AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಆಟೋ ಚಾಲಕಿಯನ್ನು ಶ್ಲಾಘಿಸಿದ ಬೆಂಗಳೂರಿನ ಅಮೆಜಾನ್ ಉದ್ಯೋಗಿ, ಕಾರಣ ಇದೇ ನೋಡಿ

ದುಡಿಮೆ ಯಾವುದಾದರೇನು ಪ್ರಾಮಾಣಿಕವಾಗಿ ದುಡಿಯುವುದು ಬಹಳ ಮುಖ್ಯ. ಆಟೋ ಓಡಿಸಿ ಜೀವನ ನಡೆಸುವ ಮಹಿಳೆಯರನ್ನು ನೀವು ನೋಡಿರುತ್ತೀರಿ. ಆದರೆ ಇದೀಗ ಬೆಂಗಳೂರಿನ ಮಹಿಳಾ ಆಟೋ ಚಾಲಕಿಯ ಸ್ಪೂರ್ತಿದಾಯಕ ಕೆಲಸದ ಆಯ್ಕೆಯ ಬಗ್ಗೆ ಅಮೆಜಾನ್ ಉದ್ಯೋಗಿಯೊಬ್ಬರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಆಟೋ ಚಾಲಕಿಯ ಆತ್ಮವಿಶ್ವಾಸವನ್ನು ನೆಟ್ಟಿಗರು ಮೆಚ್ಚಿಕೊಂಡಿದ್ದು, ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಆಟೋ ಚಾಲಕಿಯನ್ನು ಶ್ಲಾಘಿಸಿದ ಬೆಂಗಳೂರಿನ ಅಮೆಜಾನ್ ಉದ್ಯೋಗಿ, ಕಾರಣ ಇದೇ ನೋಡಿ
ವೈರಲ್‌ ವಿಡಿಯೋImage Credit source: Instagram
ಸಾಯಿನಂದಾ
|

Updated on:May 25, 2026 | 6:09 PM

Share

ಬೆಂಗಳೂರು, ಮೇ 25: ಮಹಿಳೆಯರು ಆಟೋ ಓಡಿಸುವುದು ದೂರದ ಮಾತು ಎನ್ನುವ ಕಾಲವಿತ್ತು. ಆದರೆ, ಇದೀಗ ಆಟೋವನ್ನೇ ಬದುಕಿಗೆ ಆಧಾರವಾಗಿಸಿಕೊಂಡ ಮಹಿಳೆಯರು ನಮ್ಮ ಸುತ್ತಮುತ್ತಲಿನಲ್ಲಿದ್ದಾರೆ. ಹೌದು, ಬೆಂಗಳೂರಿನ (Bengaluru) ಅಮೆಜಾನ್ ಉದ್ಯೋಗಿಯೊಬ್ಬರು ಆಟೋ ಓಡಿಸುವ ಮಹಿಳೆಯನ್ನು ಮಾತನಾಡಿಸುವ ಪ್ರಯತ್ನ ಮಾಡಿದ್ದಾರೆ. ಇದೇ ವೇಳೆ ಆಟೋ ಚಾಲಕಿ ಈ ಕೆಲಸ ಆಯ್ಕೆ ಮಾಡಿಕೊಂಡಿದ್ದರ ಹಿಂದಿನ ಕಾರಣ ರಿವೀಲ್ ಮಾಡಿದ್ದು ಇದನ್ನು ಕೇಳಿ ಅಮೆಜಾನ್ ಉದ್ಯೋಗಿ ಶಾಕ್ ಆಗಿದ್ದಾರೆ. ಈ ಕುರಿತಾದ ವಿಡಿಯೋ ಹಂಚಿಕೊಂಡಿದ್ದು ಗಟ್ಟಿಗಿತ್ತಿ ಮಹಿಳಾ ಆಟೋ ಚಾಲಕಿಯನ್ನು ಶ್ಲಾಘಿಸಿದ್ದಾರೆ.

ಶ್ರೇಯಶಿ ಸಿನ್ಹಾ (shree__yeahh) ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಸ್ಫೂರ್ತಿದಾಯಕ ವಿಡಿಯೋ ಹಂಚಿಕೊಂಡಿದ್ದಾರೆ. ಈ ವಿಡಿಯೋದೊಂದಿಗೆ ಇಂದು, ಮಹಿಳಾ ಆಟೋ ಡ್ರೈವರ್ ನನ್ನನ್ನು ಕರೆದೊಯ್ಯಲು ಬಂದಳು. ಅವಳು ತನ್ನ ಫೋನ್‌ನಲ್ಲಿ ಕೆಲವು ಸಮಸ್ಯೆಯನ್ನು ಎದುರಿಸುತ್ತಿದ್ದಳು, ಆದ್ದರಿಂದ ಅವಳು ಮಾರ್ಗದರ್ಶನ ನೀಡಲು ನನ್ನನ್ನು ಕೇಳಿದಳು. ಅವಳೊಂದಿಗೆ ಮಾತನಾಡುವಾಗ, ನಾನು ಅವಳನ್ನು ಆಟೋ ಓಡಿಸಲು ಕಾರಣ ಏನು ಎಂದು ಕೇಳಿದೆ. ಅವಳು ಮುಗುಳ್ನಕ್ಕು ಪಾತ್ರೆ ತೊಳೆಯುವುದಕ್ಕಿಂತ ಆಟೋ ಓಡಿಸುವುದು ಮೇಲು, ಏಕೆಂದರೆ ನನಗೆ ಸುತ್ತಾಡಲು (ಪ್ರಯಾಣಿಸಲು) ಇಷ್ಟ ಮತ್ತು ಇಲ್ಲಿ ಸಮಯದ ಯಾವುದೇ ನಿರ್ಬಂಧವಿಲ್ಲ. ಎಷ್ಟು ಬೇಕೋ, ಯಾವಾಗ ಬೇಕೋ ಆಟೋ ಓಡಿಸಬಹುದು ಹಾಗೂ ಎಲ್ಲಿಗೆ ಬೇಕಾದರೂ ಹೋಗಬಹುದು ಎಂದಳು. ವೈಯುಕ್ತಿಕ ಸ್ವಾತಂತ್ರ್ಯ ಮತ್ತು ಸ್ವಾತಂತ್ರ್ಯವನ್ನು ನೀಡುವ ಕೆಲಸವನ್ನು ಆಯ್ಕೆ ಮಾಡುವ ಮಹಿಳೆಯರನ್ನು ನಾನು ಪ್ರಾಮಾಣಿಕವಾಗಿ ಮೆಚ್ಚುತ್ತೇನೆ ಎಂದು ಬರೆದುಕೊಂಡಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

View this post on Instagram

A post shared by Shreyashiiii (@shree__yeahh)

ಇದನ್ನೂ ಓದಿ: ಮನೆ ಬಾಗಿಲಿಗೆ ಬರುವ ಪೌರ ಕಾರ್ಮಿಕರಿಗೆ ಚಹಾ ಬಿಸ್ಕೆಟ್ ಕೊಟ್ಟು ಉಪಚರಿಸುವ ಮಹಿಳೆ

ಈ ವಿಡಿಯೋ 3 ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಅವಳ ಆತ್ಮವಿಶ್ವಾಸವು ಯಾವುದೇ ಪ್ರೇರಕ ಭಾಷಣಕ್ಕಿಂತ ಹೆಚ್ಚು ಶಕ್ತಿಶಾಲಿಯಾಗಿದೆ ಎಂದಿದ್ದಾರೆ. ಇನ್ನೊಬ್ಬರು, ನಿಜವಾದ ಸ್ವಾತಂತ್ರ್ಯ ಹೇಗಿರುತ್ತದೆ ಎನ್ನುವುದಕ್ಕೆ ಇದುವೇ ಸಾಕ್ಷಿ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ತನ್ನದೇ ಮಾರ್ಗ ಆರಿಸಿಕೊಳ್ಳುವ ಮಹಿಳೆಗೆ ನನ್ನದೊಂದು ಗೌರವ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:08 pm, Mon, 25 May 26

Follow Us
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಬೆಳೆ ವಿಮೆ ವಿಚಾರಕ್ಕೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಿವಲಿಂಗೇಗೌಡ ಗರಂ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ
ಆಗಸ್ಟ್ 17ರಿಂದ 23ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿ ತಿಳಿದುಕೊಳ್ಳಿ