AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಇದು ಟೆಕ್ನಾಲಜಿ ಎಫೆಕ್ಟ್; ಸ್ಮಾರ್ಟ್‌ ವಾಚ್‌ನಲ್ಲೇ ಕ್ಯೂಆರ್ ಕೋಡ್ ಅಳವಡಿಸಿಕೊಂಡ ಬೆಂಗಳೂರಿನ ಆಟೋ ಡ್ರೈವರ್‌

ನಾವಿಂದು ತಂತ್ರಜ್ಞಾನಕ್ಕೆ ಎಷ್ಟು ಒಗ್ಗಿಕೊಂಡಿದ್ದೇವೆ ಅಂದ್ರೆ ಟೆಕ್ನಾಲಜಿ ಇಲ್ಲದೇ ನಾವಿಲ್ಲ. ಹೌದು, ಆಟೋ ಚಾಲಕರು, ಬೆಂಗಳೂರಿನ ಜನತೆ ಟೆಕ್ನಾಲಜಿಯನ್ನು ವಿಭಿನ್ನವಾಗಿ ಬಳಸಿಕೊಳ್ಳುತ್ತಾರೆ. ಇದೀಗ ಬೆಂಗಳೂರಿನ ಆಟೋ ಚಾಲಕನೊಬ್ಬ ಆಟೋದಲ್ಲಿ ಹಣ ಪಾವತಿ ಮಾಡಲು ಕ್ಯೂಆರ್ ಕೋಡ್‌ನ್ನು ಸ್ಮಾರ್ಟ್ ವಾಚ್‌ನಲ್ಲಿ ಅಳವಡಿಸಿಕೊಂಡಿದ್ದಾನೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಇದು ಟೆಕ್ನಾಲಜಿ ಎಫೆಕ್ಟ್; ಸ್ಮಾರ್ಟ್‌ ವಾಚ್‌ನಲ್ಲೇ ಕ್ಯೂಆರ್ ಕೋಡ್ ಅಳವಡಿಸಿಕೊಂಡ ಬೆಂಗಳೂರಿನ ಆಟೋ ಡ್ರೈವರ್‌
ವೈರಲ್‌ ಪೋಸ್ಟ್‌Image Credit source: Twitter/ Pinterest
ಸಾಯಿನಂದಾ
|

Updated on: Jun 17, 2026 | 4:26 PM

Share

ಬೆಂಗಳೂರು, ಜೂನ್ 17: ಆಧುನಿಕ ತಂತ್ರಜ್ಞಾನಕ್ಕೆ ಒಗ್ಗಿಕೊಂಡಿರುವ ಜನರು ಟೆಕ್ನಾಲಜಿಯನ್ನು ವಿಭಿನ್ನವಾಗಿ ಬಳಸುತ್ತಾರೆ. ಈ ಆಟೋ ಚಾಲಕನ ಐಡಿಯಾ ಮಾತ್ರ ವಿಭಿನ್ನವಾಗಿದೆ. ಹೌದು, ಆಟೋದಲ್ಲಿ ಸೀಟಿನ ಹಿಂದೆ ಕ್ಯೂಆರ್ ಕೋಡ್ ಸ್ಟಿಕ್ಕರ್ ಅಳವಡಿಸಿಕೊಂಡಿರುವುದನ್ನು ನೋಡಿರುತ್ತೀರಿ. ಆದರೆ ತನ್ನ ಆಟೋದಲ್ಲಿ ಡಿಜಿಟಲ್ ಪೇಮೆಂಟ್ ಗಾಗಿ ಹೊಸ ಐಡಿಯಾವನ್ನು ಕಂಡುಕೊಂಡಿದ್ದಾನೆ. ಬೆಂಗಳೂರಿನ (Bengaluru) ಈ ಆಟೋ ಚಾಲಕನ ಕೈಯಲ್ಲಿರುವ ಸ್ಮಾರ್ಟ್ ವಾಚ್ ಸದ್ಯ ಎಲ್ಲರ ಗಮನ ಸೆಳೆಯುತ್ತಿದೆ. ಸ್ಮಾರ್ಟ್‌ವಾಚ್‌ನ ಸ್ಕ್ರೀನ್ ಮೇಲೆ ಕ್ಯೂಆರ್ ಕೋಡ್‌ನ್ನು ಅಳವಡಿಸಿಕೊಂಡಿದ್ದಾನೆ. ಈ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಈ ಆಟೋ ಚಾಲಕನ ಬುದ್ಧಿವಂತಿಕೆಯನ್ನು ಮೆಚ್ಚಿಕೊಂಡಿದ್ದಾರೆ.

ಹೇಮಂತ್ (Hemant) ಎಂಬ ಬಳಕೆದಾರರು ತಮ್ಮ ಎಕ್ಸ್ ಖಾತೆಯಲ್ಲಿ ಬೆಂಗಳೂರಿನ ಆಟೋಚಾಲಕ ಸ್ಮಾರ್ಟ್ ಟ್ರಿಕ್ಸ್ ಹಂಚಿಕೊಂಡಿದ್ದಾರೆ. ಈ ಪೋಸ್ಟ್ ನಲ್ಲಿ ಇಂದು ಇಂದಿರಾ ನಗರದಿಂದ ಕೋರಮಂಗಲಕ್ಕೆ ಆಟೋದಲ್ಲಿ ಬಂದೆ. ಆಟೋದಿಂದ ಇಳಿಯುವ ವೇಳೆಗೆ ಕ್ಯೂಆರ್ ಕೋಡ್ ಕೇಳಿದೆ. ಆಟೋ ಚಾಲಕ ತನ್ನ ಕೈಯನ್ನು ಎತ್ತಿ ಹಿಡಿದ. ಕ್ಯೂಆರ್ ಕೋಡ್ ಆತನ ಸ್ಮಾರ್ಟ್‌ವಾಚ್‌ನಲ್ಲಿದ್ದನ್ನು ಕಂಡು ಶಾಕ್ ಅದೆ. ಚಾಲಕನ ಸ್ಮಾರ್ಟ್‌ ಐಡಿಯಾಕ್ಕೆ ಫಿದಾ ಆದೆ ಎಂದು ಬರೆದುಕೊಂಡಿದ್ದಾರೆ.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: ಎಚ್ಎಸ್ಆರ್ ಲೇಔಟ್‌ನ 1BHK ನಲ್ಲಿ ವಾಸಿಸುವ ಮಹಿಳೆಯ ತಿಂಗಳ ಖರ್ಚು ಎಷ್ಟು ಗೊತ್ತಾ?

ಈ ಪೋಸ್ಟ್ ಎಂಟು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಬೆಂಗಳೂರಿನ ಆಟೋ ಚಾಲಕರು ಯಾವುದರಲ್ಲೂ ಕಡಿಮೆಯಿಲ್ಲ ಎಂದಿದ್ದಾರೆ. ಇನ್ನೊಬ್ಬರು, ಸ್ಮಾರ್ಟ್ ವಾಚ್ ಗೆ ಕ್ಯೂ ಆರ್ ಕೋಡ್ ಅಳವಡಿಸಿಕೊಂಡದ್ದನ್ನು ನೋಡಿ ಅಚ್ಚರಿಯಾಯ್ತು. ತಂತ್ರಜ್ಞಾನವನ್ನು ಎಲ್ಲರೂ ಒಳ್ಳೆಯದ್ದಕ್ಕೆ ಬಳಸಿಕೊಳ್ಳಲಿ ಎಂದು ಹೇಳಿದ್ದಾರೆ. ಮತ್ತೊಬ್ಬರು, ಸ್ಮಾರ್ಟ್ ವಾಚ್ ಗೆ ಕ್ಯೂ ಆರ್ ಕೋಡ್ ಅಳವಡಿಸಿಕೊಳ್ಳಲು ಎಷ್ಟು ಖರ್ಚು ಆಯ್ತು ಎಂದು ಕೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ