AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಎಷ್ಟೇ ಪ್ರಯತ್ನ ಪಟ್ರು ಕೆಲಸನೇ ಸಿಗ್ತಿಲ್ಲ, ನಿರಾಸೆಯಲ್ಲೇ ತನ್ನ ಶ್ರದ್ಧಾಂಜಲಿ ಪೋಸ್ಟ್ ಹಂಚಿಕೊಂಡ ಯುವಕ

ಒಳ್ಳೆಯ ಶಿಕ್ಷಣ ಪಡೆದು ಉದ್ಯೋಗ ಗಿಟ್ಟಿಸಿಕೊಳ್ಳಬೇಕೆನ್ನುವುದು ಎಲ್ಲರ ಕನಸು. ಆದರೆ ಎಷ್ಟೇ ಓದಿದರೂ ಉದ್ಯೋಗಕ್ಕಾಗಿ ಅದೆಷ್ಟೋ ಯುವಕ ಯುವತಿಯರು ನಮ್ಮ ಸುತ್ತಮುತ್ತಲಿನಲ್ಲಿದ್ದಾರೆ. ಆದರೆ ಇಲ್ಲೊಬ್ಬ ಬೆಂಗಳೂರಿನ ಯುವಕನು ಉದ್ಯೋಗ ಸಿಗದೇ ನಿರಾಸೆಯಲ್ಲಿ, ಸ್ವತಃ ತನ್ನದೇ ಶ್ರದ್ಧಾಂಜಲಿ ಪೋಸ್ಟ್ ಹಾಕಿದ್ದಾನೆ. ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಕಳವಳ ವ್ಯಕ್ತಪಡಿಸಿದ್ದು, ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.

Viral: ಎಷ್ಟೇ ಪ್ರಯತ್ನ ಪಟ್ರು ಕೆಲಸನೇ ಸಿಗ್ತಿಲ್ಲ, ನಿರಾಸೆಯಲ್ಲೇ ತನ್ನ ಶ್ರದ್ಧಾಂಜಲಿ ಪೋಸ್ಟ್ ಹಂಚಿಕೊಂಡ ಯುವಕ
ವೈರಲ್​​ ಪೋಸ್ಟ್​​
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​|

Updated on: Apr 04, 2025 | 4:29 PM

Share

ಉದ್ಯೋಗ (job)ಎಲ್ಲರಿಗೂ ಅತ್ಯವಶ್ಯಕ. ಕೈಯಲ್ಲಿ ಒಂದು ಕೆಲಸವಿದ್ದರೆ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯ. ಆದರೆ ಈಗಿನ ಸ್ಪರ್ಧಾತ್ಮಕ ಯುಗದಲ್ಲಿ ಎಷ್ಟೇ ಓದಿಕೊಂಡಿದ್ದರೂ ಉದ್ಯೋಗ ಸಿಗುವುದೇ ಕಷ್ಟ ಎನ್ನುವಂತಾಗಿದೆ. ಅದೆಷ್ಟೋ ಯುವಕ ಯುವತಿಯರು ದಿನಬೆಳಗಾದರೆ ಉದ್ಯೋಗಕ್ಕಾಗಿ ಅಲೆದಾಡುತ್ತಿದ್ದಾರೆ. ಈ ನಡುವೆ ಪ್ರಶಾಂತ್ ಹರಿದಾಸ್ (prashant haridas) ಎಂಬ ಬೆಂಗಳೂರು (bengaluru) ಯುವಕ ವಿಚಿತ್ರ ಪೋಸ್ಟ್ ವೊಂದು ಸೋಶಿಯಲ್ ಮೀಡಿಯಾದಲ್ಲಿ ಎಲ್ಲರ ಗಮನ ಸೆಳೆಯುತ್ತಿದೆ. ಉದ್ಯೋಗ ಸಿಗದೇ ನಿರಾಸೆಯಲ್ಲಿ ಈ ಯುವಕನು ಲಿಂಕ್ಡ್ ಇನ್ ನಲ್ಲಿ ತನ್ನದೇ ಶ್ರದ್ಧಾಂಜಲಿ (obituary) ಪೋಸ್ಟ್ ಹಾಕಿಕೊಂಡು ಕೆಲಸದ ಹುಡುಕಾಟದ ವೇಳೆ ತಾನು ಪಟ್ಟ ಕಷ್ಟ ಹಾಗೂ ನಿರುದ್ಯೋಗಿಗಳ ಕರಾಳತೆ ಬಿಚ್ಚಿಟ್ಟಿದ್ದಾನೆ. ಈ ಪೋಸ್ಟ್ ಗೆ ನೆಟ್ಟಿಗರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ.

ಪ್ರಶಾಂತ್ ಹರಿದಾಸ್ ಕಳೆದ ಮೂರು ವರ್ಷಗಳಿಂದ ನಿರಂತರವಾಗಿ ಉದ್ಯೋಗದ ಹುಡುಕಾಟದಲ್ಲಿದ್ದು ಇಲ್ಲಿಯವರೆಗೂ ಉದ್ಯೋಗ ಸಿಕ್ಕಿಲ್ಲ. ಇದರಿಂದ ಹತಾಶೆಗೊಂಡ ಯುವಕನು ಲಿಂಕ್ಡ್ ಇನ್ ನಲ್ಲಿ ತನ್ನ ಫೋಟೋ ಹಂಚಿಕೊಂಡಿದ್ದು, ‘ಧನ್ಯವಾದಗಳು ಲಿಂಕ್ಡ್ಇನ್, ಉದ್ಯೋಗದಾತರಿಗೆ ಧನ್ಯವಾದಗಳು, ನನ್ನ ಅರ್ಜಿಗಳನ್ನು ನಿರ್ಲಕ್ಷಿಸಿದ್ದಕ್ಕಾಗಿ ಧನ್ಯವಾದಗಳು. ಉದ್ಯೋಗ ಹುಡುಕಲು ಪ್ರಯತ್ನಿಸುತ್ತಾ ನನ್ನ ಸಮಯ ಹಾಗೂ ಹಣವನ್ನು ವ್ಯರ್ಥ ಮಾಡಿದ್ದಕ್ಕಾಗಿ ಧನ್ಯವಾದಗಳು. ಈ ಪೋಸ್ಟ್ ನಂತರ ಯಾರೂ ನನ್ನನ್ನು ಉದ್ಯೋಗಕ್ಕೆ ನೇಮಿಸಿಕೊಳ್ಳುವುದಿಲ್ಲ ಎಂದು ನನಗೆ ಚೆನ್ನಾಗಿಯೇ ತಿಳಿದಿದೆ, ಆರ್ ಐ ಪಿ ಎಂದು ಬರೆದುಕೊಂಡಿದ್ದಾನೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ:

ಇದನ್ನೂ ಓದಿ
Image
ಭಾರತದ ಮೊದಲ ಕಾಫಿ ತೋಟ ತಾಣದ ಕಥೆಯನ್ನು ಹಂಚಿಕೊಂಡ ಆನಂದ್‌ ಮಹೀಂದ್ರಾ
Image
ಕಾಲೇಜು ಪ್ರೊಫೆಸರ್‌ ಎನರ್ಜಿಗೆ ಫಿದಾ ಆದ ವಿದ್ಯಾರ್ಥಿಗಳು
Image
ಬೆಂಗಳೂರಿನಲ್ಲಿ ಆಟೋ ಬುಕ್ ಮಾಡುವ ಟಿಪ್ಸ್ ನೀಡಬೇಕು
Image
ಒಂದೇ ಮಂಟಪದಲ್ಲಿ, ಒಂದೇ ಸಮಯದಲ್ಲಿ ಇಬ್ಬರು ಮಹಿಳೆಯರನ್ನು ಮದುವೆಯಾದ ವ್ಯಕ್ತಿ

ಅದಲ್ಲದೇ ಮತ್ತೆ ಕೆಲವು ಪ್ರಮುಖ ವಿಷಯಗಳನ್ನು ಉಲ್ಲೇಖಿಸಿದ್ದು, ‘ನನಗೆ ಕೆಲಸ ಸಿಗಲಿಲ್ಲ ಎಂಬ ಹತಾಶೆಯಿಂದ ನಾನು ಆತ್ಮಹತ್ಯೆ ಮಾಡಿಕೊಳ್ಳುವುದಿಲ್ಲ. ನಾನು ಇನ್ನೂ ಜೀವನದಲ್ಲಿ ಅನೇಕ ವಿಷಯಗಳನ್ನು ಅನುಭವಿಸುತ್ತೇನೆ. ವಿಭಿನ್ನ ರುಚಿಯಾಯ ಆಹಾರ ತಿನ್ನುವುದರಲ್ಲಿ ಹೊಸ ಹೊಸ ಸ್ಥಳಗಳಿಗೆ ಭೇಟಿ ನೀಡುವುದರಲ್ಲಿ ಆಸಕ್ತಿ ಇದೆ. ನಾನು ಉದ್ಯೋಗ ಪಡೆಯುವುದರಲ್ಲಿ ಸೋತಿದ್ದರೂ ನಾನು ಒಂಟಿಯಾಗಿ ಬದುಕಲು ಸಾಧ್ಯವಿಲ್ಲ, ಹೀಗಾಗಿ ನಾನು ಬದುಕಬೇಕು!” ಎಂದು ಸ್ಪಷ್ಟವಾಗಿ ಹೇಳಿದ್ದಾನೆ.

ಇದನ್ನೂ ಓದಿ: ಮೆಟ್ರೋದಲ್ಲಿ ಸೀಟ್ ಸಿಕ್ಕಿಲ್ಲ ಎಂದು ಟೆನ್ಶನ್ ಯಾಕೆ, ಈ ರೀತಿ ಟ್ರಿಕ್ಸ್ ಪಕ್ಕಾ ವರ್ಕ್ ಆಗುತ್ತೆ

ಈ ಪೋಸ್ಟ್ ವೈರಲ್ ಆಗುತ್ತಿದ್ದಂತೆ ಬಳಕೆದಾರರೊಬ್ಬರು, ‘ನಿಮ್ಮ ಪರಿಸ್ಥಿತಿಯ ಅರಿವು ನನಗಿದೆ. ಒಳ್ಳೆಯ ಉದ್ಯೋಗ ಸಿಗುತ್ತದೆ ಚಿಂತೆ ಮಾಡಬೇಡಿ, ನಿಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯ ನೋಡಿಕೊಳ್ಳಿ’ ಎಂದಿದ್ದಾರೆ. ಮತ್ತೊಬ್ಬರು, ‘ನಿಮ್ಮ ಪರಿಸ್ಥಿತಿ ನಮಗೆ ಚೆನ್ನಾಗಿ ಅರ್ಥವಾಗಿದೆ. ಆದರೆ ಇದೇ ಅಂತಿಮವಲ್ಲ, ನೀವು ಮಾಡಿದ ಪ್ರಯತ್ನಗಳು ಖಂಡಿತ ವ್ಯರ್ಥವಾಗುವುದಿಲ್ಲ. ನಿಮಗೆ ಖಂಡಿತ ಕೆಲಸ ಸಿಗುತ್ತದೆ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬರು, ‘ನಿಮ್ಮ ಜೊತೆಗೆ ನಾವಿದ್ದೇವೆ. ನಮ್ಮಿಂದಾದ ಸಹಾಯ ಖಂಡಿತ ನಿಮಗೆ ಮಾಡುತ್ತೇವೆ, ಧೈರ್ಯದಿಂದಿರಿ’ ಎಂದಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ