Viral Video: ರಾಮನ ಭಜನೆಗೆ ನೃತ್ಯ ಮಾಡಿದ ಶಾಲಾ ವಿದ್ಯಾರ್ಥಿಗಳು

ಜನವರಿ 22 ರಂದು ಅಯೋಧ್ಯೆಯ ರಾಮ ಮಂದಿರದಲ್ಲಿ ಉದ್ಘಾಟನೆ ಹಾಗೂ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ದಿನಗಣನೆ ಶುರುವಾಗಿದೆ. ದೇಶದ ಎಲ್ಲೆಡೆ ಪೋಸ್ಟರ್ ತಯಾರಿ, ಸಿಹಿ ತಿಂಡಿಗಳ ತಯಾರಿ, ಆ ದಿನವನ್ನು ಹಬ್ಬದಂತೆ ಆಚರಿಸಲು ತಯಾರಿಗಳು ನಡೆಯುತ್ತಿವೆ. ಇನ್ನೊಂದೆಡೆ ರಾಮನ ಭಜನೆಗಳಿಗೆ ಡಾನ್ಸ್ ಮಾಡುವುದು, ಹಾಡು ಹಾಡುವುದು ಹೀಗೆ ಜನರು ತಮ್ಮ ಸಂಭ್ರಮವನ್ನು ಈ ಮೂಲಕ ತೋರ್ಪಡಿಸುತ್ತಿದ್ದಾರೆ. ಆದರೆ ಇದೀಗ ನಾಗ್ಪುರದ ಶಾಲಾ ವಿದ್ಯಾರ್ಥಿಗಳು ರಾಮನ ಭಜನೆ ಹಾಡಿಗೆ ಮುದ್ದಾಗಿ ನೃತ್ಯ ಮಾಡಿರುವ ವಿಡಿಯೋವೊಂದು ಎಲ್ಲರ ಗಮನ ಸೆಳೆಯುತ್ತಿದೆ.

Viral Video: ರಾಮನ ಭಜನೆಗೆ ನೃತ್ಯ ಮಾಡಿದ ಶಾಲಾ ವಿದ್ಯಾರ್ಥಿಗಳು
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 20, 2024 | 6:14 PM

ರಾಮ ಮಂದಿರ ಉದ್ಘಾಟನೆಯನ್ನು ಕಣ್ತುಂಬಿಸಿಕೊಳ್ಳಲು ಇಡೀ ದೇಶವೇ  ಜನವರಿ 22ಕ್ಕಾಗಿ ಎದುರು ನೋಡುತ್ತಿದೆ. ಅಯೋಧ್ಯೆಯಲ್ಲಿ ಈಗಾಗಲೇ ಪ್ರತಿಷ್ಠಾಪನೆಗೂ ಮುನ್ನ ನಡೆಯಬೇಕಾದ ಪೂಜಾ ಕೈಂಕರ್ಯಗಳು ಆರಂಭವಾಗಿದೆ. ಇತ್ತ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಲು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಲಿದ್ದಾರೆ. ಈ ನಡುವೆ ಮಹಾರಾಷ್ಟ್ರದ ನಾಗ್ಪುರದಲ್ಲಿ ಶಾಲಾ ವಿದ್ಯಾರ್ಥಿಗಳು ರಾಮನ ಭಜನೆಗೆ ಅದ್ಭುತವಾಗಿ ನೃತ್ಯ ಮಾಡಿದ್ದು, ಮಕ್ಕಳ ಜೊತೆಗೆ ಶಿಕ್ಷಕಿಯು ಹೆಜ್ಜೆ ಹಾಕಿದ್ದಾರೆ.

ಈ ವಿಡಿಯೋದಲ್ಲಿ ‘ರಾಮ್ ಆಯೇಂಗೆ’ ಭಜನೆ ಹಾಡಿಗೆ ಮಕ್ಕಳ ಜೊತೆಗೆ ಶಿಕ್ಷಕಿಯೂ ಕೂಡ ನೃತ್ಯ ಮಾಡಿದ್ದು, ವಿಡಿಯೋದಲ್ಲಿ ಶಿಕ್ಷಕಿಯೂ ಡಾನ್ಸ್ ಮಾಡುವುದನ್ನು ನೋಡುತ್ತಾ ವಿದ್ಯಾರ್ಥಿಗಳು ಕೂಡ ನೃತ್ಯ ಮಾಡುವುದು ಸ್ಪಷ್ಟವಾಗಿ ಕಾಣುತ್ತಿದೆ. ಈ ವಿಡಿಯೋವನ್ನು  ಎಎನ್ ಐ ಸುದ್ದಿ ಸಂಸ್ಥೆಯು  ಸೋಶಿಯಲ್ ಮೀಡಿಯಾ ಖಾತೆಯಲ್ಲಿ  ಪೋಸ್ಟ್ ಮಾಡಿದ್ದು,  ವಿಡಿಯೋಗೆ ನೆಟ್ಟಿಗರಿಂದ ಮೆಚ್ಚುಗೆಯ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ: ಕಂಡಕ್ಟರನ್ನು ಬಸ್ ನಿಲ್ದಾಣದಲ್ಲಿ ಬಿಟ್ಟು ಹೋದ ಡ್ರೈವರಣ್ಣ, ಮುಂದೇನಾಯ್ತು ನೋಡಿ? 

ವಿಡಿಯೋ ಇಲ್ಲಿದೆ ನೋಡಿ:

ಈ ವಿಡಿಯೋ ನೋಡಿದ ಬಳಕೆದಾರನೊಬ್ಬ, “ಜೈ ಹೋ ಚಾರೋ ತರಫ್ ಉತ್ಸವ’ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, “ದಿನದ ಅತ್ಯುತ್ತಮ ವಿಡಿಯೋ, ದೇಶ್ ಬದಲ್ ರಾ ಹೈ” ಎಂದಿದ್ದಾರೆ.  ಇನ್ನೊಬ್ಬರು, “ಶಿಕ್ಷಕರು ವಿದ್ಯಾರ್ಥಿಗಳಿಗಿಂತ ಹೆಚ್ಚು ಆನಂದಿಸುತ್ತಿದ್ದಾರೆಂದು ತೋರುತ್ತದೆ. ಶಿಕ್ಷಕಿಯ ಮುಖದಲ್ಲಿನ ಸಂತೋಷವು ಅತಿವಾಸ್ತವಿಕವಾಗಿದೆ! ಅದ್ಭುತವಾಗಿದೆ” ಎಂದು ಕಾಮೆಂಟ್ ಮಾಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
ಜೆಈ ರವೀಂದ್ರ ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಅರೋಪ ಹಿನ್ನೆಲೆ ದಾಳಿ
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
Video: ಮಂಜಿನ ಹೊದಿಕೆ ಹೊದ್ದು ಮಲಗಿದ ತಾಜ್​ಮಹಲ್
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
156 ದಿನ ಗರಿಷ್ಠ ಮಟ್ಟ ಕಾಯ್ದುಕೊಂಡ ಕೆಆರ್​​ಎಸ್, ಮೊದಲ ಬಾರಿಗೆ ದಾಖಲೆ
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಆಟವೆಲ್ಲ ರಂಪಾಟವಾದಾಗ; ಹದ್ದುಮೀರಿ ನಡೆದುಕೊಂಡ ಸ್ಪರ್ಧಿಗಳು
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ಕೈ ತುತ್ತಿನ ಹಿಂದಿರುವ ಮಹತ್ವದ ಬಗ್ಗೆ ನಿಮಗೆ ಗೊತ್ತಾ?
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
ವಿಷ್ಣು, ಗಣೇಶನ ಲಹರಿ ಇರುವ ಈ ದಿನದ ರಾಶಿ ಭವಿಷ್ಯ ಹೇಗಿದೆ ತಿಳಿಯಿರಿ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
2025ರ ಸರ್ಕಾರಿ ಕ್ಯಾಲೆಂಡರ್ ಹೇಗಿರುತ್ತದೆ? ಇಲ್ಲಿದೆ ನೋಡಿ ವಿಡಿಯೋ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್