AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News:ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ; ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ ರೈತ

ಸಾಮಾನ್ಯವಾಗಿ ಮನೆ, ಕಚೇರಿ, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿತ್ತು. ಆದರೆ ಇದೀಗಾ ರೈತನೊಬ್ಬ ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದಾನೆ. ಈ ಕ್ಯಾಮೆರಾಗಳು ಸೌರಶಕ್ತಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಏನಾದರೂ ಅನುಮಾನಾಸ್ಪದವಾಗಿ ಕಂಡರೆ ಅಲಾರಾಂ ಸದ್ದು ಮಾಡುತ್ತದೆ.

Viral News:ಗಗನಕ್ಕೇರಿದ ಬೆಳ್ಳುಳ್ಳಿ ಬೆಲೆ; ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ ರೈತ
Garlic prices soarImage Credit source: Pinterest
ಅಕ್ಷತಾ ವರ್ಕಾಡಿ
|

Updated on: Feb 17, 2024 | 12:00 PM

Share

ಬೆಳ್ಳುಳ್ಳಿ ಬೆಲೆ ರಾಕೆಟ್‌ ವೇಗದಲ್ಲಿ ಏರಿಕೆ ಕಾಣುತ್ತಿದ್ದು, ಮಹಾರಾಷ್ಟ್ರದಲ್ಲಿ ಕೆಜಿಗೆ 600 ರೂಪಾಯಿಗಳ ಗಡಿ ದಾಟಿದೆ. ಇತ್ತ ಸಾಮಾಜಿಕ ಜಾಲತಾಣದಲ್ಲಿ ಬೆಳ್ಳುಳ್ಳಿ ಕಬಾಬ್ ​ ಸಾಕಷ್ಟು ಟ್ರೆಂಡ್​​ ಆಗುತ್ತಿದ್ದರೆ ಇತ್ತ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ. ಸಾಮಾನ್ಯವಾಗಿ ಮನೆ, ಕಚೇರಿ, ಅಂಗಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿತ್ತು. ಆದರೆ ಇದೀಗಾ ರೈತನೊಬ್ಬ ಜಮೀನಿನಲ್ಲಿ ಸಿಸಿ ಕ್ಯಾಮೆರಾ ಅಳವಡಿಸಿದ್ದಾನೆ. ಬೆಳ್ಳುಳ್ಳಿ ಕಳ್ಳತನದ ಕೆಲವು ಘಟನೆಗಳು ಬೆಳಕಿಗೆ ಬಂದ ನಂತರ ಮಧ್ಯಪ್ರದೇಶದ ಚಿಂದ್ವಾಡ ಜಿಲ್ಲೆಯ ಮೊಹ್ಖೇದ್ ಪ್ರದೇಶದ ಐದಾರು ಗ್ರಾಮಗಳ ಹೊಲಗಳಲ್ಲಿ ರೈತರು ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದಾರೆ.

“ಈ ಕ್ಯಾಮೆರಾಗಳು ಸೌರಶಕ್ತಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಏನಾದರೂ ಅನುಮಾನಾಸ್ಪದವಾಗಿ ಕಂಡರೆ ಅಲಾರಾಂ ಸದ್ದು ಮಾಡಲಿದೆ. ಜೊತೆಗೆ ಕ್ಯಾಮೆರಾಗಳನ್ನು ಅಳವಡಿಸಿದ ನಂತರ ಕಳ್ಳತನಗಳು ಕಡಿಮೆಯಾಗಿದೆ” ಎಂದು ರಾಹುಲ್ ದೇಶಮುಖ್ ಎಂಬ ರೈತ ಹೇಳಿದ್ದಾರೆ. ಕಳೆದ 60 ವರ್ಷಗಳಲ್ಲಿ ಬೆಳ್ಳುಳ್ಳಿ ಬೆಲೆ ಇಷ್ಟೊಂದು ಏರಿಕೆ ಕಂಡಿಲ್ಲ. ಆದರೆ ಈಗ ಬೆಳ್ಳುಳ್ಳಿ ಕೃಷಿ ಮಾಡಿದ ರೈತರು ಶ್ರೀಮಂತರಾದರೂ ಕೂಡ ತಮ್ಮ ಬೆಳೆ ಕಳ್ಳತನವಾಗುವ ಭೀತಿಯಲ್ಲಿದ್ದಾರೆ.

ಇದನ್ನೂ ಓದಿ: ವಿದ್ಯಾರ್ಥಿಗಳ ಕನ್ಯತ್ವ ಪರೀಕ್ಷೆ ವರದಿ ಜೊತೆಗೆ ಹೆಸರು,ಫೋನ್ ನಂಬರ್ ಶೇರ್​​​​​​ ಮಾಡಿದ ಪ್ರತಿಷ್ಠಿತ ವಿಶ್ವವಿದ್ಯಾನಿಲಯ

2023ರಲ್ಲಿ ಬೆಳ್ಳುಳ್ಳಿಗೆ ಉತ್ತಮ ಬೆಲೆ ಸಿಗದ ಕಾರಣ ಸಾಕಷ್ಟು ರೈತರು ಬೆಳ್ಳುಳ್ಳಿ ಬೆಳೆ ಬೆಳೆಸುವದನ್ನು ಕೈಬಿಟ್ಟಿದ್ದರು. ಈ ಕಾರಣದಿಂದಾಗಿ ಈ ವರ್ಷ ಬೆಳ್ಳುಳ್ಳಿಯ ಬೆಲೆ ಗಗನಕ್ಕೇರಲು ಕಾರಣವಾಯಿತು ಎಂದು ಹೇಳಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್