AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗರ್ಲ್ಸ್‌ ಹಾಸ್ಟೆಲ್‌ ಬಳಿ ಕಾಣಿಸಿಕೊಂಡ 100 ಕೆಜಿ ತೂಕದ ದೈತ್ಯ ಹೆಬ್ಬಾವು; ರಕ್ಷಣಾ ಕಾರ್ಯ ಹೇಗಿತ್ತು ನೋಡಿ…

ಈಗಂತೂ ಹಾವುಗಳು ಜನವಸತಿ ಪ್ರದೇಶಗಳ ಬಳಿ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿಬಿಟ್ಟಿದೆ. ಅದೇ ರೀತಿ ಅಸ್ಸಾಂ ವಿಶ್ವವಿದ್ಯಾಲಯದ ಗರ್ಲ್ಸ್‌ ಹಾಸ್ಟೆಲ್‌ ಬಳಿಯೂ 17 ಅಡಿ ಉದ್ದ ಹಾಗೂ ಸುಮಾರು 100 ಕೆಜಿ ತೂಕದ ದೈತ್ಯ ಹೆಬ್ಬಾವೊಂದು ಕಾಣಿಸಿಕೊಂಡಿದ್ದು, ಈ ಬೃಹತ್‌ ಹಾವನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿಬಿದ್ದಿದ್ದಾರೆ. ನಂತರ ಈ ಹಾವನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಈ ಕುರಿತ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಗರ್ಲ್ಸ್‌ ಹಾಸ್ಟೆಲ್‌ ಬಳಿ ಕಾಣಿಸಿಕೊಂಡ 100 ಕೆಜಿ ತೂಕದ ದೈತ್ಯ ಹೆಬ್ಬಾವು; ರಕ್ಷಣಾ ಕಾರ್ಯ ಹೇಗಿತ್ತು ನೋಡಿ…
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on: Dec 23, 2024 | 2:40 PM

Share

ಕಾಡಿನಲ್ಲಿ, ಪೊದೆಗಳಲ್ಲಿರುವ ಹಾವುಗಳು ಆಹಾರವನ್ನರಸುತ್ತಾ ಜನವಸತಿ ಪ್ರದೇಶಗಳ ಕಡೆಗೆ ಆಗಾಗ್ಗೆ ಬರುತ್ತಿರುತ್ತವೆ. ಈಗಂತೂ ದೈತ್ಯ ಹಾವುಗಳು ಅಲ್ಲಲ್ಲಿ ಕಾಣಿಸಿಕೊಳ್ಳುವ ಸುದ್ದಿಗಳು ಹೆಚ್ಚಾಗಿ ಕೇಳಿ ಬರುತ್ತಿವೆ. ಇದೀಗ ಅಸ್ಸಾಂ ವಿಶ್ವವಿದ್ಯಾನಿಲಯದ ಗರ್ಲ್ಸ್‌ ಹಾಸ್ಟೆಲ್‌ ಬಳಿಯು ದೈತ್ಯ ಹೆಬ್ಬಾವೊಂದು ಕಾಣಿಸಿಕೊಂಡಿದೆ. ಹೌದು ಸುಮಾರು 100 ಕೆಜಿ ತೂಕ ಹಾಗೂ 17 ಅಡಿ ಉದ್ದದ ಬರ್ಮೀಸ್‌ ಹೆಬ್ಬಾವು ಪತ್ತೆಯಾಗಿದ್ದು, ಈ ದೈತ್ಯ ಹಾವನ್ನು ಕಂಡು ವಿದ್ಯಾರ್ಥಿಗಳು ಬೆಚ್ಚಿ ಬಿದ್ದಿದ್ದಾರೆ. ನಂತರ ಈ ಹಾವನ್ನು ರಕ್ಷಣಾ ತಂಡದ ಸಹಾಯದಿಂದ ಯಶಸ್ವಿಯಾಗಿ ರಕ್ಷಿಸಲಾಗಿದ್ದು, ಈ ಕುರಿತ ವಿಡಿಯೋವೊಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಸಿಲ್ಚಾರ್‌ನಲ್ಲಿರುವ ಅಸ್ಸಾಂ ವಿಶ್ವವಿದ್ಯಾಲಯದ ಗರ್ಲ್ಸ್‌ ಹಾಸ್ಟೆಲ್‌ ಬಳಿ ಡಿಸೆಂಬರ್‌ 18 ರಂದು ರಾತ್ರಿ 10.30 ರ ಸುಮಾರಿಗೆ 100 ಕೆಜಿ ತೂಕದ ಈ ದೈತ್ಯ ಹೆಬ್ಬಾವು ಕಾಣಿಸಿಕೊಂಡಿದೆ. ವನ್ಯಜೀವಿ ಸಂಶೋಧಕ ಮತ್ತು ಸಂರಕ್ಷಣಾ ತಜ್ಞ ಬಿಶಾಲ್‌ ಸೋನರ್‌ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಉರಗ ರಕ್ಷಕ ತ್ರಿಕಲ್‌ ಚಕ್ರವರ್ತಿ ಅವರ ಸಹಾಯದಿಂದ ಹಾವನ್ನು ರಕ್ಷಿಸಿ ಬರೈಲ್ ವನ್ಯಜೀವಿ ಅಭಯಾರಣ್ಯಕ್ಕೆ ಕಳುಸಿಕೊಟ್ಟಿದ್ದಾರೆ. ಅರಣ್ಯ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳು ನಮ್ಮ ತಂಡದ ಸಹಕಾರದಿಂದ ಈ ದೈತ್ಯ ಹಾವನ್ನು ಯಶಸ್ವಿಯಾಗಿ ಹಿಡಿಯಲು ಸಾಧ್ಯವಾಯಿತು ಎಂದು ಚಕ್ರವರ್ತಿ ಹೇಳಿದ್ದಾರೆ. ‌

ವೈರಲ್​ ವಿಡಿಯೋ ಇಲ್ಲಿದೆ ನೋಡ:

ಮಾಧ್ಯಮಗಳೊಂದಿಗೆ ಮಾತನಾಡಿದ ಬಿಶಾಲ್‌ ಸೋನಾರ್‌ ʼಇದು ಬರಾಕ್‌ ಕಣಿವೆ ಪ್ರದೇಶಗಳಲ್ಲಿ ಕಂಡು ಬರುವ ದೈತ್ಯ ಹೆಬ್ಬಾವುಗಳಾಗಿದ್ದು, ಈ ಬರ್ಮೀಸಗ ಹೆಬ್ಬಾವು ಮನುಷ್ಯನಿಗೆ ಯಾವುದೇ ರೀತಿಯ ತೊಂದರೆಯಾಗಲಿ ಅಥವಾ ದಾಳಿಯನ್ನಾಗಲಿ ಮಾಡುವುದಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ತಾಳಿ ಕಟ್ಟುವ ಪದ್ಧತಿ ಬದಲಿಗೆ ಸಂವಿಧಾನದ ಮೇಲೆ ಪ್ರಮಾಣ ಮಾಡಿ ವಿಶಿಷ್ಟವಾಗಿ ಮದುವೆಯಾದ ನವ ಜೋಡಿ

factostats ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾದ ಈ ವಿಡಿಯೋದಲ್ಲಿ ರಕ್ಷಣಾ ತಂಡದ ಸದಸ್ಯರು ಬರೋಬ್ಬರಿ 17 ಅಡಿ ಉದ್ದದ ಬರ್ಮೀಸ್‌ ಹಾವನ್ನು ರಕ್ಷಿಸುವಂತಹ ದೃಶ್ಯವನ್ನು ಕಾಣಬಹುದು. ಈ ದೈತ್ಯ ಹೆಬ್ಬಾವನ್ನು ಕಂಡು ಎಲ್ಲರೂ ಬೆಚ್ಚಿ ಬಿದ್ದಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?