AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: 1.5 ಲಕ್ಷ ರೂ. ತಲುಪಿದ ಬೆಂಗಳೂರಿನ ನರ್ಸರಿ, ಎಲ್‌ಕೆಜಿ ಸ್ಕೂಲ್‌ ಫೀಸ್; ವೈರಲ್‌ ಆಯ್ತು ದುಬಾರಿ ಶುಲ್ಕ ವಿವರ

ಸೋಷಿಯಲ್‌ ಮೀಡಿಯಾದಲ್ಲಿ ಕೆಲವೊಂದು ಕುತೂಹಲಕಾರಿ ಫೋಟೋಗಳು ವಿಡಿಯೋಗಳು ಹರಿದಾಡುತ್ತಿರುತ್ತದೆ. ಇದೀಗ ಅಂತಹದ್ದೇ ಫೋಟೋವೊಂದು ವೈರಲ್‌ ಆಗಿದ್ದು, ಖಾಸಗಿ ಶಾಲೆಯೊಂದರ ಒಂದು ವರ್ಷದ ಸ್ಕೂಲ್‌ ಫೀಸ್‌ ಕಂಡು ನೆಟ್ಟಿಗರು ದಂಗಾಗಿದ್ದಾರೆ. ಹೌದು ನರ್ಸರಿ ಮತ್ತು ಎಲ್‌ಕೆಜಿ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ಬರೋಬ್ಬರಿ 1.5 ಲಕ್ಷ ರೂ. ಶಾಲಾ ಶುಲ್ಕವನ್ನು ವಿಧಿಸಿದ್ದು, ಇದನ್ನೆಲ್ಲಾ ನೋಡ್ತಿದ್ರೆ ಸರ್ಕಾರಿ ಶಾಲೆಗಳೇ ಬೆಸ್ಟ್‌ ಅನ್ಸುತ್ತೆ ಎಂದು ನೆಟ್ಟಿಗರು ಹೇಳಿಕೊಂಡಿದ್ದಾರೆ.

Viral: 1.5 ಲಕ್ಷ ರೂ. ತಲುಪಿದ ಬೆಂಗಳೂರಿನ ನರ್ಸರಿ, ಎಲ್‌ಕೆಜಿ ಸ್ಕೂಲ್‌ ಫೀಸ್; ವೈರಲ್‌ ಆಯ್ತು ದುಬಾರಿ ಶುಲ್ಕ ವಿವರ
ಮಾಲಾಶ್ರೀ ಅಂಚನ್​
| Edited By: |

Updated on: Oct 25, 2024 | 11:51 AM

Share

ಖಾಸಗಿ ಶಾಲೆಗಳ ಸ್ಕೂಲ್ ಫೀಸ್‌ ಯಾವಾಗ್ಲೂ ತುಂಬಾನೇ ದುಬಾರಿಯಾಗಿರುತ್ತದೆ ಅನ್ನೋ ವಿಚಾರ ಎಲ್ರಿಗೂ ಗೊತ್ತೇ ಇದೆ. ಆದ್ರೆ ವರ್ಷದಿಂದ ವರ್ಷಕ್ಕೆ ಫ್ರೈವೆಟ್‌ ಸ್ಕೂಲ್‌ ಫೀಸ್‌ಗಳು ಗಗನಕ್ಕೇರುತ್ತಿವೆ. ಇದಕ್ಕೆ ಉತ್ತಮ ಉದಾಹರಣೆಯಂತಿರುವ ಪೋಸ್ಟ್‌ ಒಂದು ಇದೀಗ ಎಲ್ಲಡೆ ಹರಿದಾಡುತ್ತಿದ್ದು, ಇಲ್ಲೊಂದು ಖಾಸಗಿ ಶಾಲೆ ಬರೀ ನರ್ಸರಿ ಮತ್ತು ಎಲ್.ಕೆ.ಜಿಯ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ಬರೋಬ್ಬರಿ 1.5 ಲಕ್ಷ ರೂ. ಶಾಲಾ ಶುಲ್ಕವನ್ನು ವಿಧಿಸಿದೆ. ಈ ದುಬಾರಿ ಶುಲ್ಕ ವಿವರದ ಫೋಟೋ ಇದೀಗ ವೈರಲ್‌ ಆಗುತ್ತಿದ್ದು, ಇದನ್ನೆಲ್ಲಾ ನೋಡ್ತಿದ್ರೆ ಸರ್ಕಾರಿ ಶಾಲೆಗಳೇ ಬೆಸ್ಟ್‌ ಅನ್ಸುತ್ತೆ ಎಂದು ನೆಟ್ಟಿಗರು ಹೇಳಿಕೊಂಡಿದ್ದಾರೆ.

2024-25 ರ ನರ್ಸರಿ ಮತ್ತು ಜ್ಯೂನಿಯರ್‌ ಕೆಜಿ ಬ್ಯಾಚ್‌ನ ಶಾಲಾ ಶುಲ್ಕ ರಶೀದಿಯ ಫೋಟೋ ಇದೀಗ ವೈರಲ್‌ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಈ ಕುರಿತ ಪೋಸ್ಟ್‌ ಒಂದನ್ನು ಬೆಂಗಳೂರಿನ ವೈದ್ಯರಾದ ಡಾ. ಜಗದೀಶ್‌ ಚತುರ್ವೇದಿ (DrJagadishChatur) ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಕೇವಲ ಪೇರೆಂಟ್‌ ಓರಿಯೆಂಟೇಷನ್‌ಗೆ 8400 ಫೀಸ್‌ ಅಂತೆ, ಇದನ್ನೆಲ್ಲಾ ನೋಡಿ ಈಗ ನಾನು ಒಂದು ಶಾಲೆಯನ್ನು ತೆರೆಯಬೇಕೆಂದು ಪ್ಲಾನ್‌ ಮಾಡ್ತಿದ್ದೇನೆ” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ಮಗನ ಬರ್ತ್‌ ಡೇ ಸೆಲೆಬ್ರೇಷನ್‌ ವಿಡಿಯೋ ರೆಕಾರ್ಡಿಂಗ್‌ ಮಾಡುತ್ತಿದ್ದಾಗ ಮಾತನಾಡಿದಳೆಂದು ಹೆಂಡ್ತಿ ಕಪಾಳಕ್ಕೆ ಬಾರಿಸಿದ ಪತಿರಾಯ

ವೈರಲ್‌ ಆಗುತ್ತಿರುವ ಶಾಲಾ ಶುಲ್ಕ ವಿವರದ ಫೋಟೋದಲ್ಲಿ ಅಡ್ಮಿಶನ್ ಫೀಸ್‌, ಪೇರೆಂಟ್‌ ಓರಿಯೆಂಟೇಷನ್‌ ಫೀಸ್‌, ವಾರ್ಷಿಕ ಶುಲ್ಕ ಎಲ್ಲವನ್ನು ಸೇರಿಸಿ ಬರೋಬ್ಬರಿ 1,51,656 ರೂ. ಶಾಲಾ ಶುಲ್ಕವನ್ನು ವಿಧಿಸಿರುವ ದೃಶ್ಯವನ್ನು ಕಾಣಬಹುದು.

ಅಕ್ಟೋಬರ್‌ 22 ರಂದು ಹಂಚಿಕೊಳ್ಳಲಾದ ಈ ಪೋಸ್ಟ್‌ 98 ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಶಿಕ್ಷಣ ವ್ಯವಸ್ಥೆಯಲ್ಲಿ ಕ್ರಾಂತಿಯ ಅಗತ್ಯವಿದೆʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹೀಗೆ ಹಣ ಲೂಟಿ ಮಾಡಲು ಸರ್ಕಾರಗಳೇ ಖಾಸಗಿ ಶಾಲೆಗಳಿಗೆ ಮುಕ್ತ ಅವಕಾಶವನ್ನು ನೀಡಿದೆʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼಅಲ್ವಾ ಸ್ವಾಮಿ ಎಲ್.ಕೆ.ಜಿ ಮಕ್ಕಳಿಗೆ ಇಷ್ಟೆಲ್ಲಾ ಫೀಸ್‌ ವಿಧಿಸುವ ಅವಶ್ಯಕತೆ ಇದ್ಯಾʼ ಎಂದು ಹೇಳಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಕುಡಿದು ಟೈಟ್ ಆದವರಿಗೆ ಉಚಿತವಾಗಿ ಮನೆಗೆ ತಲುಪಿಸುವ ವ್ಯವಸ್ಥೆ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
ಮಾಧ್ಯಮದ ಕ್ಯಾಮೆರಾ​​​ ನೋಡುತ್ತಿದ್ದಂತೆ ಮುಖ ಮುಚ್ಚಿಕೊಂಡ ಯುವತಿ
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
New Year 2026 Live: ನ್ಯೂ ಇಯರ್; ರಾಜ್ಯದ ಉದ್ದಗಲಕ್ಕೂ ಸಂಭ್ರಮ ಜೋರು
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಪುಟಿನ್ ನಿವಾಸದ ಮೇಲೆ ದಾಳಿ ಮಾಡಿದ ಉಕ್ರೇನ್; ರಷ್ಯಾದಿಂದ ವಿಡಿಯೋ ಬಿಡುಗಡೆ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ಕನ್ಯಾಕುಮಾರಿಯಲ್ಲಿ 2025ರ ಕೊನೆಯ ಸೂರ್ಯಾಸ್ತದ ನೋಡಲು ಆಗಮಿಸಿದ ಜನಸಾಗರ
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ನ್ಯೂಇಯರ್ ಸೆಲೆಬ್ರೇಷನ್​​​ ಮುನ್ನ ಮಳೆ ಎಂಟ್ರಿ: ಪಾರ್ಟಿ ಪ್ರಿಯರಿಗೆ ಶಾಕ್!​
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಅಭಿಮಾನಿಗಳ ಜೊತೆ ಸಿನಿಮಾ ನೋಡುತ್ತಿರುವ ಉದ್ದೇಶ ಏನು? ಸುದೀಪ್ ಉತ್ತರ
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ಕಳೆದು ಹೋಗಿದ್ದ ಬಾಲಕಿಯನ್ನು ಮರಳಿ ತಾಯಿ ಮಡಿಲಿಗೆ ಸೇರಿಸಿದ ಪೊಲೀಸರು
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ: ಸುದೀಪ್
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?
ಸ್ಟ್ರೋಕ್ ಗೆ ಒಳಗಾದವರನ್ನು ಎಷ್ಟು ಸಮಯದೊಳಗೆ ಆಸ್ಪತ್ರೆಗೆ ದಾಖಲಿಸಬೇಕು?