Viral Video: ಸರಳತೆಯ ಸಾಹುಕಾರ, ವಿದ್ಯಾರ್ಥಿನಿಗೆ ತನ್ನ ಆಸನ ಬಿಟ್ಟುಕೊಟ್ಟ ಬಾಗಲಕೋಟೆ ಜಿ.ಪಂ ಸಿಇಒ

ಅಧಿಕಾರದ ಮದದಲ್ಲಿ ದರ್ಪ ತೋರುವ ಅಧಿಕಾರಿಗಳ ನಡುವೆ ಬಾಗಲಕೋಟೆ ಜಿಲ್ಲಾ ಪಂಚಾಯತ್ ಸಿಇಒ ದ್ವಿತೀಯ ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದಂತಹ ವಿದ್ಯಾರ್ಥಿಯನ್ನು ತಮಗೆ ಮೀಸಲಿರಿಸಿದ್ದ ಆಸನದಲ್ಲಿ ಕೂರಿಸಿ, ಆಕೆಗೆ ಸನ್ಮಾನ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು ಇದೀಗ ವೈರಲ್ ಆಗಿದ್ದು, ಅಧಿಕಾರಿಯ ಸರಳತೆಗೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

Viral Video: ಸರಳತೆಯ ಸಾಹುಕಾರ, ವಿದ್ಯಾರ್ಥಿನಿಗೆ ತನ್ನ ಆಸನ ಬಿಟ್ಟುಕೊಟ್ಟ ಬಾಗಲಕೋಟೆ ಜಿ.ಪಂ ಸಿಇಒ
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on: May 02, 2024 | 12:15 PM

ಸರ್ಕಾರಿ ಅಧಿಕಾರಿಗಳು ಎಂದರೆ ಸಾಕು, ಹೆಚ್ಚಿನವರು ತಮ್ಮದೇ ಆದ ಹಮ್ಮುಬಿಮ್ಮು ರೂಢಿಸಿಕೊಂಡಿರುತ್ತಾರೆ. ಇನ್ನೂ ಕೆಲವರಂತೂ ಜನಸಾಮಾನ್ಯರ ಮೇಲೆ ತಮ್ಮ ಅಧಿಕಾರದ ದರ್ಪವನ್ನು ತೋರಿಸುತ್ತಿರುತ್ತಾರೆ. ಇಂತಹವರ ನಡುವೆ ಇಲ್ಲೊಬ್ಬರು ಅಧಿಕಾರಿ ಯಾವುದೇ ಹಮ್ಮಬಿಮ್ಮು ಇಲ್ಲದೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದಂತ ವಿದ್ಯಾರ್ಥಿಯನ್ನು ತಮ್ಮ ಕಛೇರಿಗೆ ಬರ ಹೇಳಿ, ಆಕೆಯನ್ನು ತಮಗೆ ಮೀಸಲಿರಿಸಿದ್ದ  ಆಸನದಲ್ಲಿ ಕೂರಿಸಿ ಸನ್ಮಾನ ಮಾಡಿದ್ದಾರೆ. ಈ ಕುರಿತ ವಿಡಿಯೋವೊಂದು  ವೈರಲ್ ಆಗಿದ್ದು,  ಇವರ ಈ ಸರಳತೆ ಎಲ್ಲರ ಗಮನ ಸೆಳೆಯುತ್ತಿದೆ.

ಬಾಗಲಕೋಟೆ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಶಿಧರ ಕುರೇರ ಅವರು ದ್ವಿತೀಯ ಪಿಯುಸಿ   ಪರೀಕ್ಷೆಯಲ್ಲಿ 600 ಕ್ಕೆ 590  (ಶೇ98.33) ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಂಡಿರುವ ವಿದ್ಯಾರ್ಥಿನಿಯನ್ನು ತಮ್ಮ ಕಛೇರಿಗೆ ಕರೆಸಿ, ಆಕೆಯನ್ನು ತಮ್ಮ ಆಸನದಲ್ಲಿಯೇ ಕೂರಿಸಿ ಸನ್ಮಾನ ಮಾಡಿದ್ದಾರೆ. ಇವರ ಈ ಸರಳ ನಡೆಗೆ ಸಂಬಂಧಿಸಿದ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

@royalbagalkot ಎಂಬ ಹೆಸರಿನ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದ್ದು, “ಬಾಗಲಕೋಟೆ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾದ ಶಶಿಧರ ಕುರೇರ ಅವರು ದ್ವಿತೀಯ ಪಿಯುಸಿ  ಕಲಾ ವಿಭಾಗದ ಪರೀಕ್ಷೆಯಲ್ಲಿ 600 ಕ್ಕೆ 590  ಅಂಕಗಳನ್ನು (ಶೇ98.33) ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ  ಕುಮಾರಿ ಐಶ್ವರ್ಯ ಕೌಜಲಗಿಗೆ ಸನ್ಮಾನಿಸಿದರು” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ. ವೈರಲ್ ವಿಡಿಯೋದಲ್ಲಿ ಶಶಿಧರ ಕುರೇರ ಅವರು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿ ಬಾಗಲಕೋಟೆ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುವ ವಿದ್ಯಾರ್ಥಿನಿಯನ್ನು ತಮ್ಮ ಆಸನದಲ್ಲಿ ಕೂರಿಸಿ ಆಕೆಗೆ ಶಾಲು ಹೊದಿಸಿ ಸನ್ಮಾನ ಮಾಡಿದಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ; ಹವಾಮಾನ ಇಲಾಖೆ ಎಚ್ಚರಿಕೆ

ಐದು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 6 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು,  ಕಾಮೆಂಟ್ಸ್ ಮಾಡುವ ಮೂಲಕ ಅಧಿಕಾರಿಯ ಸರಳತೆಗೆ ನೆಟ್ಟಿಗರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?