AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮೈಸೂರ್ ಸಿಲ್ಕ್ ಸೀರೆ ಖರೀದಿಸಲು ಮುಂಜಾನೆ 4 ಗಂಟೆಗೆ ಸರತಿ ಸಾಲಿನಲ್ಲಿ ನಿಂತ ಬೆಂಗಳೂರಿನ ಯುವತಿ

ಮಹಿಳೆಯರಿಗೆ ಸೀರೆ ಅಂದ್ರೆ ಎಲ್ಲಿಲ್ಲ ಪ್ರೀತಿ. ಅದರಲ್ಲೂ ಮೈಸೂರು ಸಿಲ್ಕ್ ಸೀರೆ ಅಂದ್ರೆ ಮುಗಿದೇ ಹೋಯ್ತು. ಒಂದಾದ್ರು ಮೈಸೂರು ಸಿಲ್ಕ್ ಸೀರೆ ತಮ್ಮ ಸೀರೆ ಕಲೆಕ್ಷನ್‌ನಲ್ಲಿ ಇರಬೇಕೆಂದು ಬಯಸ್ತಾರೆ. ಆದರೆ ಇದೀಗ ಬೆಂಗಳೂರಿನ ಯುವತಿ, ಜಯನಗರದಲ್ಲಿರುವ ಕೆಎಸ್‌ಐಸಿ ಮೈಸೂರು ಸಿಲ್ಕ್ಸ್ ಶೋ ರೂಂಗೆ ಬೆಳಗಿನ ಜಾವ ಭೇಟಿ ನೀಡಿದ್ದು ಈ ವೇಳೆ ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ.

Video: ಮೈಸೂರ್ ಸಿಲ್ಕ್ ಸೀರೆ ಖರೀದಿಸಲು ಮುಂಜಾನೆ 4 ಗಂಟೆಗೆ ಸರತಿ ಸಾಲಿನಲ್ಲಿ ನಿಂತ ಬೆಂಗಳೂರಿನ ಯುವತಿ
ವೈರಲ್‌ ವಿಡಿಯೋImage Credit source: Twitter
ಸಾಯಿನಂದಾ
|

Updated on:Apr 09, 2026 | 1:53 PM

Share

ಬೆಂಗಳೂರು, ಏಪ್ರಿಲ್‌ 09: ಹೆಣ್ಣಿನ ಅಂದ ಚಂದವನ್ನು ಹೆಚ್ಚಿಸುವುದೇ ಈ ಸೀರೆ . ಎಷ್ಟೇ ಫ್ಯಾಶನ್‌, ಟ್ರೆಂಡಿ ಉಡುಗೆಗಳು ಬಂದರೂ ಸೀರೆಯ ಕ್ರೇಜ್‌ ಮಾತ್ರ ಕಡಿಮೆಯಾಗಿಲ್ಲ. ಅದರಲ್ಲೂ ಮೈಸೂರು ಸಿಲ್ಕ್ ಸೀರೆಗೆ ಎಲ್ಲಿಲ್ಲದ ಬೇಡಿಕೆಯಿದೆ. ಹೀಗಾಗಿ ಎಷ್ಟೇ ದುಬಾರಿಯಾದ್ರು ಈ ಸೀರೆಯನ್ನು ಖರೀದಿಸದೇ ಇರಲಾರರು. ಬೆಂಗಳೂರಿನಲ್ಲಿ (Bengaluru) ಕೆಎಸ್‌ಐಸಿ (KSIC) ಮೈಸೂರು ಸಿಲ್ಕ್ ಸೀರೆಗಾಗಿ ಯುವತಿಯೂ ಬೆಳಗಿನ ಜಾವ 4 ಗಂಟೆಗೆ ಬಂದು 6 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಸೀರೆ ಖರೀದಿಸಿದ ಘಟನೆ ವೈರಲ್ ಆಗಿದೆ. ಈ ವೇಳೆ ತಮಗಾದ ಅನುಭವವನ್ನು ಯುವತಿ  ಹಂಚಿಕೊಂಡು ಈ ಸೀರೆಗೆ ಎಷ್ಟು ಕ್ರೇಜ್ ಇದೆ ಎಂದು ವಿವರಿಸಿದ್ದಾರೆ. ಈ ವಿಡಿಯೋ ನೆಟ್ಟಿಗರನ್ನು ಹುಬ್ಬೇರಿಸುವಂತೆ ಮಾಡಿದೆ.

sona_sebin ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಯುವತಿಯೂ, ಜಯನಗರದಲ್ಲಿರುವ ಕೆಎಸ್‌ಐಸಿ ಮೈಸೂರು ಸಿಲ್ಕ್ಸ್  ಮಳಿಗೆಗೆ ಬೆಳಗಿನ ಜಾವ ಭೇಟಿ ನೀಡಿದ್ದನ್ನು ದಾಖಲಿಸಿದ್ದಾರೆ. ಮೈಸೂರು ಸಿಲ್ಕ್ ಸೀರೆಗಾಗಿ ಬೆಳಗ್ಗೆ 4 ಗಂಟೆಗೆ ಬಂದು ಸರತಿ ಸಾಲಿನಲ್ಲಿ ನಿಂತಿರುವ ಬಗ್ಗೆ ಹೇಳಿದ್ದಾರೆ. ಅದಲ್ಲದೇ, ಸೀರೆ ಖರೀದಿಸಲು ಮಹಿಳೆಯರು ಬೆಳಗಿನ ಜಾವ 3-4 ಗಂಟೆಗೆ ಬಂದು ಟೋಕನ್ ಪಡೆಯಲು ಗಂಟೆಗಟ್ಟಲೆ ಕಾಯುತ್ತಿರುವುದನ್ನು ತೋರಿಸಿದ್ದಾರೆ. ಆ ಬಳಿಕ ಕಾಫಿ ಕುಡಿಯಲು ಸ್ವಲ್ಪ ಹೊತ್ತು ಹೊರಗೆ ಹೋದ ನಂತರ, ಹಿಂತಿರುಗಿ ಬಂದಾಗ ಈ ಲಿಸ್ಟ್ ಗೆ 53 ಹೆಸರುಗಳು ಸೇರ್ಪಡೆಯಾಗಿವೆ ಎಂದು ಹೇಳುತ್ತಿರುವುದನ್ನು ಕಾಣಬಹುದು. ಶೋರೂಮ್ ಮುಂದೆ ಸರತಿ ಸಾಲಿನಲ್ಲಿ ನಿಂತಿರುವ ಜನರನ್ನು ಮಾತನಾಡಿಸಿದ್ದು, ಒಬ್ಬ ಮಹಿಳೆ ಬೆಳಗಿನ ಜಾವ 3 ಗಂಟೆಗೆ ಬಂದಿದ್ದೇನೆ ಎಂದು ಹೇಳಿದರೆ, ವ್ಯಕ್ತಿಯೊಬ್ಬ ಹಿಂದಿನ ರಾತ್ರಿ 9 ಗಂಟೆಗೆ ಬಂದಿದ್ದಾಗಿ ಹೇಳಿಕೊಂಡಿರುವುದನ್ನು ಕಾಣಬಹುದು.

ವೈರಲ್ ವಿಡಿಯೋ ಇಲ್ಲಿದೆ

ಆ ಬಳಿಕ ಈ ಯುವತಿಯೂ, ಅಂಗಡಿ ಬೆಳಿಗ್ಗೆ 10-10:30 ರ ಸುಮಾರಿಗೆ ಮಾತ್ರ ತೆರೆಯುತ್ತದೆ. ಒಮ್ಮೆ 10 ಜನರಿಗೆ ಮಾತ್ರ ಪ್ರವೇಶವಿದ್ದು, ಕೇವಲ 10 ನಿಮಿಷಗಳಲ್ಲಿ ಸೀರೆ ಆರಿಸಬೇಕು. ಒಂದು ಟೋಕನ್‌ಗೆ ಒಂದು ಸೀರೆ ಮಾತ್ರ ಸಿಗುತ್ತದೆ. ಮೈಸೂರು ಸಿಲ್ಕ್ ಸೀರೆಗಳ ಬೆಲೆ 23,000 ರೂನಿಂದ 2.5 ಲಕ್ಷ ರೂವರೆಗೆ ಇರುತ್ತದೆ ಎಂದು ಹೇಳುವುದನ್ನು ನೀವಿಲ್ಲಿ ನೋಡಬಹುದು.

ಇದನ್ನೂ ಓದಿ: ನಿರ್ಮಾಣದ ಹೆಸರಿನಲ್ಲಿ ಹದಗೆಟ್ಟ ಬೆಂಗಳೂರು; ವರ್ಷಗಳ ಬಳಿಕ ನಗರಕ್ಕೆ ಮರಳಿದ ವ್ಯಕ್ತಿ ಹೀಗೆಂದಿದ್ದೇಕೆ?

ಈ ವಿಡಿಯೋ ನಾಲ್ಕೂವರೆ  ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಹೆಣ್ಮಕ್ಕಳಿಗೆ ಸೀರೆ ಕ್ರೇಜ್ ಎಷ್ಟಿದೆ ಎನ್ನುವುದಕ್ಕೆ ಇದುವೇ ಸಾಕ್ಷಿ ಎಂದರೆ, ಮತ್ತೊಬ್ಬರು, ಒಂದು ಸೀರೆ ಖರೀದಿಸಲು ಇಷ್ಟು ಕಷ್ಟ ಪಡಬೇಕಾ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಎಲ್ಲಾ ಸೀರೆ ಮಹಿಮೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:52 pm, Thu, 9 April 26

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!