AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಅಂತರಾಷ್ಟ್ರೀಯ ಯೋಗದಿನದಂದು ಅಂತರಿಕ್ಷದಲ್ಲಿ ಯೋಗಾಭ್ಯಾಸ ಮಾಡಿದ ಗಗನಯಾತ್ರಿ

ಈ ಬಾರಿಯ ಅಂತರಾಷ್ಟ್ರೀಯ ಯೋಗದಿನವನ್ನು ಭೂಮಿಯ ಮೇಲೆ ಮಾತ್ರವಲ್ಲದೆ ಬಾಹ್ಯಾಕಾಶದಲ್ಲೂ ಆಚರಿಸಲಾಯಿತು. ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ತಾವು ಬಾಹ್ಯಾಕಾಶದಲ್ಲಿ ಯೋಗಭ್ಯಾಸ ಮಾಡುವ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಇದೀಗ ವೈರಲ್ ಆಗಿದೆ.

Viral Post: ಅಂತರಾಷ್ಟ್ರೀಯ ಯೋಗದಿನದಂದು ಅಂತರಿಕ್ಷದಲ್ಲಿ ಯೋಗಾಭ್ಯಾಸ ಮಾಡಿದ ಗಗನಯಾತ್ರಿ
ವೈರಲ್ ಫೋಟೋ
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​|

Updated on: Jun 22, 2023 | 6:16 PM

Share

ಪ್ರತಿ ವರ್ಷ ಜೂನ್ 21ರಂದು ಅಂತರಾಷ್ಟ್ರೀಯ ಯೋಗದಿನವನ್ನು ಆಚರಿಸಲಾಗುತ್ತದೆ. ಈ ದಿನವನ್ನು ಮೊದಲು 2014ರಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಪ್ರಸ್ತಾಪಿಸಿದರು. ಹಾಗೂ 2015ರಲ್ಲಿ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಅಧಿಕೃತವಾಗಿ ಅಂಗೀಕರಿಸಲಾಯಿತು. ಅಂದಿನಿಂದ ಪ್ರಪಂಚದಾದದ್ಯಂತ ಜೂನ್ 21ರಂದು ಯೋಗ ದಿನವನ್ನು ಆಚರಿಸಲಾಗುತ್ತಿದೆ. ಈ ಬಾರಿಯ ಅಂತರಾಷ್ಟ್ರೀಯ ಯೋಗದಿನವನ್ನು ಕೂಡಾ ವಿಶ್ವದಾದ್ಯಂತ ಆಚರಿಸಲಾಗಿದ್ದು, ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಗಳವರೆಗೆ ಎಲ್ಲರೂ ಯೋಗಾಸನವನ್ನು ಪ್ರದರ್ಶಿಸಿದ್ದಾರೆ. ಮತ್ತು ತಮ್ಮ ಯೋಗಾಸನ ಫೋಟೋಗಳನ್ನು ಅನೇಕರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಈ ಬಾರಿ ವಿಶೇಷವೆನೆಂದರೆ ಅಂತರಾಷ್ಟ್ರೀಯ ಯೋಗದಿನವನ್ನು ಭೂಮಿಯ ಮೇಲೆ ಮಾತ್ರವಲ್ಲದೆ ಬಾಹ್ಯಾಕಾಶದಲ್ಲೂ ಆಚರಿಸಲಾಯಿತು. ಗಗನಯಾತ್ರಿಯೊಬ್ಬರು ವಿಶ್ವ ಯೋಗದಿನದ ಸಲುವಾಗಿ ಬಾಹ್ಯಾಕಾಶದಲ್ಲಿ ಯೋಗಾಭ್ಯಾಸ ಪ್ರದರ್ಶನ ಮಾಡಿದ್ದಾರೆ.

ಅಂತರಾಷ್ಟ್ರೀಯ ಬಾಹ್ಯಾಕಾಶದಲ್ಲಿ (ISS) ವಾಸಿಸುತ್ತಿರುವ ಮತ್ತು ಕಾರ್ಯನಿರ್ವಹಿಸುತ್ತಿರುವ ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ ಅವರು ಯೋಗದಿನವನ್ನು ಬಾಹ್ಯಾಕಾಶದಲ್ಲಿ ಆಚರಿಸಿದ್ದಾರೆ. ಅವರು ಅಂತರಾಷ್ಟ್ರೀಯ ಬಾಹ್ಯಾಕಾಶದಲ್ಲಿ ಯೋಗಾಭ್ಯಾಸ ಮಾಡುತ್ತಿರುವ ಫೋಟೊವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಈ ಫೋಟೋ ಇದೀಗ ವೈರಲ್ ಆಗಿದೆ.

ಇದನ್ನೂ ಓದಿ: Viral Video: ಟಿವಿಯಲ್ಲಿ ಫುಟ್ಬಾಲ್ ಪಂದ್ಯ ವೀಕ್ಷಿಸುತ್ತ ಈ ಬೆಕ್ಕಿನ ಮರಿ ಮಾಡಿದೇನು ನೋಡಿ? ಈ ಬೆಕ್ಕು ಅತ್ಯುತ್ತಮ ಗೋಲ್ ಕೀಪರ್ ಎಂದ ನೆಟ್ಟಿಗರು

ಗಗನಯಾತ್ರಿ ಸುಲ್ತಾನ್ ಅಲ್ ನೆಯಾಡಿ (@Astro_Alneyadi) ತಮ್ಮ ಅಧೀಕೃತ ಟ್ವಿಟರ್ ಖಾತೆಯಲ್ಲಿ ಯೋಗಾಸನ ಮಾಡುವ ಫೋಟೋವನ್ನು ಹಂಚಿಕೊಂಡಿದ್ದು, ಇಂದು ಅಂತರಾಷ್ಟ್ರೀಯ ಯೋಗ ದಿನ. ಮತ್ತು ಇಲ್ಲಿ ಅಂತರಾಷ್ಟ್ರೀಯ ಬಾಹ್ಯಾಕಾಶದಲ್ಲಿ ನಾನು ಸ್ವಲ್ಪ ಯೋಗವನ್ನು ಅಭ್ಯಾಸ ಮಾಡುತ್ತಿದ್ದೇನೆ. ವೈಯಕ್ತಿಕವಾಗಿ ಯೋಗವು ನನ್ನ ನೆಚ್ಚಿನ ಚಟುವಟಿಕೆ. ಯೋಗವು ದೇಹವನ್ನು ಬಲಪಡಿಸುವುದಲ್ಲದೆ ಮನಸ್ಸನ್ನು ಚುರುಕುಗೊಳಿಸುತ್ತದೆ ಮತ್ತು ಒತ್ತಡವನ್ನು ಕಡಿಮೆ ಮಾಡುತ್ತದೆ. ನಿಮ್ಮ ನೆಚ್ಚಿನ ಭಂಗಿ ಯಾವುದು?” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಜೂನ್ 21ರಂದು ಹಂಚಿಕೊಳ್ಳಲಾದ ಈ ಪೋಸ್ಟ್ 60.3 ಸಾವಿರ ವೀಕ್ಷಣೆಗಳನ್ನು ಹಾಗೂ 936 ಲೈಕ್ಸ್ ಗಳನ್ನು ಪಡೆದುಕೊಂಡಿದೆ. ಅನೇಕರು ಈ ಬಗ್ಗೆ ಕಮೆಂಟ್​​ ಕೂಡ ಮಾಡಿದ್ದಾರೆ. ಒಬ್ಬ ಬಳಕೆದಾರರು ‘ನಿಮ್ಮ ಅಂತರಾಷ್ಟ್ರೀಯ ಯೋಗ ದಿನಾಚರಣೆಯು ತುಂಬಾ ಚೆನ್ನಾಗಿದೆ ಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ತುಂಬಾ ಅದ್ಭುತವಾಗಿದೆ’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನು ಹಲವರು ಕಮೆಂಟ್ಸ್ ಬಾಕ್ಸ್ ನಲ್ಲಿ ಯೋಗದ ದಿನದ ಶುಭಾಶಯವನ್ನು ಕೋರಿದ್ದಾರೆ.

ಮತ್ತಷ್ಟು ವೈರಲ್ ವಿಡಿಯೋಗಾಗಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!