Viral Post: ಛೇ ಇವಳೆಂಥಾ ತಾಯಿ.. ಪುಟ್ಟ ಕಂದಮ್ಮನಿಗೆ ಸಿಗರೇಟ್‌ ಸೇದಿಸಿ, ಮದ್ಯ ಕುಡಿಸಿದ ಅಮ್ಮ

ಪ್ರತಿಯೊಬ್ಬ ತಾಯಿಯು ತನ್ನ ಮಕ್ಕಳನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾಳೆ. ಆದರೆ ಇಲ್ಲೊಬ್ಬಳು ಮಹಾನ್‌ ತಾಯಿ ಮಾತ್ರ ತನ್ನ ಹೆತ್ತ ಕಂದಮ್ಮನಿಗೆಯೇ ಸಿಗರೇಟ್‌ ಸೇದಿಸಲು ಹಾಗೂ ಮದ್ಯ ಕುಡಿಸಲು ಒತ್ತಾಯಿಸಿ ಹಿಂಸಿಸಿದ್ದಾಳೆ. ಈ ಆಘಾತಕಾರಿ ಘಟನೆಗೆ ಸಂಬಂಧಿಸಿದ ಸುದ್ದಿಯೊಂದು ಇದೀಗ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ. 

Viral Post: ಛೇ ಇವಳೆಂಥಾ ತಾಯಿ.. ಪುಟ್ಟ ಕಂದಮ್ಮನಿಗೆ ಸಿಗರೇಟ್‌ ಸೇದಿಸಿ, ಮದ್ಯ ಕುಡಿಸಿದ ಅಮ್ಮ
ವೈರಲ್​​ ಫೋಸ್ಟ್
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jun 20, 2024 | 3:37 PM

ತಾಯಿಯಂದಿರಿಗೆ ತಮ್ಮ ಮಕ್ಕಳೆಂದರೆ ಎಲ್ಲಿಲ್ಲದ ಪ್ರೀತಿ. ಮುದ್ದು ಮಕ್ಕಳಿಗೆ ಒಂದೆಟು ಕೊಡಲು ಕೂಡಾ ತಾಯಂದಿರು ಹಿಂದೆ ಮುಂದೆ ನೋಡುತ್ತಾರೆ. ಆದರೆ ಇಲ್ಲೊಬ್ಬಳು ಕ್ರೂರಿ ತಾಯಿ ತನ್ನ 20 ತಿಂಗಳ ಮುಗುವಿಗೆ ಸಿಗರೇಟ್‌ ಸೇದುವಂತೆ, ಮದ್ಯ ಸೇವಿಸುವಂತೆ ಒತ್ತಾಯಿಸಿ ಹಿಂಸಿಸಿದ್ದಾಳೆ. ಈ ಆಘಾತಕಾರಿ ಘಟನೆಗೆ ಸಂಬಂಧಿಸಿದ ಸುದ್ದಿಯೊಂದು ಇದೀಗ ವೈರಲ್‌ ಆಗಿದ್ದು, ಹೆತ್ತ ತಾಯಿಯ ಹೀನ ಕೃತ್ಯಕ್ಕೆ ನೆಟ್ಟಿಗರು ಗರಂ ಆಗಿದ್ದಾರೆ.

ಅಸ್ಸಾಂ ರಾಜ್ಯದ ಸಿಲ್ಚಾರ್‌ ಎಂಬಲ್ಲಿ ಈ ಆಘಾತಕಾರಿ ಘಟನೆ ನಡೆದಿದ್ದು, ಮಹಿಳೆಯೊಬ್ಬಳು ತನ್ನ 20 ತಿಂಗಳ ಮಗುವಿಗೆ ಸಿಗರೇಟ್‌ ಸೇದಲು ಮತ್ತು ಮದ್ಯಪಾನ ಮಾಡುವಂತೆ ಒತ್ತಾಯಿಸಿದ್ದಾಳೆ ಎಂಬ ಆರೋಪ ಕೇಳಿ ಬಂದಿದೆ.  ವರದಿಗಳ ಪ್ರಕಾರ ಕಳೆದ ಬುಧವಾದ ರಾತ್ರಿ ತಾಯಿಯೊಬ್ಬಳು ತನ್ನ ಹೆತ್ತ ಕಂದಮ್ಮನಿಗೆ ಸಿಗರೇಟ್‌ ಸೇದಿಸಲು ಹಾಗೂ ಮದ್ಯ ಕುಡಿಸಲು ಒತ್ತಾಯಿಸಿದ್ದಾಳೆ. ಈ ಬಗ್ಗೆ ಮಕ್ಕಳ ಸಹಾಯವಾಣಿ ಸೆಲ್‌ನಲ್ಲಿ ದೂರು ದಾಖಲಾಗಿದ್ದು, ತಾಯಿಯನ್ನು ವಶಕ್ಕೆ ಪಡೆದು ಮಗುವನ್ನು ರಕ್ಷಿಸಲಾಗಿದೆ. ಸದ್ಯ ತಾಯಿ ಮತ್ತು ಮಗು ಇಬ್ಬರೂ  ಮಕ್ಕಳ ಕಲ್ಯಾಣ ಸಮಿತಿಯ (CWC) ವಶದಲ್ಲಿದ್ದು, ಈ ಘಟನೆಯ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಿ, ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮಕ್ಕಳ ಸಹಾಯವಾಣಿ ಸೆಲ್‌ ಅಧಿಕಾರಿಗಳು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಈ ಕುರಿತ ಪೋಸ್ಟ್‌ ಒಂದನ್ನು ForMenIndia_ ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು, ಮಹಿಳೆಯೊಬ್ಬರು ತನ್ನ 20 ತಿಂಗಳ ಮಗುವಿಗೆ ಸಿಗರೇಟ್‌ ಸೇದಲು ಮತ್ತು ಮದ್ಯಪಾನ ಮಾಡಲು ಒತ್ತಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಆಧಾರದ ಮೇಲೆ  ಮಕ್ಕಳ ಸಹಾಯವಾಣಿ ಸೆಲ್‌ ಮಗುವನ್ನು ರಕ್ಷಿಸಿ, ತಾಯಿಯನ್ನು ವಿಚಾರಣೆಗಾಗಿ ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.

ಇದನ್ನೂ ಓದಿ: ಸಮುದ್ರ ತೀರದಲ್ಲಿ ಪ್ರೇಮಿಗಳಿಬ್ಬರ ರೊಮ್ಯಾನ್ಸ್, ಪ್ರಿಯಕರ ನೋಡುತ್ತಿದ್ದಂತೆ ಅಲೆಗಳಲ್ಲಿ ಕೊಚ್ಚಿ ಹೋದ ಯುವತಿ‌

ವೈರಲ್‌ ಆಗಿರುವ ಫೋಟೋದಲ್ಲಿ ತಾಯಿಯೊಬ್ಬಳು ತನ್ನ ಕಂದಮ್ಮನಿಗೆ ಸಿಗರೇಟ್‌ ಸೇದಲು ಒತ್ತಾಯಿಸುತ್ತಿರುವ ದೃಶ್ಯವನ್ನು ಕಾಣಬಹುದು.

ಜೂನ್‌ 15 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 1 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಇದು ನಿಜಕ್ಕೂ ಆಘಾತಕಾರಿ ಘಟನೆ ಆಕೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಸೋಷಿಯಲ್‌ ಮೀಡಿಯಾ ಬಳಕೆದಾರರು ಒತ್ತಾಯಿಸಿದ್ದಾರೆ.

ಮತ್ತಷ್ಟು ವೈರಲ್​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್