Viral Video: ರಾತ್ರಿ ಹೊತ್ತು ರಸ್ತೆಯಲ್ಲಿ ಕಾರು ನಿಲ್ಲಿಸಿದ ಮಹಿಳೆಯರು ಕದ್ದಿದ್ದೇನು ಗೊತ್ತಾ? ತಮಾಷೆಯ ವಿಡಿಯೊ ಫುಲ್​ ವೈರಲ್​

ಕಾರಿನಲ್ಲಿ ಬಂದ ಇಬ್ಬರು ಮಹಿಳೆಯರು ಏನು ಮಾಡಿದ್ದಾರೆ ನೋಡಿದ್ರೆ ನಿಜವಾಗಿಯೂ ನಿಮಗೂ ನಗು ಬರುವುದು ಗ್ಯಾರೆಂಟಿ! ಈ ತಮಾಷೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ನಗುವ ಎಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ.

Viral Video: ರಾತ್ರಿ ಹೊತ್ತು ರಸ್ತೆಯಲ್ಲಿ ಕಾರು ನಿಲ್ಲಿಸಿದ ಮಹಿಳೆಯರು ಕದ್ದಿದ್ದೇನು ಗೊತ್ತಾ? ತಮಾಷೆಯ ವಿಡಿಯೊ ಫುಲ್​ ವೈರಲ್​
ರಾತ್ರಿ ಹೊತ್ತು ರಸ್ತೆಯಲ್ಲಿ ಕಾರು ನಿಲ್ಲಿಸಿದ ಮಹಿಳೆಯರು ಕದ್ದಿದ್ದೇನು ಗೊತ್ತಾ?
Follow us
TV9 Web
| Updated By: shruti hegde

Updated on: Nov 21, 2021 | 9:46 AM

ಸಾಮಾಜಿಕ ಜಾಲತಾಣದಲ್ಲಿ ತಮಾಷೆಯ ವಿಡಿಯೊಗಳು ಸಾಕಷ್ಟು ಹರಿದಾಡುತ್ತವೆ. ಅವುಗಳಲ್ಲಿ ಕೆಲವು ಹೊಟ್ಟೆ ಹುಣ್ಣಾಗಿಸುವಷ್ಟು ನಗು ತರಿಸುತ್ತವೆ. ಅಂಥಹುದೇ ಒಂದು ವಿಡಿಯೊ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಾರಿನಲ್ಲಿ ಬಂದ ಇಬ್ಬರು ಮಹಿಳೆಯರು ಏನು ಮಾಡಿದ್ದಾರೆ ನೋಡಿದ್ರೆ ನಿಜವಾಗಿಯೂ ನಿಮಗೂ ನಗು ಬರುವುದು ಗ್ಯಾರೆಂಟಿ! ಈ ತಮಾಷೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆಯೇ ನೆಟ್ಟಿಗರು ನಗುವ ಎಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ತಮಾಷೆಯ ವಿಡಿಯೊ ಇದೆ ನೀವೇ ನೋಡಿ.

ಸಿಸಿಟಿಯಿಯಲ್ಲಿ ಸೆರೆಯಾದ ದೃಶ್ಯದ ವಿಡಿಯೊ ಇದೀಗ ಸಕತ್ ವೈರಲ್ ಆಗಿದೆ. ವಿಡಿಯೊದಲ್ಲೊ ಗಮನಿಸುವಂತೆ ರಾತ್ರಿ ಹೊತ್ತಿನಲ್ಲಿ ಕಾರೊಂದು ರಸ್ತೆಯಲ್ಲಿ ಸಾಗುತ್ತಿರುವುದನ್ನು ನೋಡಬಹುದು. ಇದ್ದಕ್ಕಿದ್ದಂತೆ ಕಾರು ರಸ್ತೆಯ ಬದಿಯಲ್ಲಿ ನಿಲ್ಲುತ್ತದೆ. ಗುಲಾಬಿ ಬಣ್ಣದ ಉಡುಗೆ ತೊಟ್ಟ ಓರ್ವ ಮಹಿಳೆ ಕಾರಿನಿಂದ ಇಳಿಯುವುದನ್ನು ದೃಶ್ಯದಲ್ಲಿ ನೋಡಬಹುದು.

View this post on Instagram

A post shared by MEMES.BKS?? (@memes.bks)

ಓರ್ವ ಮಹಿಳೆ ಕಾರಿನಿಂದ ಇಳಿದು ಮುಂದೆ ಸಾಗುತ್ತಾಳೆ. ಮಾಮೂಲಿಯಾಗಿ ನಡೆದಾಡುತ್ತಿದ್ದಂತೆ ವರ್ತಿಸುತ್ತಾಳೆ. ಅವಳ ಹಿಂದೆಯೇ ಕಪ್ಪು ಬಣ್ಣದ ಉಡುಗೆ ತೊಟ್ಟ ಮತ್ತೋರ್ವ ಯುವತಿ ಕಾರಿನಿಂದ ಇಳಿದು ನಡೆದು ಸಾಗುತ್ತಾಳೆ. ರಸ್ತೆ ಪಕ್ಕದಲ್ಲಿ ನೆಟ್ಟಿದ್ದ ಗಿಡವನ್ನು ಕಿತ್ತುಕೊಂಡು ಇಬ್ಬರೂ ಪರಾರಿಯಾಗಿದ್ದಾರೆ. ಈ ವಿಡಿಯೊ ಸಕತ್ ವೈರಲ್ ಆಗಿದೆ.

ವಿಡಿಯೊವನ್ನು ಇನ್ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳಲಾಗಿದೆ. ಸುಮಾರು 62,000 ಕ್ಕಿಂತಲೂ ಹೆಚ್ಚಿನ ವೀಕ್ಷಣೆಗಳನ್ನು ಗಳಿಸಿಕೊಂಡಿದೆ. ನೆಟ್ಟಿಗರು ತಮಾಷೆಯ ಎಮೋಜಿಗಳನ್ನು ಕಳುಹಿಸುವ ಮೂಲಕ ಪ್ರತಿಕ್ರಿಯೆ ನೀಡುತ್ತಿದ್ದಾರೆ. ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದ್ದು ಹಲವಾರು ತಮಾಷೆಯ ವಿಡಿಯೊವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಇನ್ನೋರ್ವರು ಪ್ರತಿಕ್ರಿಯಿಸುತ್ತಿದ್ದು, ಸರ್ಕಾರಿ ಗಿಡಗಳನ್ನೂ ಸಹ ಬಿಡುವುದಿಲ್ಲ ಎಂದಿದ್ದಾರೆ.

ಇದನ್ನೂ ಓದಿ:

Viral Video: ರಾಜಸ್ಥಾನದ ಮಹಿಳೆ ಮೇಲೆ ಜೆಸಿಬಿ ಹತ್ತಿಸಲು ಪ್ರಯತ್ನಿಸಿದ ವಿಡಿಯೋ ವೈರಲ್; ಕಾಂಗ್ರೆಸ್ ವಿರುದ್ಧ ಬಿಜೆಪಿ ವಾಗ್ದಾಳಿ

Viral Video: ವಧು ಮತ್ತು ಸ್ನೇಹಿತೆಯರು ಸೇರಿ ಪ್ರಿಯಾಂಕಾ ಚೋಪ್ರಾ ಹಾಡಿಗೆ ಸಕತ್ ಸ್ಟೆಪ್; ವಿಡಿಯೊ ಫುಲ್ ವೈರಲ್

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ