Viral Post: ಪರ ಭಾಷಿಕರಿಗೆ ಕನ್ನಡ ಕಲಿಸಲು ಬೆಂಗಳೂರು ಆಟೋ ಚಾಲಕನ ವಿನೂತನ ಪ್ರಯತ್ನ

ಹೊರರಾಜ್ಯಗಳಿಂದ ನಮ್ಮ ರಾಜ್ಯಕ್ಕೆ ಉದ್ಯೋಗಕ್ಕೆಂದು ಬರುವ ಅದೆಷ್ಟೋ ಜನರು ಕನ್ನಡದ ಬಗ್ಗೆ ಅಸಡ್ಡೆಯನ್ನು ತೋರುತ್ತಾರೆ. ಕನ್ನಡವನ್ನು ಮಾತನಾಡಲು ಹಿಂಜರಿಯುತ್ತಾರೆ. ಇಂತಹ ಪರ ಭಾಷಿಗರಿಗೆ ಕನ್ನಡವನ್ನು ಕಲಿಸಲು ಇಲ್ಲೊಬ್ಬ ಆಟೋ ಚಾಲಕ ವಿನೂತನ ಪ್ರಯತ್ನವೊಂದಕ್ಕೆ ಕೈ ಹಾಕಿದ್ದು, ಈ ಕುರಿತ ಪೋಸ್ಟ್‌ ಒಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

Viral Post: ಪರ ಭಾಷಿಕರಿಗೆ ಕನ್ನಡ ಕಲಿಸಲು ಬೆಂಗಳೂರು ಆಟೋ ಚಾಲಕನ ವಿನೂತನ ಪ್ರಯತ್ನ
ವೈರಲ್​​ ಪೋಸ್ಟ್​
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 21, 2024 | 5:29 PM

ಸಿಲಿಕಾನ್‌ ಸಿಟಿಯಲ್ಲಿ ಕನ್ನಡ ಮಾತಾಡೋರು ಸಿಗೋದೇ ಕಡಿಮೆಯಾಗಿಬಿಟ್ಟಿದೆ. ಕನ್ನಡ ನೆಲದಲ್ಲಿ ಬದುಕುತ್ತಿದ್ರೂ ಕನ್ನಡ ಭಾಷೆ ಮಾತನಾಡಲು ಹಿಂದೇಟು ಹಾಕ್ತಾರೆ. ಅದರಲ್ಲೂ ಹೊರ ರಾಜ್ಯಗಳಿಂದ ಬೆಂಗಳೂರಿಗೆ ಉದ್ಯೋಗಕ್ಕೆಂದು ಬರುವ ಅದೆಷ್ಟೋ ಜನರು ನಮ್ಮ ರಾಜ್ಯ ಭಾಷೆ ಕನ್ನಡದ ಬಗ್ಗೆ ಅಸಡ್ಡೆಯನ್ನು ತೋರುತ್ತಾರೆ. ಹಾಗೂ ಕನ್ನಡವನ್ನು ಮಾತನಾಡಲು ಕೂಡಾ ಹಿಂದೇಟು ಹಾಕ್ತಾರೆ. ಈ ಪರ ಭಾಷಿಗರಿಗೆ ಸ್ವಲ್ಪವಾದರೂ ಕನ್ನಡ ಭಾಷೆಯಲ್ಲಿ ಕಲಿಸಲು ಇಲ್ಲೊಬ್ಬ ಆಟೋ ಚಾಲಕ ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಈ ಕುರಿತ ಪೋಸ್ಟ್‌ ಒಂದು ಇದೀಗ ಸಖತ್‌ ವೈರಲ್‌ ಆಗುತ್ತಿದೆ.

ಬೆಂಗಳೂರಿನ ಆಟೋ ಚಾಲಕರೊಬ್ಬರು ಈ ವಿನೂತನ ಪ್ರಯತ್ನಕ್ಕೆ ಕೈ ಹಾಕಿದ್ದು, ʼಲರ್ನ್ ಕನ್ನಡ ವಿತ್‌ ಆಟೋ ಕನ್ನಡಿಗʼ ಎಂಬ ವಿಶಿಷ್ಟ ಕಾನ್ಸೆಪ್ಟ್‌ ಮೂಲಕ ಪರ ಭಾಷಿಗರಿಗೆ ಕೆಲವೊಂದು ಬೇಸಿಕ್‌ ಕನ್ನಡ ಪದಗಳನ್ನು ಕಲಿಸುವಂತಹ ಪ್ರಯತ್ನಕ್ಕೆ ಕೈ ಹಾಕಿದ್ದಾರೆ. ಹೌದು ಆಟೋದಲ್ಲಿ ಮಾತನಾಡುವಂತಹ ಕೆಲವೊಂದು ಬೇಸಿಕ್‌ ಪದಗಳನ್ನು ಇಂಗ್ಲೀಷ್‌ ಹಾಗೂ ಕನ್ನಡ ಎರಡೂ ಭಾಷೆಯಲ್ಲಿ ಪ್ರಿಂಟ್‌ ಮಾಡಿಸಿ ತಮ್ಮ ಆಟೋದಲ್ಲಿ ಅಂಟಿಸಿದ್ದಾರೆ. ಈ ಮೂಲಕ ಅನ್ಯ ಭಾಷಿಗರು ಆಟೋ ಚಾಲಕರ ಜೊತೆ ಸುಲಭವಾಗಿ ಕನ್ನಡದಲ್ಲಿಯೇ ವ್ಯವಹರಿಸಬಹುದಾಗಿದೆ.

ವೈರಲ್​​​​ ಪೋಸ್ಟ್​​​ ಇಲ್ಲಿದೆ ನೋಡಿ:

ಈ ಕುರಿತ ಪೋಸ್ಟ್‌ ಒಂದನ್ನು vatsalyatandon ಹೆಸರಿನ ಎಕ್ಸ್‌ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ವೈರಲ್‌ ಫೋಟೋದಲ್ಲಿ ಪರಭಾಷಿಗರಿಗೆ ಕನ್ನಡ ಕಲಿಸುವ ಸಲುವಾಗಿ ಲರ್ನ್‌ ಕನ್ನಡ ವಿತ್‌ ಆಟೋ ಕನ್ನಡಿಗ ಎಂದು ಆಟೋವೊಂದರಲ್ಲಿ ಸಣ್ಣ ಬೋರ್ಡ್‌ ಒಂದನ್ನು ಹಾಕಿರುವ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ನೋ ರೊಮ್ಯಾನ್ಸ್‌! ಇದು ಕ್ಯಾಬ್ ಕಣ್ರೀ ಓಯೋ ರೂಮ್‌ ಅಲ್ಲ… ವೈರಲ್‌ ಆಯ್ತು ಕ್ಯಾಬ್‌ನಲ್ಲಿ ಹಾಕಿದ ಸೂಚನಾ ಫಲಕ

ಇಂದು ಮುಂಜಾನೆ ಹಂಚಿಕೊಳ್ಳಲಾದ ಈ ಪೋಸ್ಟ್‌ 8 ಲಕ್ಷಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಇದಂತೂ ತುಂಬಾನೇ ಒಳ್ಳೆಯ ಐಡಿಯಾʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಆಟೋ ಚಾಲಕನ ಈ ಪ್ರಯತ್ನಕ್ಕೆ ಮೆಚ್ಚುಗೆ ಕೊಡಲೇ ಬೇಕುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 5:23 pm, Mon, 21 October 24

ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ಇಂದಿರಾ ಕ್ಯಾಂಟೀನದ್ದು ಎಂದು ಸಚಿವಗೆ ಹೋಟೆಲ್​ ಊಟ ತಿನ್ನಿಸಿದ ಅಧಿಕಾರಿಗಳು!
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
ನಿಜಾಮನ ರಜಾಕರು ಮುಸಲ್ಮಾನರಲ್ಲ ಅಂತ ಪ್ರಿಯಾಂಕ್ ಹೇಳುತ್ತಾರೆ: ಯತ್ನಾಳ್
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
‘ಸುಮ್ಮನಿರುವ ಮಗ ನಾನಲ್ಲ’: ಸಿಡಿದೆದ್ದ ಧನರಾಜ್; ಸಮಾಧಾನ ಮಾಡಿದ ಹನುಮ
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಜೆಡಿಎಸ್ ಕೇವಲ ಒಂದು ಕುಟುಂಬದ ಪಕ್ಷವಾಗಿ ಉಳಿದುಬಿಟ್ಟಿದೆ: ಯೋಗೇಶ್ವರ್
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ಪ್ರತಿ ಹುಟ್ಟುಹಬ್ಬಕ್ಕೆ ಇಬ್ರಾಹಿಂ ನನಗೆ ವಿಶ್ ಮಾಡುತ್ತಾರೆ: ಜಿಟಿ ದೇವೇಗೌಡ
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ದೊಡ್ಮನೆಗೆ ಬರೋಕಿಂತ ಮುನ್ನ ಧರ್ಮ, ಅನುಷಾ ರೈ ನಡುವೆ ಬ್ರೇಕಪ್ ಆಗಿತ್ತಾ?
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಯೋಗೇಶ್ವರ್ ಕೇವಲ ಅಭಿವೃದ್ಧಿ ಕೆಲಸಗಳನ್ನು ಉಲ್ಲೇಖಿಸಿ ಮತ ಕೇಳಿದರು: ಶಾಸಕ
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
ಸಿಎಂ ಇಬ್ರಾಹಿಂ ಮತ್ತು ಜಿಟಿ ದೇವೇಗೌಡ ನೊಂದಜೀವಿ ಮತ್ತು ಸಮಾನಮನಸ್ಕರು
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
‘ಯಾರೂ ನನ್ನನ್ನು ಕಣ್ಣಲ್ಲಿ ಕಣ್ಣಿಟ್ಟು ನೋಡಂಗಿಲ್ಲ’: ಉಗ್ರಂ ಮಂಜು ಆಜ್ಞೆ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ
ಕುಮಾರಸ್ವಾಮಿ ಹೇಳಿದ್ದರಲ್ಲಿ ತಪ್ಪಿಲ್ಲ, ಮುಸ್ಲಿಂ ಮತದಾರ ಕೈಬಿಟ್ಟ: ಅಶೋಕ