Viral: ತಬ್ಬಿಕೊಂಡು ಕುಣಿದಿದ್ದಕ್ಕಾಗಿ 7 ಕಾಲೇಜು ವಿದ್ಯಾರ್ಥಿಗಳ ಅಮಾನತು

Assam : ಅಸ್ಸಾಂನ ಖಾಸಗಿ ಕಾಲೇಜೊಂದರ ತರಗತಿಯಲ್ಲಿ ಈ ಘಟನೆ ನಡೆದಿದೆ. 11ನೇ ತರಗತಿಗೆ ಸೇರಿದ ಈ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಕಾಲೇಜಿಗೆ ಸೇರಿ ಕೇವಲ 15 ದಿನಗಳಷ್ಟೇ ಕಳೆದಿದ್ದವು.

Viral: ತಬ್ಬಿಕೊಂಡು ಕುಣಿದಿದ್ದಕ್ಕಾಗಿ 7 ಕಾಲೇಜು ವಿದ್ಯಾರ್ಥಿಗಳ ಅಮಾನತು
source : internet
Follow us
TV9 Web
| Updated By: ಶ್ರೀದೇವಿ ಕಳಸದ

Updated on:Aug 12, 2022 | 2:27 PM

Silchar :  ಅಸ್ಸಾಮಿನ ಸಿಲ್ಚಾರ್​ನ ರಾಮಾನುಜ್ ಗುಪ್ತಾ ಎಂಬ ಖಾಸಗಿ ಕಾಲೇಜಿನಲ್ಲಿ 11ನೇ ತರಗತಿಯ ವಿದ್ಯಾರ್ಥಿ-ವಿದ್ಯಾರ್ಥಿನಿಯರು  ಪರಸ್ಪರ ತಬ್ಬಿಕೊಂಡು ಕುಣಿಯುತ್ತಿದ್ದುದನ್ನು ಅದೇ ತರಗತಿಯ ಮತ್ತೊಬ್ಬ ವಿದ್ಯಾರ್ಥಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದು ವೈರಲ್ ಆಗುತ್ತಿದ್ದಂತೆ ಕಾಲೇಜಿನ ಆಡಳಿತ ಮಂಡಳ ಗಮನಕ್ಕೆ ಬಂದಿದೆ. ತಕ್ಷಣವೇ ವಿದ್ಯಾರ್ಥಿಗಳನ್ನು ಕಾಲೇಜಿಗೆ ಹಾಜರಾಗದಂತೆ ನಿರ್ಬಂಧ ವಿಧಿಸಿಲಾಗಿದೆ. ಏಳು ಜನರಲ್ಲಿ ನಾಲ್ಕು ಹುಡುಗಿಯರು ಮೂರು ಹುಡುಗರಿದ್ದಾರೆ. ಇವರ ಅನುಚಿತ ವರ್ತನೆಗೆ ಕಾಲೇಜು ಮಂಡಳಿಯು ವಿದ್ಯಾರ್ಥಿಗಳಿಗೆ ನೋಟೀಸ್ ನೀಡಿದೆ. ಸಂಸ್ಥೆಯ ಶಿಸ್ತನ್ನು ಉಲ್ಲಂಘಿಸಿದ ಕಾರಣ ನಿರ್ಧಿಷ್ಠ ಅವಧಿಯವರೆಗೆ ತರಗತಿಗಳಿಗೆ ಹಾಜರಾಗದಂತೆ ಅಮಾನತು ಮಾಡಲಾಗಿದೆ.

ಕಾಲೇಜಿನ ಪ್ರಾಂಶುಪಾಲ ಪೂರ್ಣದೀಪ್ ಚಂದಾ, ‘ಶಿಕ್ಷಕರು ಇಲ್ಲದ ಸಮಯದಲ್ಲಿ ಊಟದ ಬಿಡುವಿನ ವೇಳೆ ವಿದ್ಯಾರ್ಥಿಗಳು ಹೀಗೆ ವರ್ತಿಸಿದ್ದಾರೆ. ಸುರಕ್ಷತೆ ಮತ್ತು ಶಿಸ್ತಿಗಾಗಿ ನಮ್ಮ ಕಾಲೇಜು ಆವರಣದಲ್ಲಿ ಸಿಸಿಟಿವಿ ಕ್ಯಾಮೆರಾಗಳಿವೆ. ಅಲ್ಲದೆ, ಕ್ಯಾಂಪಸ್‌ನಲ್ಲಿ ಮೊಬೈಲ್ ಫೋನ್‌ಗಳನ್ನೂ ನಿಷೇಧಿಸಲಾಗಿದೆ. ಈ ವಿದ್ಯಾರ್ಥಿಗಳು 11ನೇ ತರಗತಿಗೆ ಹಾಜರಾಗಿ ಕೇವಲ ಹದಿನೈದು ದಿನಗಳಷ್ಟೇ ಕಳೆದಿವೆ.’ ಎಂದು ಐಎಎನ್‌ಎಸ್‌ಗೆ ತಿಳಿಸಿದ್ದಾರೆ.

ಈ ಮಧ್ಯೆ, ಕಾಲೇಜು ಮಂಡಳಿಯು ಆ ಏಳು ವಿದ್ಯಾರ್ಥಿಗಳ ಪೋಷಕರನ್ನು ಕರೆಸಿ ಸಮಾಲೋಚನೆ ನಡೆಸಿದೆ. ಈ ಘಟನೆಯ ನಂತರ ಕಾಲೇಜು ಮಂಡಳಿ ಶಿಸ್ತಿನ ವಿಷಯವಾಗಿ ಇನ್ನಷ್ಟು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬಹುದು ಮತ್ತು ಶಿಸ್ತು ಉಲ್ಲಂಘಿಸಿದವರನ್ನು ವಜಾಗೊಳಿಸಬಹುದು ಎನ್ನುವುದೂ ಈ ಮೂಲಕ ತಿಳಿದುಬಂದಿದೆ.

ಇದನ್ನೂ ಓದಿ
Image
TV9ನಲ್ಲಿ ಪ್ರಕಟವಾದ ಸುದ್ದಿ ನೋಡಿ ಬೆಕ್ಕನ್ನು ಮಾಲೀಕರಿಗೆ ಒಪ್ಪಿಸಿದ ಯುವಕ; ಆತ ಹೇಳಿದ್ದೇನು ಗೊತ್ತಾ?
Image
Viral: ಜಮೀನಿಗೆ ಹೋಗಿ ಭಯಗೊಂಡ ರೈತ; ಅಷ್ಟಕ್ಕೂ ಜಮೀನಿನಲ್ಲಿ ಇದ್ದದ್ದು ಏನು? ನೀವೇ ನೋಡಿ
Image
Trending : ಒಂದು ಸೇತುವೆ ನಿರ್ಮಿಸಲು ಸರ್ಕಾರಕ್ಕೆ ಪುರುಸೊತ್ತಿಲ್ಲ ಅಲ್ಲವೆ?
Image
Viral News: ಅಪ್ಪುಗೆಯ ಮೂಲಕವೇ ಪ್ರತಿ ಗಂಟೆಗೆ 7 ಸಾವಿರ ರೂ ಸಂಪಾದಿಸುತ್ತಾನೆ..!

ಇನ್ನಷ್ಟು ವೈರಲ್​ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 2:26 pm, Fri, 12 August 22

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್