AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಬೆಂಗ್ಳೂರಿನ ಇಡ್ಲಿ ಸಾಂಬಾರ್, ಮಸಾಲಾ ದೋಸೆ, ಫಿಲ್ಟರ್ ಕಾಫಿ ರುಚಿ ಸವಿದು ಫಿದಾ ಆದ ವಿದೇಶಿಗ

ವಿದೇಶದಿಂದ ಭಾರತಕ್ಕೆ ಬರುವ ವಿದೇಶಿಗರು ಇಲ್ಲಿನ ಪ್ರವಾಸಿ ತಾಣಗಳನ್ನು ಕಣ್ತುಂಬಿಸಿಕೊಳ್ಳುವುದರ ಜತೆಗೆ ಇಲ್ಲಿನ ಆಹಾರ ರುಚಿಯನ್ನು ಸವಿಯುತ್ತಾರೆ. ಆದರೆ ಸ್ಕಾಟಿಷ್ ಪ್ರವಾಸಿಗ ಹಗ್ ಬೆಂಗಳೂರನ್ನು ಭಾರತದ ಅತ್ಯುತ್ತಮ ಆಹಾರ ನಗರವೆಂದು ಘೋಷಿಸಿದ್ದಾರೆ. ಇಲ್ಲಿನ ದೋಸೆ, ಇಡ್ಲಿ ಸಾಂಬಾರ್‌ ಹಾಗೂ ಫಿಲ್ಟರ್ ಕಾಫಿ ರುಚಿ ಸವಿದು ಇಲ್ಲಿನ ಉಪಹಾರ ಸಂಸ್ಕೃತಿ ಫಿದಾ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಬೆಂಗ್ಳೂರಿನ ಇಡ್ಲಿ ಸಾಂಬಾರ್, ಮಸಾಲಾ ದೋಸೆ, ಫಿಲ್ಟರ್ ಕಾಫಿ ರುಚಿ ಸವಿದು ಫಿದಾ ಆದ ವಿದೇಶಿಗ
ಟ್ರಾವೆಲರ್‌ ಹಗ್‌Image Credit source: Instagram
ಸಾಯಿನಂದಾ
|

Updated on: Dec 02, 2025 | 10:55 AM

Share

ಕೆಲವರಿಗೆ ವಿವಿಧ ಆಹಾರಗಳನ್ನು (foods) ಸವಿಯುವುದೆಂದರೆ ಬಲು ಇಷ್ಟ. ಯಾವ ಊರಿಗೆ ಹೋಗಲಿ ಅಲ್ಲಿನ ವಿಶೇಷ ತಿಂಡಿ ತಿನಿಸುಗಳನ್ನು ಬಾಯಿ ಚಪ್ಪರಿಸಿಕೊಂಡು ತಿನ್ನುವುದನ್ನು ನೋಡಿರುತ್ತೀರಿ. ಆದರೆ ವಿದೇಶಿ ಪ್ರಜೆಯೊಬ್ಬರು ಬೆಂಗಳೂರಿನ ಗರಿಗರಿಯಾದ ದೋಸೆ ಹಾಗೂ ಮಲ್ಲಿಗೆಯಂತಹ ಮೃದುವಾದ ಇಡ್ಲಿ ಸವಿದು ಭಾರತದ ಅತ್ಯುತ್ತಮ ಆಹಾರ ನಗರ ಈ ಬೆಂಗಳೂರು (Bengaluru) ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಇಲ್ಲಿನ ತಿಂಡಿ ತಿನಿಸಿಗೆ ಫಿದಾ ಆಗಿರುವ ವಿದೇಶಿ ಪ್ರಜೆಯ ವಿಡಿಯೋ ಸದ್ಯ ವೈರಲ್ ಆಗಿದೆ. ನೆಟ್ಟಿಗರು ಈ ವಿದೇಶಿಗನ ಅಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ.

ಭಾರತದ ವಿವಿಧ ನಗರಗಳು ಸೇರಿದಂತೆ ಪಾಕಿಸ್ತಾನಕ್ಕೂ ತೆರಳಿ ಅಲ್ಲಿನ ಪ್ರವಾಸಿ ತಾಣಗಳು ಹಾಗೂ ಆಹಾರಗಳನ್ನು ಸವಿದಿದ್ದರು. ಆದರೆ  (hugh.abroad) ಹಗ್ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಪ್ರಶ್ನೋತ್ತರ ಸರಣಿಯನ್ನು ನಡೆಸಿದ್ದು, ಈ ವೇಳೆ ಬಳಕೆದಾರರೊಬ್ಬರು ಪ್ರತಿಯೊಂದು ದೇಶದಲ್ಲೂ ಅತ್ಯುತ್ತಮವಾದ ಆಹಾರ ನಗರವನ್ನು ಆಯ್ಕೆ ಮಾಡಿ ಎಂದಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ ನೋಡಿ

View this post on Instagram

A post shared by Hugh Abroad (@hugh.abroad)

ಕೇವಲ ಬೆಳಗಿನ ಉಪಾಹಾರ ಸಂಸ್ಕೃತಿಯಿಂದಾಗಿ ಭಾರತದ ಅತ್ಯುತ್ತಮ ಆಹಾರ ನಗರ ಬೆಂಗಳೂರು. ಬೆಂಗಳೂರಿನ ಬೆಳಗ್ಗಿನ ಉಪಹಾರವಾದ ಇಡ್ಲಿ ಸಾಂಬಾರ್, ಮಸಾಲಾ ದೋಸೆಯನ್ನು ಫಿಲ್ಟರ್ ಕಾಫಿಯೊಂದಿಗೆ ಶ್ಲಾಘಿಸಿದ್ದಾರೆ. ದೋಸೆಗಳು ತುಂಬಾ ಗರಿಗರಿಯಾಗಿವೆ. ಇಡ್ಲಿಯನ್ನು ಬಾಯಿಲ್ಲಿಟ್ಟರೆ ಕರಗುತ್ತದೆ ಎಂದಿದ್ದಾರೆ. ಇನ್ನು ಕರಾಚಿಯನ್ನು ಪಾಕಿಸ್ತಾನದ ಅತ್ಯುತ್ತಮ ಆಹಾರ ನಗರವೆಂದು ಆಯ್ಕೆ ಮಾಡಿರುವುದನ್ನು ನೀವು ನೋಡಬಹುದು.

ಇದನ್ನೂ ಓದಿ:ಬೆಂಗಳೂರು ಲಂಡನ್‌ನಂತಾಗಿದೆ: ಚಳಿಯಲ್ಲಿ ನಡುಗುತ್ತಾ ಅನುಭವ ಬಿಚ್ಚಿಟ್ಟ ಅಮೆರಿಕನ್ ಮಹಿಳೆ

ಈ ವಿಡಿಯೋ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಒಮ್ಮೆ ಈ ತಿನಿಸುಗಳನ್ನು ಮತ್ತೆ ಮತ್ತೆ ನೀವು ಬರುತ್ತೀರಿ ಎಂದಿದ್ದಾರೆ. ಮತ್ತೊಬ್ಬರು ನಿಮ್ಮ ಮಾತು ನೂರಕ್ಕೆ ನೂರು ಸತ್ಯ ಎಂದು ಹೇಳಿದ್ದಾರೆ ಎಂದು ಕಾಮೆಂಟ್ ಮಾಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್