Video Viral: 3 ದಿನದಲ್ಲಿ 60 ಜನರನ್ನು ಮದುವೆಯಾದ ಮಹಿಳೆ

"ಒಬ್ಬ ವ್ಯಕ್ತಿಯನ್ನು ಜೀವನ ಸಂಗಾತಿಯನ್ನಾಗಿ ಮಾಡುವ ಪರಿಕಲ್ಪನೆ ನನಗೆ ಇಷ್ಟವಿಲ್ಲ, ನಾನು ನನ್ನ ಇಡೀ ಜೀವನವನ್ನು ಒಬ್ಬ ವ್ಯಕ್ತಿಗೆ ಮೀಸಲಿಡಲು ಇಷ್ಟ ಪಡುವುದಿಲ್ಲ" ಎಂದು ಮಹಿಳೆ ಹೇಳಿಕೊಂಡಿದ್ದಾಳೆ. ಸದ್ಯ ಈಕೆಯ ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

Video Viral: 3 ದಿನದಲ್ಲಿ 60 ಜನರನ್ನು ಮದುವೆಯಾದ ಮಹಿಳೆ
3 ದಿನದಲ್ಲಿ 60 ಜನರನ್ನು ಮದುವೆಯಾದ ಮಹಿಳೆ

Updated on: Jun 29, 2024 | 4:01 PM

ಆಸ್ಟ್ರೇಲಿಯಾದ 40 ವರ್ಷದ ಕಾರ್ಲಿ ಸಾರೆ ಎಂಬ ಮಹಿಳೆಯ ಮದುವೆಯ ಸಂಬಂಧಿಸಿದ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​​​​​ ಆಗಿದೆ. ವೃತ್ತಿಯಲ್ಲಿ ವೆಡ್ಡಿಂಗ್ ಫೋಟೋಗ್ರಾಫರ್ ಆಗಿರುವ ಈಕೆ ಮೂರು ದಿನಗಳ ತನ್ನ ವಿವಾಹ ಸಮಾರಂಭದಲ್ಲಿ ಒಟ್ಟು 60 ಜನರನ್ನು ವಿವಾಹವಾಗಿದ್ದಾಳೆ. 60 ರಲ್ಲಿ ಪುರುಷರು ಮತ್ತು ಮಹಿಳೆಯರೂ ಕೂಡ ಸೇರಿಸಿದ್ದಾರೆ. ಒಬ್ಬರನ್ನೇ ಜೀವನ ಸಂಗಾತಿಯನ್ನಾಗಿ ಆಯ್ಕೆ ಮಾಡಿಕೊಳ್ಳದೆ 60 ಮಂದಿಯನ್ನು ಒಟ್ಟಿಗೆ ಆಯ್ಕೆ ಮಾಡಿ ಮದುವೆಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಾರ್ಲಿ “ನನಗೆ ನನ್ನ ನಿರ್ಧಾರದ ಬಗ್ಗೆ ಹೆಮ್ಮೆಯಿದೆ. ನನ್ನ ಜೀವನದಲ್ಲಿ ಇವರೆಲ್ಲರೂ ಬಹಳ ಮುಖ್ಯ, ಹಾಗಾಗಿ ಅವರೆಲ್ಲರನ್ನೂ ಒಟ್ಟಿಗೆ ಮದುವೆಯಾಗಿದ್​ದೇನೆ ” ಎಂದು ಹೇಳಿಕೊಂಡಿದ್ದಾಳೆ. ಸದ್ಯ ಈಕೆಯ ಮದುವೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗುತ್ತಿದೆ.

ವೈರಲ್​ ವಿಡಿಯೋ ಇಲ್ಲಿದೆ ನೋಡಿ:

ಇದನ್ನೂ ಓದಿ: ಚಿತ್ರದಲ್ಲಿ ಅಡಗಿರುವ ಹಾವನ್ನು ಪತ್ತೆ ಹಚ್ಚಲು ನಿಮ್ಮಿಂದ ಸಾಧ್ಯವೇ?

“ಒಬ್ಬ ವ್ಯಕ್ತಿಯನ್ನು ಮದುವೆಯಾಗುವ ಪರಿಕಲ್ಪನೆಯು ನನಗೆ ಸರಿಹೊಂದುವುದಿಲ್ಲ. ನಾನು ನನ್ನ ಇಡೀ ಜೀವನವನ್ನು ಒಬ್ಬ ವ್ಯಕ್ತಿಗೆ ಮೀಸಲಿಡಲು ಇಷ್ಟ ಪಡುವುದಿಲ್ಲ. ಅದಕ್ಕಾಗಿಯೇ ನಾನು ನನ್ನ ಸ್ನೇಹಿತರೆಲ್ಲರನ್ನು ಮದುವೆಯಾಗಿದ್ದೇನೆ. ಇದರಲ್ಲಿ ಪುರುಷರು ಮತ್ತು ಮಹಿಳೆಯರು ಎಲ್ಲರೂ ಸೇರಿದ್ದಾರೆ” ಎಂದು ಕಾರ್ಲಿ ಹೇಳಿದ್ದಾರೆ.