AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಸ್ಪೇಸ್ ಕಾಫಿ; ಬಾಹ್ಯಾಕಾಶದಲ್ಲಿ ವಿಶೇಷ ಕಪ್​ನಲ್ಲಿ ಕಾಫಿ ಕುಡಿದ ಗಗನಯಾತ್ರಿ

Space: ಗಗನಯಾತ್ರಿ ಸಮಂತಾ ಕ್ರಿಸ್ಟೋಫೊರೆಟ್ಟಿ ಬಾಹ್ಯಾಕಾಶದಲ್ಲಿ ಮಾಮೂಲಿ ಕಪ್‌ನಿಂದ ಕಾಫಿ ಕುಡಿಯಲು ಪ್ರಯತ್ನಿಸುತ್ತಾರೆ. ಆದರೆ ಅದು ವಿಫಲವಾದಾಗ ಅವರು ವಿಶೇಷ ಸ್ಪೇಸ್​ ಕಪ್​ ಅನ್ನು ಬಳಸುತ್ತಾರೆ. ಆ ಕಪ್ ಮತ್ತು ಬಾಹ್ಯಾಕಾಶದಲ್ಲಿ ಕಾಫಿ ಕುಡಿಯುವುದನ್ನು ನೋಡುವ ಕುತೂಹಲ ನಿಮಗಿದೆಯೇ? ಹಾಗಿದ್ದರೆ ನೋಡಿ ಈ ವಿಡಿಯೋ. 

Viral Video: ಸ್ಪೇಸ್ ಕಾಫಿ; ಬಾಹ್ಯಾಕಾಶದಲ್ಲಿ ವಿಶೇಷ ಕಪ್​ನಲ್ಲಿ ಕಾಫಿ ಕುಡಿದ ಗಗನಯಾತ್ರಿ
ಬಾಹ್ಯಾಕಾಶದಲ್ಲಿ ಕಾಫಿ ಕುಡಿಯುತ್ತಿರುವ ಸಮಂತಾ ಕ್ರಿಸ್ಟೋಫೊರೆಟ್ಟಿ
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Oct 04, 2023 | 6:01 PM

Share

Space: ಇತ್ತೀಚೆಗಷ್ಟೇ ಹನಿ ಸ್ಯಾಂಡ್​ವಿಚ್​ ತಯಾರಿಸಿ ತಿಂದ ಗಗನಯಾತ್ರಿಗಳ ವಿಡಿಯೋ ನೋಡಿದ್ದಿರಿ. ಇದೀಗ  ಗಗನಯಾತ್ರಿ ಸಮಂತಾ ಕ್ರಿಸ್ಟೋಫರೊಟ್ಟಿ ಬಾಹ್ಯಾಕಾಶದಲ್ಲಿ ಕಾಫಿ ತಯಾರಿಸಿ ಕುಡಿದಿದ್ದಾರೆ. ಕಾಫಿ ತಯಾರಿಸಿದ ನಂತರ ಮಾಮೂಲಿ ಕಪ್​ನಲ್ಲಿ ಕುಡಿಯಲು ಪ್ರಯತ್ನಿಸಿದ ಅವರು ವಿಫಲರಾಗುತ್ತಾರೆ. ಆ ನಂತರ ಸ್ಪೇಸ್​ ಕಾಫಿ ಕಪ್​ ಮೂಲಕ ಕಾಫಿ ಕುಡಿಯುವಲ್ಲಿ ಯಶಸ್ವಿಯಾಗುತ್ತಾರೆ. ಈ ವಿಡಿಯೋ ಅನ್ನು ನೆಟ್ಟಿಗರು ಕುತೂಹಲದಿಂದ ನೋಡುತ್ತಿದ್ದಾರೆ. ಯುರೋಪಿಯನ್ ಸ್ಪೇಸ್ ಏಜೆನ್ಸಿ (ESA) ಹಂಚಿಕೊಂಡಿರುವ ಈ ವಿಡಿಯೋ ಅತಿವೇಗದಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ: Viral Video: ಮುಂಬೈ; ಶಿವಾಜಿಪಾರ್ಕ್​ ಈಜುಗೊಳದಲ್ಲಿ ಮರಿಮೊಸಳೆ ಪತ್ತೆ; ಕಡಿತಕ್ಕೆ ಒಳಗಾದ ಸಿಬ್ಬಂದಿ

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

#InternationalCoffeeDay ಎಂಬ ಹ್ಯಾಶ್‌ಟ್ಯಾಗ್​ನೊಂದಿಗೆ ಈ ವಿಡಿಯೋ ಅನ್ನು X ನಲ್ಲಿ ಅಕ್ಟೋಬರ್ 1ರಂದು ಪೋಸ್ಟ್ ಮಾಡಲಾಗಿದೆ. ಮೈಕ್ರೋಗ್ರ್ಯಾವಿಟಿ ಕಪ್​​ಗಳು ಗಗನಯಾತ್ರಿಗಳಿಗೆ ಕಾಫಿ ಕುಡಿಯಲು ಅನುಕೂಲವಾಗುವಂತೆ ವಿಶೇಷವಾಗಿ ವಿನ್ಯಾಸಗೊಳಿಸಲಾಗಿರುತ್ತದೆ. ಸಮಂತಾ ಕಾಫಿಯನ್ನು ಪ್ಯಾಕೆಟ್‌ನಿಂದ ಒಂದು ಮಾಮೂಲಿ ಕಪ್​ನಲ್ಲಿ ಸುರಿದು ಕುಡಿಯಲು  ಪ್ರಯತ್ನಿಸುತ್ತಾರೆ. ಆದರೆ ಒಂದು ಹನಿಯೂ ಅವರ ತುಟಿಯನ್ನು ಸೋಕುವುದೇ ಇಲ್ಲ.  ನಂತರ ವಿಶೇಷ ಸ್ಪೇಸ್​ ಕಪ್​ನಲ್ಲಿ ಆರಾಮದಾಯಕವಾಗಿ ಕುಡಿಯುತ್ತಾರೆ.

ಹೇಗಿದೆ ಈ ಸ್ಪೇಸ್​ ಕಾಫಿ ಕಪ್​

ಈತನಕ ಸುಮಾರು 3 ಮಿಲಿಯನ್​ ಜನರು ಈ ವಿಡಿಯೋ ನೋಡಿದ್ದಾರೆ. 2,300ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದಾರೆ. ಸಾವಿರಾರು ಜನರು ಪ್ರತಿಕ್ರಿಯಿಸಿದ್ದಾರೆ. ಈ ವಿಡಿಯೋ ನೋಡಿದ ನಂತರ ನನಗೆ 11 ಗಂಟೆಯ ಹೊತ್ತಿನಲ್ಲಿ ಕಾಫಿ ಬೇಕು ಎನ್ನಿಸುತ್ತಿದೆ ಎಂದಿದ್ದಾರೆ ಒಬ್ಬರು. ಗ್ರೇಟ್ ಬ್ಯಾಲೆನ್ಸ್​ ಎಂದು ಇನ್ನೊಬ್ಬರು ಹೇಳಿದ್ದಾರೆ.

ಇದನ್ನೂ ಓದಿ: Viral Video: ‘ಕ್ಯಾನ್ಸರ್​ಮುಕ್ತ​ಳಾಗಿ ನಿಮ್ಮೆದುರು ಇಂದು ಹೀಗೆ ಇರುತ್ತೇನೆಂದು ಅಂದುಕೊಂಡಿರಲೇ ಇಲ್ಲ’

ISSpresso! ನನಗನಿಸಿದಂತೆ ಬಾಹ್ಯಾಕಾಶದಲ್ಲಿ ಮೊದಲ ಸಲ ಕಾಫಿ ಕುಡಿದ ವಿಜ್ಞಾನಿ ಇವರಿರಬೇಕು ಎಂದಿದ್ಧಾರೆ ಮತ್ತೊಬ್ಬರು. ಈ ಪ್ರಾತ್ಯಕ್ಷಿಕೆ ತುಂಬಾ ಚೆನ್ನಾಗಿದೆ ಎಂದಿದ್ದಾರೆ ಮಗದೊಬ್ಬರು. ನೀವು ಸುರಕ್ಷಿತವಾದ ಮತ್ತು ಸುಂದರವಾದ ಜಗತ್ತನ್ನು ನಿರ್ಮಿಸುತ್ತಿದ್ದೀರಿ ಶುಭವಾಗಲಿ ಎಂದು ಹೇಳಿದ್ದಾರೆ ಮತ್ತೊಬ್ಬರು.

ಈ ವಿಡಿಯೋ ನೋಡಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​​ಗಾಗಿ ಕ್ಲಿಕ್ ಮಾಡಿ

Published On - 6:00 pm, Wed, 4 October 23

Follow Us
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್