AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ತಿಂಗಳಿಗೆ ಲಕ್ಷ ಸಂಪಾದನೆಯಿದ್ರೂ ವೀಕೆಂಡ್‌ನಲ್ಲಿ ರ‍್ಯಾಪಿಡೋ ಬೈಕ್ ಓಡಿಸುವ ಬೆಂಗಳೂರಿನ ಸಾಫ್ಟ್‌ವೇರ್‌ ಇಂಜಿನಿಯರ್

ಕೈತುಂಬಾ ಸಂಬಳ ಇದ್ರೂ ಖರ್ಚು ವೆಚ್ಚಗಳನ್ನು ತೂಗಿಸಿಕೊಂಡು ಹೋಗೋದು ಬೆಂಗಳೂರಿನಂತಹ ನಗರದಲ್ಲಿ ಸುಲಭವಲ್ಲ. ಹೌದು, ಆರಂಕಿ ಸಂಬಳ ಪಡೆಯುವ ಸಾಫ್ಟ್‌ವೇರ್ ಇಂಜಿನಿಯರ್ ಒಬ್ಬರು ವಾರಾಂತ್ಯದಲ್ಲಿ ರ‍್ಯಾಪಿಡೋ ಬೈಕ್ ಓಡಿಸುತ್ತಿದ್ದಾರೆ. ಇಂಜಿನಿಯರ್‌ರೊಬ್ಬರು ಎರಡು ಕೆಲಸವನ್ನು ಅವಲಂಬಿಸಿಕೊಂಡಿದ್ದಾರೆ. ಈ ಪೋಸ್ಟ್‌ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ತಿಂಗಳಿಗೆ ಲಕ್ಷ ಸಂಪಾದನೆಯಿದ್ರೂ ವೀಕೆಂಡ್‌ನಲ್ಲಿ ರ‍್ಯಾಪಿಡೋ ಬೈಕ್ ಓಡಿಸುವ ಬೆಂಗಳೂರಿನ ಸಾಫ್ಟ್‌ವೇರ್‌ ಇಂಜಿನಿಯರ್
ಎಕ್ಸ್‌ ಪೋಸ್ಟ್‌Image Credit source: Twitter
ಸಾಯಿನಂದಾ
|

Updated on: Jun 08, 2026 | 6:35 PM

Share

ಬೆಂಗಳೂರು, ಜೂನ್ 08: ಈಗಿನ ಕಾಲದಲ್ಲಿ ಸಂಪಾದನೆ ಎಷ್ಟಿದ್ರು ಕಡಿಮೆಯೇ. ಹೌದು, ಬೆಂಗಳೂರು (Bengaluru) ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಕೆಲಸಕ್ಕೆಂದು ಬಂದವರಲ್ಲಿ ಅನೇಕರು ಕೈಯಲ್ಲಿ ಒಂದು ಉದ್ಯೋಗವಿದ್ರೂ ಪಾರ್ಟ್ ಟೈಮ್ ಆಗಿ ಇನ್ನೊಂದು ಕೆಲಸ ಮಾಡ್ತಾರೆ. ಇದೀಗ ಎಂಎನ್‌ಸಿ ಕಂಪೆನಿಯಲ್ಲಿ ಕೈ ತುಂಬಾ ಸಂಬಳ ಪಡೆಯುವ ವ್ಯಕ್ತಿಯದ್ದು ಅದೇ ಕಥೆ. ಬೆಂಗಳೂರಿನ ಸಾಫ್ಟ್ ವೇರ್ ಉದ್ಯೋಗಿಯೊಬ್ಬರು ವಾರಾಂತ್ಯದಲ್ಲಿ ರ‍್ಯಾಪಿಡೋ ಬೈಕ್ ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಎಕ್ಸ್ ಖಾತೆಯಲ್ಲಿ ಹಂಚಿಕೊಂಡ ಈ ಪೋಸ್ಟ್ ಸದ್ಯ  ವೈರಲ್ ಆಗಿದ್ದು, ಆರ್ಥಿಕ ಅಭದ್ರತೆಯ ಕುರಿತು ಚರ್ಚೆಯನ್ನು ಹುಟ್ಟು ಹಾಕಿದೆ.

ಶಬಾಜ್ (Shabaz) ಎಂಬ ಬಳಕೆದಾರರು ತಮ್ಮ ಎಕ್ಸ್ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಂಡಿದ್ದಾರೆ. ನಾನು ನಗರದ ಬನ್ನೇರುಘಟ್ಟಕ್ಕೆ ಪ್ರಯಾಣಿಸಲು ರ‍್ಯಾಪಿಡೋ ಬೈಕ್ ಬುಕ್ ಮಾಡಿದೆ. ಪ್ರಯಾಣದ ವೇಳೆ ರ‍್ಯಾಪಿಡೋ ಬೈಕ್ ಚಾಲಕನನ್ನು ಮಾತನಾಡಿಸಿದೆ. ಮೊದಲು ನಾನು ಕನ್ನಡದಲ್ಲಿ ಮಾತನಾಡಿ, ನಂತರ ನನಗೆ ಕನ್ನಡ ಸರಿಯಾಗಿ ಬಾರದಿರುವುದನ್ನು ಅವರು ಗಮನಿಸಿದ್ರು. ತಕ್ಷಣವೇ ನನ್ನ ಜತೆಗೆ ಇಂಗ್ಲಿಷ್‌ ನಲ್ಲಿ ಮಾತನಾಡಲು ಶುರು ಮಾಡಿದ್ದಾರೆ. ಹೀಗೆ ಮಾತನಾಡುತ್ತಿದ್ದ ವೇಳೆ ನಾನು ಸಾಫ್ಟ್‌ವೇರ್ ಇಂಜಿನಿಯರ್ ಎಂದು ಹೇಳಿದೆ. ಆದರೆ ರ‍್ಯಾಪಿಡೋ  ಚಾಲಕ ಎಂಎನ್‌ಸಿ ಕಂಪನಿಯಲ್ಲಿ ಹಿರಿಯ ಸಾಫ್ಟ್‌ವೇರ್ ಡೆವಲಪರ್ ಆಗಿ ಕೆಲಸ ಮಾಡುತ್ತಿದ್ದೇನೆ ಎಂದರು.

ವೈರಲ್ ಪೋಸ್ಟ್ ಇಲ್ಲಿದೆ

ತಿಂಗಳಿಗೆ ಲಕ್ಷಕ್ಕೂ ಅಧಿಕ ಸಂಬಳವಿದೆ ಕೇಳಿ ನನಗೆ ಆಶ್ಚರ್ಯ ಆಯ್ತು. ಈ ಕೆಲಸ ಯಾಕಾಗಿ ಎಂದು ಕೇಳಿದ್ದಕ್ಕೆ ತಮಗೆ ಮದುವೆಯಾಗಿದ್ದು, ಒಂದು ಸಣ್ಣ ಮಗುವಿದೆ. ಹೆಚ್ಚುವರಿ ಆದಾಯವನ್ನು ಬಯಸುವುದರಿಂದ ಬೈಕ್‌ ಓಡಿಸುತ್ತೇನೆ ಎಂದರು. ಈ ಮಾತು ನಿಜವಾಗಿಯೂ ನನ್ನನ್ನು ಯೋಚಿಸುವಂತೆ ಮಾಡಿತು. ಉತ್ತಮ ತಾಂತ್ರಿಕ ಕೆಲಸ ಮತ್ತು ಆರು ಅಂಕಿಗಳ ಸಂಬಳ ಹೊಂದಿರುವ ಯಾರಾದರೂ ಇನ್ನೂ ವಾರಾಂತ್ಯದ ಟೈಮ್ ಸೈಡ್ ಹಸ್ಸಲ್ ಅಗತ್ಯವನ್ನು ಅನುಭವಿಸಿದರೆ, ಬೆಂಗಳೂರು ಮತ್ತು ಇತರ ಟೈಯರ್-1 ನಗರಗಳಲ್ಲಿ ಜೀವನ ಎಷ್ಟು ದುಬಾರಿಯಾಗಿದೆ? ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: 9 ಟು 5 ಲೈಫ್ ಬೇಡಪ್ಪಾ: ಬೆಂಗಳೂರಲ್ಲಿ 60 ಸಾವಿರ ಸಂಬಳದ ಕೆಲಸಕ್ಕೆ 22ರ ಯುವತಿ ದಿಢೀರ್ ರಿಸೈನ್!

ಈ ಪೋಸ್ಟ್ ಎಂಭತ್ತು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ದುಡಿಮೆಯಿದ್ರೂ ಜವಾಬ್ದಾರಿಗಳು ಎಲ್ಲವನ್ನು ಮಾಡಿಸುತ್ತದೆ ಎಂದು ಹೇಳಿದ್ದಾರೆ. ಇನ್ನೊಬ್ಬರು, ನಿಮ್ಮ ಮನೆಯಲ್ಲಿ ನೀವೇ ಏಕೈಕ ಜೀವನಾಧಾರವಾಗಿದ್ದಾಗ ಒತ್ತಡದಿಂದ ಕೂಡಿರುತ್ತದೆ ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ಜೊತೆಗೆ, ಇಎಂಐ, ಮಕ್ಕಳ ಶಿಕ್ಷಣ ಮತ್ತು ಪೋಷಕರನ್ನು ಬೆಂಬಲಿಸುವ ಆರು ಅಂಕಿಗಳ ಸಂಬಳದಲ್ಲೂ ಉಳಿತಾಯ ಮಾಡಲಾಗದು ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಹೆಗಲ ಮೇಲಿರುವ ಜವಾಬ್ದಾರಿಗಳು ಎಲ್ಲವನ್ನೂ ಮಾಡಿಸುತ್ತದೆ ಎಂದು ಕಾಮೆಂಟ್ ನಲ್ಲಿ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ದೇವರ ಮೂರ್ತಿ ಎದುರಲ್ಲೇ ಕಿರಣ್ ಶಾಸ್ತ್ರಿ ಕಳ್ಳಾಟ; ಬಯಲು ಮಾಡಿದ ಸುದೀಪ್
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!
ಹೆಚ್ಚುತ್ತಿರುವ ಕಸ್ತೂರಿ ರಂಗನ್ ಕಿಚ್ಚು ನಾಳೆ ಶೃಂಗೇರಿ ಬಂದ್​​ಗೆ ಕರೆ!