AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವ ಸಲುವಾಗಿ ಸಂಚಾರ ನಿಯಮ ಉಲ್ಲಂಘಿಸಿದ ಯುಟ್ಯೂಬರ್; ವ್ಯಾಪಕ ಶ್ಲಾಘನೆ

ಬೆಂಗಳೂರು ನಗರದಲ್ಲಿ ನಿತ್ಯ ಒಂದಲ್ಲಾ ಒಂದು ಸಂಚಾರ ಸಮಸ್ಯೆ ಇದ್ದೇ ಇರುತ್ತದೆ. ವಾಹನ ಸವಾರರು ಈ ಸಮಸ್ಯೆಯಿಂದ ಪರದಾಡುತ್ತಿರುತ್ತಾರೆ. ಅದೇ ರೀತಿ ಇತ್ತೀಚಿಗಷ್ಟೆ ಕೆಂಪು ಸಿಗ್ನಲ್‌ ಬಿದ್ದಾಗ ಆಂಬ್ಯುಲೆನ್ಸ್‌ ಒಂದು ರಸ್ತೆ ಮಧ್ಯೆಯೇ ಸಿಕ್ಕಿ ಹಾಕಿಕೊಂಡಿದ್ದು, ಈ ಸಂದರ್ಭದಲ್ಲಿ ಯುಟ್ಯೂಬರ್‌ ಟ್ರಾಫಿಕ್‌ ರೂಲ್ಸ್‌ಗಳನ್ನು ಉಲ್ಲಂಘಿಸುವ ಮೂಲಕ ಆಂಬ್ಯುಲೆನ್ಸ್‌ ಹೋಗಲು ದಾರಿ ಮಾಡಿಕೊಟ್ಟಿದ್ದಾನೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದ್ದು, ಯುವಕನ ಈ ತ್ವರಿತ ಹಾಗೂ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

ಆಂಬ್ಯುಲೆನ್ಸ್‌ಗೆ ದಾರಿ ಮಾಡಿಕೊಡುವ ಸಲುವಾಗಿ ಸಂಚಾರ ನಿಯಮ ಉಲ್ಲಂಘಿಸಿದ ಯುಟ್ಯೂಬರ್; ವ್ಯಾಪಕ ಶ್ಲಾಘನೆ
ವೈರಲ್​​ ವಿಡಿಯೋ
ಮಾಲಾಶ್ರೀ ಅಂಚನ್​
| Edited By: |

Updated on:Apr 02, 2025 | 11:18 AM

Share

ಬೆಂಗಳೂರು, ಮಾ. 25: ಕೆಲವೊಂದು ಬಾರಿ ನಾವು ತಪ್ಪು (wrong) ಮಾಡಿದಾಗ ಅಥವಾ ನಿಯಮಗಳನ್ನು (rules) ಉಲ್ಲಂಘಿಸಿದಾಗ (infringement) ಅದರ ಉದ್ದೇಶ ಒಳ್ಳೆಯದಾಗಿದ್ದರೆ ಜನ ಅದನ್ನು ಕ್ಷಮಿಸುತ್ತಾರೆ. ಹೀಗೆ ಒಂದಷ್ಟು ಜನ ಒಳ್ಳೆಯ ಉದ್ದೇಶಗಳಿಗಾಗಿ ಸಣ್ಣಪುಟ್ಟ ತಪ್ಪುಗಳನ್ನು ಮಾಡುತ್ತಾರೆ. ಅದೇ ರೀತಿ ಇಲ್ಲೊಬ್ಬ ಯುಟ್ಯೂಬರ್‌ (Youtuber) ಆಂಬ್ಯುಲೆನ್ಸ್‌ಗೆ (ambulance) ದಾರಿ ಮಾಡಿ ಕೊಡುವ ಸಲುವಾಗಿ ಸಂಚಾರ ನಿಯಮವನ್ನೇ (traffic rules) ಉಲ್ಲಂಘಿಸಿದ್ದಾನೆ. ರೆಡ್‌ ಸಿಗ್ನಲ್‌ ಬಿದ್ದ ಕಾರಣ ತಕ್ಷಣ ಹೋಗಲು ಸಾಧ್ಯವಾಗದೆ ಆಂಬ್ಯುಲೆನ್ಸ್‌ ನಡು ರಸ್ತೆಯಲ್ಲಿಯೇ ಸಿಕ್ಕಿ ಹಾಕಿಕೊಂಡಿತ್ತು. ಇದನ್ನು ಕಂಡಂತಹ ಯುಟ್ಯೂಬರ್‌ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿ ಅಂಬ್ಯುಲೆನ್ಸ್‌ ಹೋಗಲು ದಾರಿ ಮಾಡಿಕೊಟ್ಟಿದ್ದಾನೆ. ಈ ವಿಡಿಯೋ ಇದೀಗ ವೈರಲ್‌ ಆಗುತ್ತಿದ್ದು, ಯುವಕನ ಈ ತ್ವರಿತ ಹಾಗೂ ಮಾನವೀಯ ಕಾರ್ಯಕ್ಕೆ ವ್ಯಾಪಕ ಶ್ಲಾಘನೆ ವ್ಯಕ್ತವಾಗುತ್ತಿದೆ.

ಟ್ರಾಫಿಕ್‌ ಕಾರಣದಿಂದಾಗಿ ತುರ್ತು ಸಂದರ್ಭಗಳಲ್ಲಿ ಆಂಬ್ಯುಲೆನ್ಸ್‌ಗಳಿಗೆ ಸಮಯಕ್ಕೆ ಸರಿಯಾಗಿ ರೋಗಿಗಳನ್ನು ಆಸ್ಪತ್ರೆಗೆ ಸಾಗಿಸಲು ಕಷ್ಟಸಾಧ್ಯವಾಗುತ್ತದೆ. ಅದೇ ರೀತಿಯ ಘಟನೆಯೊಂದು ನಮ್ಮ ಬೆಂಗಳೂರಿನಲ್ಲಿ ನಡೆದಿದ್ದು, ರೆಡ್‌ ಸಿಗ್ನಲ್‌ ಬಿದ್ದ ಕಾರಣ ಆಂಬ್ಯುಲೆನ್ಸ್‌ ನಡು ರಸ್ತೆಯಲ್ಲಿಯೇ ಸಿಕ್ಕಿ ಹಾಕಿಕೊಂಡಿದೆ. ಇದನ್ನು ಕಂಡಂತಹ ಯುಟ್ಯೂಬರ್‌ ಟ್ರಾಫಿಕ್‌ ರೂಲ್ಸ್‌ ಬ್ರೇಕ್‌ ಮಾಡಿ ತನ್ನ ತ್ವರಿತ ಚಿಂತನೆಯ ಮೂಲಕ ಅಂಬ್ಯುಲೆನ್ಸ್‌ ಹೋಗಲು ದಾರಿ ಮಾಡಿಕೊಟ್ಟಿದ್ದಾನೆ.

ವೈರಲ್​​ ವಿಡಿಯೋ ಇಲ್ಲಿದೆ ನೋಡಿ:

ಈ ಕುರಿತ ವಿಡಿಯೋವನ್ನು Rumi15-kindhearted ಹೆಸರಿನ ಯುಟ್ಯೂಬ್‌ ಚಾನೆಲ್‌ನಲ್ಲಿ ಹಂಚಿಕೊಳ್ಳಲಾಗಿದ್ದು, “ತುರ್ತು ಪ್ರತಿಕ್ರಿಯೆ; ಆಂಬ್ಯಲೆನ್ಸ್‌ಗಾಗಿ ಸಂಚಾರ ದಟ್ಟಣೆ ತೆರವುಗೊಳಿಸಿದ ಯುವಕ, ಜೀವ ಉಳಿಸಲು ಒಟ್ಟಾಗಿ ಕೆಲಸ ಮಾಡೋಣ” ಎಂಬ ಶೀರ್ಷಿಕೆಯನ್ನು ಬರೆದುಕೊಳ್ಳಲಾಗಿದೆ.

ವೈರಲ್‌ ಆಗುತ್ತಿರುವ ವಿಡಿಯೋದಲ್ಲಿ ಆಂಬ್ಯುಲೆನ್ಸ್‌ ರೆಡ್‌ ಸಿಗ್ನಲ್‌ ಬಿದ್ದಾಗ ಟ್ರಾಫಿಕ್‌ ಮಧ್ಯೆ ಸಿಕ್ಕಿ ಹಾಕಿಕೊಂಡಿರುವ ದೃಶ್ಯವನ್ನು ಕಾಣಬಹುದು. ಆ ತಕ್ಷಣ ಮುಂದೆ ಬಂದಂತಹ ಯುಟ್ಯೂಬರ್‌ ಇತ್ತ ಕಡೆಯಿಂದ ಹೋಗುತ್ತಿದ್ದ ವಾಹನಗಳನ್ನು ತಡೆದು ನಿಲ್ಲಿಸಿ ತಕ್ಷಣ ಆಂಬ್ಯುಲೆನ್ಸ್‌ ಹೋಗಲು ದಾರಿ ಮಾಡಿಕೊಟ್ಟಿದ್ದಾನೆ.

ಇದನ್ನೂ ಓದಿ: 64 ವರ್ಷಗಳ ಹಿಂದೆ ಪ್ರೀತಿಸಿ ಓಡಿ ಹೋಗಿ ಮದುವೆಯಾಗಿದ್ದ ಜೋಡಿಗೆ ಮರುಮದುವೆ

ನಾಲ್ಕು ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ವಿಡಿಯೋ 1 ಕೋಟಿಗೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಬಹಳ ಒಳ್ಳೆಯ ಕೆಲಸʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಆ ಸಂದರ್ಭದಲ್ಲಿ ತಾಳ್ಮೆಯಿಂದ ವರ್ತಿಸಿದ ಸಾರ್ವಜನಿಕರಿಗೂ ಒಂದು ನಮನʼ ಎಂಬ ಕಾಮೆಂಟ್‌ ಬರೆದುಕೊಂಡಿದ್ದಾರೆ. ಮತ್ತೊಬ್ಬ ಬಳಕೆದಾರರು ʼಇಂತಹ ಮಾನವೀಯ ಗುಣ ಎಲ್ಲರಲೂ ಇರಬೇಕುʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:03 pm, Tue, 25 March 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್