ಉತ್ತರ ಪ್ರದೇಶದ ಗೋಂಡಾದಲ್ಲಿ ವ್ಯಕ್ತಿಯೊಬ್ಬ ಪ್ರಥಮ ಯುಪಿ ಗ್ರಾಮೀಣ ಬ್ಯಾಂಕ್‌ನಿಂದ 8.53 ಲಕ್ಷ ರೂ ನಗದು ದೋಚಿ ಪರಾರಿಯಾಗಿದ್ದಾನೆ. ಕ್ಯಾಷಿಯರ್ ಕೌಂಟರ್‌ನಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕಳ್ಳನ ಕೈಚಳಕದ ದೃಶ್ಯಾವಳಿಗಳು ಸೆರೆಯಾಗಿದೆ. ದೃಶ್ಯಗಳಲ್ಲಿ, ಆರೋಪಿಯು ಹೆಲ್ಮೆಟ್ ಧರಿಸಿ ನೇರವಾಗಿ ಬ್ಯಾಂಕ್ ಒಳಗೆ ಹೋಗುವ ಮೊದಲು ಕ್ಯಾಷಿಯರ್ ಕೌಂಟರ್ ಹೊರಗೆ ನಿಂತಿರುವುದು ಕಂಡುಬರುತ್ತದೆ. ಜನಸಾಮಾನ್ಯರಂತೆ ಇದ್ದು ಜನಸಂದಣಿ ಕಡಿಮೆಯಾಗುತ್ತಿದ್ದಂತೆ ನೇರವಾಗಿ ಕ್ಯಾಷಿಯರ್ ಕೌಂಟರ್ ಒಳಗೆ ನುಗ್ಗಿ ಬ್ಯಾಂಕ್ ಸಿಬ್ಬಂದಿಯೊಬ್ಬರ ಕುತ್ತಿಗೆಗೆ ಚೂರಿಯನ್ನು ಹಿಡಿದು ಹೆದರಿಸಿ ಹಣ ದೋಚಿ ಪರಾರಿಯಾಗಿದ್ದಾನೆ. ಸದ್ಯ ಈ ಎಲ್ಲಾ ಸನ್ನಿವೇಶಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಘಟನೆಯ ಕುರಿತು ಬ್ಯಾಂಕ್ ಮ್ಯಾನೇಜರ್ ಪೊಲೀಸರಿಗೆ ಮಾಹಿತಿ ನೀಡಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳಾದ ಅಮರೇಂದ್ರ ಪ್ರಸಾದ್ ಸಿಂಗ್ ಮತ್ತು ವಿನೀತ್ ಜೈಸ್ವಾಲ್ ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಬ್ಯಾಂಕ್ ನೌಕರರ ವಿಚಾರಣೆ ನಡೆಸಲಾಗುತ್ತಿದೆ. ಜೊತೆಗೆ ದರೋಡೆಕೋರನ ಪತ್ತೆಗೆ ಪೊಲೀಸರು ಐದು ತಂಡಗಳನ್ನು ರಚಿಸಲಾಗಿದೆ.
ಇದನ್ನೂ ಓದಿ: ಬೆಂಗಳೂರಿನ ಡೆಂಟಲ್ ಕ್ಲಿನಿಕ್ ವಿರುದ್ಧ ಕೋರ್ಟ್‌ನಲ್ಲಿ ಮೊಕದ್ದಮೆ ದಾಖಲು; 2 ಲಕ್ಷ ರೂ. ಪರಿಹಾರ ಧನ
ಮಾಧ್ಯಮಗಳೊಂದಿಗೆ ಮಾತನಾಡಿದ ಪೊಲೀಸ್ ಅಧಿಕಾರಿಯೊಬ್ಬರು, “ನಮಗೆ ಮಧ್ಯಾಹ್ನ 12:15 ರ ಸುಮಾರಿಗೆ ದರೋಡೆಯ ಬಗ್ಗೆ ಮಾಹಿತಿ ಬಂದಿದೆ. ಹೆಲ್ಮೆಟ್ ಧರಿಸಿದ ಅಪರಿಚಿತ ವ್ಯಕ್ತಿ ಸುಮಾರು 20 ನಿಮಿಷಗಳ ಕಾಲ ಬ್ಯಾಂಕ್‌ನೊಳಗೆ ಇದ್ದನು. ಅವನು ಹೆಚ್ಚಿನ ಜನರು ಹೊರಡುವವರೆಗೆ ಕಾದು ನಂತರ ಲೂಟಿ ಮಾಡಿದ್ದಾನೆ.ತನಿಖೆ ಆರಂಭವಾಗಿದೆ” ಎಂದು ಮಾಹಿತಿ ನೀಡಿದ್ದಾರೆ.
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ