Video: ಒಬ್ಬ ಶಿಕ್ಷಕನನ್ನು ವಿದ್ಯಾರ್ಥಿಗಳು ಈ ಸ್ಥಿತಿಯಲ್ಲಿ ನಿಲ್ಲಿಸಬಾರದು, ಏನಾಗಿದೆ ಈ ಯುವಕರಿಗೆ?

ಅಲ್ಪಸಂಖ್ಯಾತ ಹಿಂದೂಗಳ ಮೇಲೆ ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ದೌರ್ಜನ್ಯ ನಿಲ್ಲುವಂತೆ ಕಾಣುತ್ತಿಲ್ಲ. ಇದೀಗ ಇದಕ್ಕೆ ಸಂಬಂಧಪಟ್ಟ ವಿಡಿಯೋವನ್ನು ಕೋಲ್ಕತ್ತಾದ ಇಸ್ಕಾನ್ ವಕ್ತಾರರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ದೃಶ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗುಂಪೊಂದು ವಿದ್ಯೆ ಕಲಿಸಿದ ಗುರುಗಳಿಗೆ ಅವಮಾನಿಸಿ ರಾಜೀನಾಮೆ ಕೊಡುವಂತೆ ಒತ್ತಾಯಿಸುತ್ತಿರುವ ದೃಶ್ಯವನ್ನು ಕಾಣಬಹುದು.

Video: ಒಬ್ಬ ಶಿಕ್ಷಕನನ್ನು ವಿದ್ಯಾರ್ಥಿಗಳು ಈ ಸ್ಥಿತಿಯಲ್ಲಿ ನಿಲ್ಲಿಸಬಾರದು, ಏನಾಗಿದೆ ಈ ಯುವಕರಿಗೆ?
ವೈರಲ್​​​ ವಿಡಿಯೋ
Updated By: ಅಕ್ಷಯ್​ ಪಲ್ಲಮಜಲು​​

Updated on: Aug 22, 2024 | 4:47 PM

ನೆರೆ ರಾಷ್ಟ್ರ ಬಾಂಗ್ಲಾದೇಶದಲ್ಲಿನ ಹಿಂಸಾಚಾರಕ್ಕೆ ಸಂಪೂರ್ಣ ದೇಶವೇ ಧಗಧಗಿಸುತ್ತಿದೆ. ಬಾಂಗ್ಲಾದ ಅಲ್ಪಸಂಖ್ಯಾತರಾಗಿರುವ ಹಿಂದೂಗಳ ಮೇಲೆ ದಾಳಿ ನಡೆಯುತ್ತಿದ್ದು, ಹಿಂದೂಗಳ ಮನೆ, ದೇವಸ್ಥಾನಗಳನ್ನು ಧ್ವಂಸಗೊಳಿಸಲಾಗಿದೆ. ಈ ದಾಳಿ, ದೌರ್ಜನ್ಯ ಖಂಡಿಸಿ ಪ್ರತಿಭಟನೆಗಳು ನಡೆದಿವೆ. ಹೀಗಿದ್ದರೂ ಅಲ್ಲಿನ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ನಿಲ್ಲುವಂತೆ ಕಾಣುತ್ತಿಲ್ಲ. ಇದೀಗ ಅಲ್ಲಿ ಹಿಂದೂಗಳ ಮೇಲಾಗುತ್ತಿರುವ ದೌರ್ಜನ್ಯಕ್ಕೆ ಸಂಬಂಧಪಟ್ಟ ವಿಡಿಯೋವನ್ನು ಕೋಲ್ಕತ್ತಾದ ಇಸ್ಕಾನ್ ವಕ್ತಾರರೊಬ್ಬರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ವೈರಲ್ ದೃಶ್ಯದಲ್ಲಿ ಮುಸ್ಲಿಂ ವಿದ್ಯಾರ್ಥಿಗಳ ಗುಂಪೊಂದು ಹಿಂದೂ ಎಂಬ ಕಾರಣಕ್ಕೆ ವಿದ್ಯೆ ಕಲಿಸಿದ ಗುರುಗಳಿಗೆಯೇ ಅವಮಾನಿಸಿ ರಾಜೀನಾಮೆ ಕೊಡುವಂತೆ ಒತ್ತಾಯಿಸುತ್ತಿರುವ ದೃಶ್ಯವನ್ನು ಕಾಣಬಹುದು.

ಕೋಲ್ಕತ್ತಾದ ಇಸ್ಕಾನ್ ವಕ್ತಾರ ರಾಧಾರಾಮನ್ ದಾಸ್ (RadharamnDas) ಈ ಕುರಿತ ಪೋಸ್ಟ್ ಸೋಷಿಯಲ್ ಮೀಡಿಯಾ ಪ್ಲಾಟ್ಫಾರ್ಮ್ ಎಕ್ಸ್ ನಲ್ಲಿ ಹಂಚಿಕೊಂಡಿದ್ದು, “ಬಾಂಗ್ಲಾದೇಶದಲ್ಲಿ ವಿದ್ಯೆ ಕಲಿಸಿದ ಮತ್ತೊಬ್ಬ ಹಿಂದೂ ಶಿಕ್ಷಕನನ್ನು ಮುಸ್ಲಿಂ ವಿದ್ಯಾರ್ಥಿಗಳು ಅವಮಾನಿಸಿದ್ದಾರೆ ಮತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿದ್ದಾರೆ. ಪ್ರತಿದಿನ ಬಾಂಗ್ಲಾದೇಶದಲ್ಲಿ ಸಾವಿರಾರು ಹಿಂದೂ ಕೆಲಸಗಾರರ ಮೇಲೆ ರಾಜೀನಾಮೆ ಪತ್ರಗಳಿಗೆ ಸಹಿ ಹಾಕುವಂತೆ ಒತ್ತಡ ಹೇರಲಾಗುತ್ತಿದೆ. ಬಾಂಗ್ಲಾದೇಶದಲ್ಲಿ ಕೆಲಸ ಮಾಡುತ್ತಿರುವ ಎಲ್ಲಾ 2.5 ಮಿಲಿಯನ್ ಹಿಂದೂಗಳನ್ನು ಕೆಲಸದಿಂದ ತೆಗೆದುಹಾಕುವುದು ಅವರ ಗುರಿಯಾಗಿದೆ” ಎಂಬ ಸುದೀರ್ಘ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್ ವಿಡಿಯೋದಲ್ಲಿ ವಿದ್ಯೆ ಕಲಿಸಿದ ಗುರುವಿನ ಶರ್ಟ್ ಗೆ ಸಿಗರೇಟ್ ಪ್ಯಾಕೆಟ್ ಪಿನ್ ಮಾಡಿ, ಮಾನವೀಯತೆಯನ್ನೂ ಮರೆತು ಆ ಶಿಕ್ಷಕನಿಗೆ ಅವಮಾನ ರಾಜೀನಾಮೆ ನೀಡಲು ಒತ್ತಾಯಿಸುತ್ತಿರುವ ದೃಶ್ಯವನ್ನು ಕಾಣಬಹುದು. ಏನೂ ಮಾಡಲಾದಗೆ ಅಸಹಾಯಕ ಪರಿಸ್ಥಿತಿಯಲ್ಲಿ ಕುಳಿತಿದ್ದ ಆ ಶಿಕ್ಷಕನ ಸ್ಥಿತಿ ಕಣ್ಣಂಚಲಿ ನೀರು ತರಿಸುವಂತಿದೆ.

ಇದನ್ನೂ ಓದಿ: ಹೊಲದಲ್ಲಿ ಕೆಲ್ಸ ಮಾಡಿ ದಣಿದು ಬಂದ್ರೂ ಕ್ರಿಕೆಟ್ ಆಡೋಕೆ ಅನ್ನದಾತನಿಗೆ ಏನ್ ಖುಷಿ ನೋಡಿ

ಆಗಸ್ಟ್ 21 ರಂದು ಹಂಚಿಕೊಳ್ಳಲಾದ ಈ ವಿಡಿಯೋ 7 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್ ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ‘ಗುರುವನ್ನು ಅವಮಾನಿಸಿದವನಿಗೆ ಕರ್ಮದ ಫಲ ಸಿಕ್ಕೇಸಿಗುತ್ತದೆ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು ‘ನಿಜಕ್ಕೂ ಬಾಂಗ್ಲಾದೇಶ ಹಿಂದುಗಳಿಗೆ ನರಕವಾಗಿದೆ’ ಎಂಬ ಕಾಮೆಂಟ್ ಬರೆದುಕೊಂಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ