಷಣೆ ಇಲ್ಲದಂತಾಯಿತೇ ಎಂದು ಹೇಳಿದ್ದಾರೆ.
ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ