Video: ಮರಳು ಕಲಾಕೃತಿ ರಚಿಸಿ ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ಅಭಿನಂದಿಸಿದ ಕಲಾವಿದ
ಖ್ಯಾತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಅವರು ಸುಮಾರು 500 ಬಾಲ್ಗಳನ್ನು ಬಳಸಿ 20 ಅಡಿ ಉದ್ದದ ಬ್ಯಾಟ್‌ನ ಮರಳು ಶಿಲ್ಪವನ್ನು ರಚಿಸಿದ್ದು, ಐಸಿಸಿ ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ತನ್ನದೇ ರೀತಿಯಲ್ಲಿ ಅಭಿನಂದಿಸಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಶನಿವಾರ ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ನಡೆದಿದ್ದ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಭಾರತ ಸೋಲಿಸಿ ಟಿ20 ವಿಶ್ವಕಪ್ ಗೆದ್ದಿದೆ. ಆ ಮೂಲಕ 17 ವರ್ಷಗಳ ಬಳಿಕ ಭಾರತ ತಂಡ ಎರಡನೇ ಟಿ20 ವಿಶ್ವಕಪ್ ಅನ್ನು ತನ್ನದಾಗಿಸಿಕೊಂಡಿದೆ. ಮೈದಾನದಲ್ಲಿ ಭಾರತ ತಂಡ ತೋರಿದ ಅದ್ಭುತ ಸಾಧನೆಗೆ ಪಧಾನಿ ನರೇಂದ್ರ ಮೋದಿ ಸೇರಿದಂತೆ ಅನೇಕ ಗಣ್ಯರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಖ್ಯಾತ ಮರಳು ಶಿಲ್ಪಿ ಸುದರ್ಶನ್ ಪಟ್ನಾಯಕ್ ಅವರು ಪುರಿಯ ಕಡಲ ಕಿನಾರೆಯಲ್ಲಿ ಮರಳಿನಲ್ಲಿ ಸುಂದರ ಕಲಾಕೃತಿಯನ್ನು ರಚಿಸುವ ಮೂಲಕ ಟೀಮ್ ಇಂಡಿಯಾ ತಂಡಕ್ಕೆ ವಿಶೇಷವಾಗಿ ಅಭಿನಂದನೆ ಸಲ್ಲಿಸಿದ್ದಾರೆ. ಪಟ್ನಾಯಕ್ ಅವರು ಸುಮಾರು 500 ಕ್ರಿಕೆಟ್ ಬಾಲ್ಗಳನ್ನು ಬಳಸಿ 20 ಅಡಿ ಉದ್ದದ ಬ್ಯಾಟ್‌ನ ಮರಳು ಶಿಲ್ಪವನ್ನು ರಚಿಸಿದ್ದು, ಐಸಿಸಿ ಟಿ20 ವಿಶ್ವಕಪ್ ಗೆದ್ದ ಭಾರತ ಕ್ರಿಕೆಟ್ ತಂಡವನ್ನು ತನ್ನದೇ ರೀತಿಯಲ್ಲಿ ಅಭಿನಂದಿಸಿದ್ದಾರೆ. ಸದ್ಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ವೈರಲ್ ವಿಡಿಯೋ ಇಲ್ಲಿದೆ ನೋಡಿ:
VIDEO | Renowned sand artist Sudarsan Pattnaik has created a sand sculpture of 20-feet-long bat with 500 balls at Puri beach in Odisha to congratulate the Indian cricket team for winning the ICC T20 World Cup. pic.twitter.com/bCLLx2sgSf
— Press Trust of India (@PTI_News) June 30, 2024
ಇದನ್ನೂ ಓದಿ: ಮದುವೆಗೆ ಬಂದ ಅತಿಥಿಗಳಿಗೆ 66ಸಾವಿರ ರೂ. ನಗದು ಬಹುಮಾನ ; ಅದ್ದೂರಿ ಮದುವೆಯ ವಿಡಿಯೋ ವೈರಲ್
@PTI_News ಟ್ವಿಟರ್ ಖಾತೆಯಲ್ಲಿ ಮರಳು ಕಲಾಕೃತಿಯ ವಿಡಿಯೋ ಹಂಚಿಕೊಳ್ಳಲಾಗಿದ್ದು, ಸದ್ಯ ವಿಡಿಯೋ ಎಲ್ಲೆಡೆ ವೈರಲ್ ಆಗುತ್ತಿದೆ. ವಿಡಿಯೋ ಹಂಚಿಕೊಂಡ ಕೇವಲ ಎರಡು ಗಂಟೆಗಳಲ್ಲಿ 9 ಸಾವಿರಕ್ಕೂ ಹೆಚ್ಚು ವೀಕ್ಷಣೆಯನ್ನು ಪಡೆದುಕೊಂಡಿದೆ. ಜೊತೆಗೆ ಕಲಾವಿದನ ಕೈಚಳಕಕ್ಕೆ ಸಾಕಷ್ಟು ನೆಟ್ಟಿಗರು ಲೈಕ್ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ