AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಂಡತಿ ತವರಿಗೆ ಹೋದ ಖುಷಿಯಲ್ಲಿ ಪ್ರಯಾಣಿಕರಿಗೆ ಬಿಸ್ಕತ್ ಹಂಚಿದ ಬೆಂಗಳೂರು ಆಟೋ ಡ್ರೈವರ್!

ಬೆಂಗಳೂರಿನ ಆಟೋವೊಂದರಲ್ಲಿ ಕುಳಿತ ಪ್ರಯಾಣಿಕರಿಗೆ ಆ ಆಟೋ ಚಾಲಕ ಫ್ರೀಯಾಗಿ ಬಿಸ್ಕತ್ ಹಂಚುತ್ತಿದ್ದ. ಇದಕ್ಕೆ ಕಾರಣವೇನೆಂದು ಕೇಳಿದಾಗ ಆತ ನನ್ನ ಹೆಂಡತಿ ಆಕೆಯ ಅಮ್ಮನ ಮನೆಗೆ ಹೋಗಿರುವುದರಿಂದ ಬಹಳ ಖುಷಿಯಾಗಿದ್ದೇನೆ. ಹೀಗಾಗಿ, ಬಿಸ್ಕತ್ ಹಂಚುತ್ತಿದ್ದೇನೆ ಎಂದು ಹೇಳಿದ್ದಾನೆ. ಇದೇ ವಿಷಯವನ್ನು ಆಟೋದಲ್ಲಿ ಬರೆದಿಟ್ಟು, ಬಿಸ್ಕತ್ ಪ್ಯಾಕ್ ಕೂಡ ಇಟ್ಟಿದ್ದಾನೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಕೆಲವರು ಇದೇ ನಿಜವಾದ ಸ್ವಾತಂತ್ರ್ಯ ಎಂದು ಕಮೆಂಟ್ ಕೂಡ ಮಾಡಿದ್ದಾರೆ.

ಹೆಂಡತಿ ತವರಿಗೆ ಹೋದ ಖುಷಿಯಲ್ಲಿ ಪ್ರಯಾಣಿಕರಿಗೆ ಬಿಸ್ಕತ್ ಹಂಚಿದ ಬೆಂಗಳೂರು ಆಟೋ ಡ್ರೈವರ್!
Bengaluru Auto Driver
ಸುಷ್ಮಾ ಚಕ್ರೆ
|

Updated on: Feb 05, 2025 | 10:22 PM

Share

ಬೆಂಗಳೂರು: ಬೆಂಗಳೂರಿನ ಆಟೋ ಚಾಲಕನೊಬ್ಬ ತನ್ನ ಹೆಂಡತಿ ತನ್ನ ತವರು ಮನೆಗೆ ಹೋಗಿದ್ದನ್ನು ಯಾವ ಮಟ್ಟಿಗೆ ಸಂಭ್ರಮಿಸಿದ್ದಾನೆ ಎಂದರೆ ಆಕೆ ತವರಿಗೆ ಹೋಗಿರುವ ವಿಚಾರ ಇದೀಗ ಸೋಷಿಯಲ್ ಮೀಡಿಯಾದ ತುಂಬೆಲ್ಲ ಹರಿದಾಡುತ್ತಿದೆ. ಅದು ಹೇಗೆ ಅಂತೀರಾ? ತನ್ನ ಹೆಂಡತಿ ಆಕೆಯ ಅಮ್ಮನ ಮನೆಗೆ ಹೋದ ಖುಷಿ ತಾಳಲಾರದೆ ಆಕೆಯ ಗಂಡ ಊರ ತುಂಬೆಲ್ಲ ಈ ವಿಚಾರವನ್ನು ಢಂಗುರ ಸಾರಿದ್ದಾನೆ. ನನ್ನ ಹೆಂಡತಿ ತವರು ಮನೆಗೆ ಹೋಗಿರುವುದರಿಂದ ನಾನು ಬಹಳ ಸಂತೋಷವಾಗಿದ್ದೇನೆ ಎಂದು ಬೋರ್ಡ್​ವೊಂದನ್ನು ತನ್ನ ಆಟೋದಲ್ಲಿ ಬರೆದು ಹಾಕಿರುವ ಆತ ಅದೇ ಖುಷಿಯಲ್ಲಿ ತನ್ನ ಆಟೋದಲ್ಲಿ ಪ್ರಯಾಣಿಸುವ ಎಲ್ಲ ಪ್ರಯಾಣಿಕರಿಗೂ ಉಚಿತ ಬಿಸ್ಕತ್ ವಿತರಿಸಿದ್ದಾನೆ.

ಈ ವಿಡಿಯೋವನ್ನು ಆತನ ಪ್ರಯಾಣಿಕರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಯಲ್ಲಿ “ಹೆಂಡತಿ ತನ್ನ ಹೆತ್ತವರ ಮನೆಗೆ ಹೋಗಿದ್ದಾಳೆ, ನಾನು ಸಂತೋಷವಾಗಿದ್ದೇನೆ” ಎಂದು ಬರೆಯಲಾಗಿದೆ.

View this post on Instagram

A post shared by EPIC MEDIA (@_epic69)

ಇದನ್ನೂ ಓದಿ: Viral Video: ಮಳೆ ನೀರಿನಲ್ಲಿ ಆಟವಾಡುತ್ತಿರುವಾಗ ಚರಂಡಿಗೆ ಬಿದ್ದು ಕೊಚ್ಚಿ ಹೋದ 3 ವರ್ಷದ ಮಗು

ನೆಟಿಜನ್‌ಗಳು ಇದನ್ನು ‘ಸ್ವಾತಂತ್ರ್ಯ’ ಎಂದು ಕರೆದಿದ್ದಾರೆ. ಆ ವ್ಯಕ್ತಿ ತಮ್ಮ ಆಟೋದಲ್ಲಿ ಪ್ರಯಾಣಿಸುವವರಿಗೆ ಬ್ರಿಟಾನಿಯಾ ಮಿಲ್ಕ್ ಬಿಕಿಸ್‌ಗಳನ್ನು ವಿತರಿಸಿದ್ದಾನೆ. ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು ಎಂದು ಕೆಲವರು ಈ ವಿಡಿಯೋಗೆ ಕಮೆಂಟ್ ಮಾಡಿದ್ದಾರೆ.

ಇನ್ನು ಕೆಲವರು ತಮಾಷೆಯಾಗಿ ಈ ವಿಡಿಯೋಗೆ ಪ್ರತಿಕ್ರಿಯಿಸಿದ್ದು, “ನೀವು ಅವನ ಜೀವನವನ್ನೇ ಹಾಳುಮಾಡಿದ್ದೀರಿ. ಪಾಪ ಆತ ಹೆಂಡತಿಯಿಲ್ಲದೆ ಸಂತೋಷವಾಗಿದ್ದ. ಈಗ ನಿಮ್ಮಿಂದ ಅದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಷಯ ಅವನ ಹೆಂಡತಿಗೆ ಅವನು ಆಟೋದಲ್ಲಿಯೇ ಪರ್ಮನೆಂಟಾಗಿ ಮಲಗಬೇಕಾಗುತ್ತದೆ” ಎಂದು ಕಮೆಂಟ್ ಮಾಡಿದ್ದಾರೆ.

ಇನ್ನಷ್ಟು ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್