Video: ಪತ್ನಿಯ ಕಿವಿಯೋಲೆ ಆಟೋದಲ್ಲಿ ನೇತು ಹಾಕಿ ಪ್ರೀತಿ ವ್ಯಕ್ತಪಡಿಸಿದ ಆಟೋ ಡ್ರೈವರ್

ಹೆಚ್ಚಿನವರು ತಮ್ಮ ಸಂಗಾತಿ ಅಥವಾ ಪ್ರೇಮಿಗೆ ಸರ್ಪ್ರೈಸ್ ಗಿಫ್ಟ್‌ ನೀಡುವ ಮೂಲಕ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸುತ್ತಾರೆ. ಇನ್ನು ಕೆಲವರು ತಮ್ಮ ಸಂಗಾತಿಯ ಫೋಟೋವನ್ನು ಪರ್ಸ್‌ನಲ್ಲಿ ಇಟ್ಟುಕೊಂಡಿರುವುದನ್ನು ನೀವು ನೋಡಿರುತ್ತೀರಿ. ಆದರೆ, ಬೆಂಗಳೂರಿನ ಆಟೋ ಡ್ರೈವರ್‌ರೊಬ್ಬ ತನ್ನ ಪತ್ನಿಯ ಕಿವಿಯೋಲೆಯನ್ನು ತನ್ನ ಆಟೋದಲ್ಲಿ ನೇತು ಹಾಕಿ ಸುದ್ದಿಯಾಗಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಪ್ರೀತಿ ವ್ಯಕ್ತಪಡಿಸಿದ ರೀತಿ ಕಂಡು ಶಾಕ್ ಆಗಿದ್ದಾರೆ.

Video: ಪತ್ನಿಯ ಕಿವಿಯೋಲೆ ಆಟೋದಲ್ಲಿ ನೇತು ಹಾಕಿ ಪ್ರೀತಿ ವ್ಯಕ್ತಪಡಿಸಿದ ಆಟೋ ಡ್ರೈವರ್
ವೈರಲ್‌ ವಿಡಿಯೋ
Image Credit source: Instagram

Updated on: Feb 24, 2026 | 10:54 AM

ಬೆಂಗಳೂರು, ಫೆಬ್ರವರಿ 24: ಪ್ರೀತಿ (love) ಕುರುಡು ಪ್ರೀತಿಗೆ ಕಣ್ಣಿಲ್ಲ. ಪ್ರೀತಿಯಲ್ಲಿ ಬಿದ್ದವರಿಗೆ ಈ ಜಗತ್ತಿನ ಪರಿಜ್ಞಾನವೇ ಇರುವುದಿಲ್ಲ ಎಂದು ಹೇಳುವುದನ್ನು ನೋಡಿರಬಹುದು. ವಿಭಿನ್ನವಾಗಿ ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿ ಸಂಗಾತಿಯ ಮನಸ್ಸು ಗೆಲ್ತಾರೆ. ಆದರೆ ಬೆಂಗಳೂರಿನ (Bengaluru) ಆಟೋ ಚಾಲಕನೊಬ್ಬ ತನ್ನ ಮಡದಿ ಮೇಲಿನ ಪ್ರೀತಿಯನ್ನು ವಿಭಿನ್ನವಾಗಿ ವ್ಯಕ್ತಪಡಿಸಿ ನೆಟ್ಟಿಗರ ಗಮನ ಸೆಳೆದಿದ್ದಾನೆ. ಹೌದು ತನ್ನ ಪತ್ನಿಯ ಕಿವಿಯೋಲೆಯನ್ನು ಆಟೋದಲ್ಲಿ ನೇತು ಹಾಕಿ ಪತ್ನಿಯ ಪ್ರೀತಿಯನ್ನು ಕೆಲಸದ ನಡುವೆಯೂ ನೆನಪಿಸಿಕೊಂಡಿದ್ದಾನೆ. ಈ ವಿಡಿಯೋ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮರ್ಲಿನ್ ಸುಲ್ತಾನ ಅಕಂಡ್ (marlyn.sultana.akand) ಹೆಸರಿನ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದು, ಪ್ರೀತಿಯಲ್ಲಿ ಬಿದ್ದ ಪುರುಷರು ಎಂದು ಶೀರ್ಷಿಕೆ ನೀಡಲಾಗಿದೆ. ಎಲ್ಲ ಪ್ರೇಮಿಗಳೂ ಹೂವುಗಳನ್ನು ನೀಡುವುದಿಲ್ಲ. ಕೆಲವರು ತಮ್ಮ ಪ್ರೀತಿಯ ನೆನಪುಗಳನ್ನು ದಿನವಿಡೀ ಕಣ್ಣಮುಂದೆ ಇರುವಂತೆ ನೋಡಿಕೊಳ್ಳುತ್ತಾರೆ ಎಂದು ಬರೆದುಕೊಂಡಿದ್ದಾರೆ.

ವೈರಲ್ ವಿಡಿಯೋ ಇಲ್ಲಿದೆ

ಕಂಟೆಂಟ್ ಕ್ರಿಯೇಟರ್ ಮರ್ಲಿನ್ ಸುಲ್ತಾನ ಅಕಂಡ್ ಅವರು ಈ ಆಟೋದಲ್ಲಿ ಪ್ರಯಾಣಿಸುವಾಗ ಚಾಲಕನ ಸೀಟ್‌ನ ಬಳಿ ಪತ್ನಿಯ ಕಿವಿಯೋಲೆಗಳನ್ನು ತೂಗು ಹಾಕಿರುವುದನ್ನು ಗಮನಿಸಿದ್ದಾರೆ. ಪ್ರಯಾಣದ ವೇಳೆ ನೇತು ಹಾಕಿರುವ ಕಿವಿಯೋಲೆಯ ವಿಡಿಯೋ ಮಾಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು ಜೀವನ ಇಷ್ಟೊಂದು ದುಬಾರಿನಾ?; ತಿಂಗಳ ಖರ್ಚು 70 ಸಾವಿರ ರೂ., ಪಟ್ಟಿ ಬಿಚ್ಚಿಟ್ಟ ಯುವಕ

ಈ ವಿಡಿಯೋ ಎರಡು ಮಿಲಿಯನ್‌ಗೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಈ ವಿಡಿಯೋ ನೋಡಿದ್ರೆ ಸಿನಿಮಾ ದೃಶ್ಯ ನೆನಪಾಯ್ತು ಎಂದಿದ್ದಾರೆ. ಇನ್ನೊಬ್ಬರು, ಈ ಚಾಲಕನ ಪತ್ನಿ ಅದೃಷ್ಟವಂತೆ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು ಇಂತಹ ಪರಿಶುದ್ಧ ಪ್ರೀತಿ ಮಾಡುವವರು ಸಿಗೋದು ವಿರಳ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published On - 10:53 am, Tue, 24 February 26

ಸಾಯಿನಂದಾ

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
Follow Us