AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮಾಲೀಕನ ತೊಡೆ ಮೇಲೆ ತಲೆಯಿಟ್ಟು ಮಲಗಿದ ಮರಿಯಾನೆ

ಪುಟಾಣಿಗಳು ಆನೆಮರಿಗಳು ಹಾಯಾಗಿ ನಿದ್ರಿಸುವುದನ್ನು ನೋಡೋದೇ ಚಂದ. ಗಜರಾಜನ ವಿಡಿಯೋಗಳು ಸೋಶಿಯಲ್‌ ಮೀಡಿಯಾದಲ್ಲಿ ಆಗಾಗ್ಗೆ ವೈರಲ್ ಆಗುತ್ತಿರುತ್ತವೆ. ಇದೀಗ ಮರಿಯಾನೆಯೊಂದು ಮಾಲೀಕನ ತೊಡೆ ಮೇಲೆ ಹಾಯಾಗಿ ನಿದ್ರಿಸಿದೆ. ಈ ಕ್ಯೂಟ್ ವಿಡಿಯೋ ನೆಟ್ಟಿಗರ ಗಮನ ಸೆಳೆದಿದೆ.  ಈ ಸ್ವಾರ್ಥ ಬಯಸದ ಪರಿಶುದ್ಧ ಪ್ರೀತಿಯನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ

Video: ಮಾಲೀಕನ ತೊಡೆ ಮೇಲೆ ತಲೆಯಿಟ್ಟು ಮಲಗಿದ ಮರಿಯಾನೆ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on: Jul 16, 2026 | 4:36 PM

Share

ಮರಿಯಾನೆಗಳ (baby elephant) ಆಟ ತುಂಟಾಟಗಳನ್ನು ನೋಡುವ ಖುಷಿಯೇ ಬೇರೆ. ಮನೆ ಮಾಲೀಕನ ಜತೆಗೆ ತುಂಟಾಟ ಮಾಡುತ್ತ ಪುಟಾಣಿ ಮಗುವಿನಂತೆ ವರ್ತಿಸುತ್ತದೆ. ಆದರೆ ಇದೀಗ ಮರಿಯಾನೆ ಮುಗ್ಧತೆ ನೀವು ಕಳೆದೇ ಹೋಗುತ್ತೀರಿ. ಮಾಲೀಕನ ತೊಡೆ ಮೇಲೆ ತಲೆಯಿಟ್ಟು ಮರಿಯಾನೆಯೊಂದು ನಿದ್ರೆಗೆ ಜಾರಿದೆ. ಈ ಮುದ್ದಾದ ದೃಶ್ಯವನ್ನು ನೆಟ್ಟಿಗರು ಕಣ್ತುಂಬಿಸಿಕೊಂಡಿದ್ದಾರೆ.

ಎಲಿಫೆಂಟ್ ರಿಸೆಕ್ಯೂರ್ (elephantresures) ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಳ್ಳಲಾಗಿದೆ. ಈ ಕ್ಲಿಪಿಂಗ್‌ನಲ್ಲಿ ಮಾಲೀಕನು ಲಾಲಿ ಹಾಡಿ ಮರಿಯಾನೆಯನ್ನು ಮಲಗಿಸಿಕೊಂಡಿದ್ದಾನೆ. ಮಾಲೀಕನ ಮಡಿಲಿನಲ್ಲಿ ಮರಿಯಾನೆ ಹಾಯಾಗಿ ನಿದ್ರಿಸುತ್ತಿರುವುದನ್ನು ಕಾಣಬಹುದು.

ವೈರಲ್‌ ವಿಡಿಯೋ ಇಲ್ಲಿದೆ

ಇದನ್ನೂ ಓದಿ: ರೈಲು ಹಳಿ ದಾಟಲು ಕಷ್ಟ ಪಡುತ್ತಿದ್ದ ಮರಿಯಾನೆಗೆ ತಾಯಾನೆ ಸಾಥ್‌, ವೈರಲ್‌ ಆಯ್ತು ದೃಶ್ಯ

ಈ ವಿಡಿಯೋ ಇಪ್ಪತ್ತೇಳು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ತುಂಬಾ ಮುದ್ದಾಗಿದೆ ಎಂದಿದ್ದಾರೆ. ಇನ್ನೊಬ್ಬರು, ನಿಷ್ಕಲ್ಮಶ ಪ್ರೀತಿಗಿಂತ ಮತ್ತೇನು ಬೇಕಿದೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ನನ್ನ ಹೃದಯ ತುಂಬಿ ಬಂತು ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಾಯಿನಂದಾ
ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ
'ನಕ್ಸಲಿಸಂನ ಎಲ್ಲ ಕುರುಹನ್ನೂ ಅಳಿಸಿಹಾಕಬೇಕು'; ಅಮಿತ್ ಶಾ ಹೇಳಿಕೆ
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಹಾರ್ಮುಜ್ ಜಲಸಂಧಿಯಲ್ಲಿ ಮುಳುಗಿದ ಹಡಗು; ಸಮುದ್ರದಲ್ಲಿ ತೇಲಾಡಿದ ಐಫೋನ್‌ಗಳು
ಸ್ಟಿಂಗ್ ಆಪರೇಷನ್: ಉನ್ನತ ಮಟ್ಟದ ತನಿಖೆಗೆ ನೀಡಲು ಸರ್ಕಾರ ಹಿಂದೇಟು!
ಸ್ಟಿಂಗ್ ಆಪರೇಷನ್: ಉನ್ನತ ಮಟ್ಟದ ತನಿಖೆಗೆ ನೀಡಲು ಸರ್ಕಾರ ಹಿಂದೇಟು!
ಸೂಳೆಕೆರೆಯ ಋಣ ತೀರಿಸಲು ಮುಂದಾದ ರೈತರು
ಸೂಳೆಕೆರೆಯ ಋಣ ತೀರಿಸಲು ಮುಂದಾದ ರೈತರು
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಬರಪೀಡಿತ ಪಟ್ಟಿಗೆ 9 ತಾಲೂಕುಗಳ ಸೇರ್ಪಡೆ: ತಾಲೂಕುಗಳ ಸಂಖ್ಯೆ 226ಕ್ಕೆ ಏರಿಕೆ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಸಿಎಂ ಡಿಕೆ ಶಿವಕುಮಾರ್ ಮನೆಗೆ ಭೇಟಿ ನೀಡಿದ ಹಿರಿಯ ನಟ ದೇವರಾಜ್ ಕುಟುಂಬ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
ಶ್ರೀರಂಗಪಟ್ಟಣ ದಸರಾ ವೈಭವಕ್ಕೆ ಚಾಲನೆ: ಚಾಮುಂಡೇಶ್ವರಿಗೆ ಪುಷ್ಪಾರ್ಚನೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
‘ಇಷ್ಟು ಕೆಳಮಟ್ಟಕ್ಕೆ ಇಳಿಯಬಾರದು’: ಗಾನವಿ ಬಗ್ಗೆ ಗಗನ್ ಚಿನ್ನಪ್ಪ ಟೀಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ರಾಹುಲ್ ಗಾಂಧಿ, ಪ್ರಿಯಾಂಕಾದೂ ಸ್ಟಿಂಗ್ ವಿಡಿಯೋ ಬರಬಹುದು: ಎಚ್​​ಡಿಕೆ
ಲಡಾಖ್‌ಗೆ 3,350 ಕೋಟಿ ರೂ. ಯೋಜನೆಗಳ ಕೊಡುಗೆ
ಲಡಾಖ್‌ಗೆ 3,350 ಕೋಟಿ ರೂ. ಯೋಜನೆಗಳ ಕೊಡುಗೆ