AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ; ವಿಚಿತ್ರ ಕಾರಣ ಕೊಟ್ಟು 80,000 ರೂ ಬಾಡಿಗೆ ಕೇಳಿದ ಮನೆ ಮಾಲೀಕ

ಮಾಯನಗರಿ ಬೆಂಗಳೂರಿನಲ್ಲಿ ಕಡಿಮೆ ವೆಚ್ಚದ ಬಾಡಿಗೆ ಮನೆ ಸಿಗೋದು ಕಷ್ಟನೇ. ಇನ್ನೊಂದೆಡೆ ಮನೆ ಬಾಡಿಗೆ ನೀಡುವ ಮನೆ ಮಾಲೀಕರ ದುರಾಸೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದೀಗ ಬೆಂಗಳೂರಿನಲ್ಲಿ ಬಾಡಿಗೆ ಮನೆ ನೋಡಲು ಹೋದ ಮಹಿಳೆಯೊಬ್ಬರಿಗೆ ಇಂತಹದ್ದೇ ಕಹಿ ಅನುಭವವಾಗಿದೆ. ವಿಚಿತ್ರ ಕಾರಣ ಹೇಳಿ ಮನೆ ಮಾಲೀಕರು 80,000 ರೂಪಾಯಿ ಬಾಡಿಗೆ ಕೇಳಿದ್ದಾರಂತೆ. ಈ ಬಗ್ಗೆ ಮಹಿಳೆಯು ಮಾಡಿದ ಪೋಸ್ಟ್ ಸದ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Viral: ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ; ವಿಚಿತ್ರ ಕಾರಣ ಕೊಟ್ಟು 80,000 ರೂ ಬಾಡಿಗೆ ಕೇಳಿದ ಮನೆ ಮಾಲೀಕ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Feb 16, 2026 | 3:45 PM

Share

ಬೆಂಗಳೂರು, ಫೆಬ್ರವರಿ 16: ಬೆಂಗಳೂರಿನಲ್ಲಿ (Bengaluru) ಕಡಿಮೆ ಬಾಡಿಗೆಯುಳ್ಳ ಮನೆ ಸಿಗುವುದೇ ಕಷ್ಟ. ಹೌದು, ಉದ್ಯೋಗ ಗಿಟ್ಟಿಸಿಕೊಂಡು ಬಾಡಿಗೆ ಮನೆ ಮಾಡಿ ನೆಮ್ಮದಿಯಿಂದ ಇರೋಣ ಅಂದ್ರೆ ಮನೆ ಮಾಲೀಕರ ಡಿಮ್ಯಾಂಡ್ ಹೆಚ್ಚಾಗಿದೆ. ನೀವೇನಾದ್ರೂ ಬೆಂಗಳೂರಿನಲ್ಲಿ ಮನೆ ಹುಡುಕುತ್ತಿದ್ರೆ ಮನೆ ಮಾಲೀಕರ ಡಿಮ್ಯಾಂಡ್ ನೋಡಿಯೇ ತಲೆ ಗ್ರಿರ್ ಎನ್ನುತ್ತೆ. ಇದೀಗ ಬೆಂಗಳೂರಿನ ಮನೆ ಮಾಲೀಕರು ಆಸೆ ಬುರುಕರು ಎನ್ನುವುದಕ್ಕೆ ಈ ಪೋಸ್ಟ್‌ಯೇ ಸಾಕ್ಷಿ. ಬೆಂಗಳೂರಿನಲ್ಲಿ ಬಾಡಿಗೆ ಮನೆ ನೋಡಲು ಹೋದ ಮಹಿಳೆಗೆ ಮನೆ ಮಾಲೀಕರು ನೈಸರ್ಗಿಕ ಬೆಳಕು ಮತ್ತು ಬಿಸಿಲು ಬರುತ್ತದೆ ಎನ್ನುವ ಕಾರಣ ನೀಡಿ 80,000 ರೂಪಾಯಿ ಬಾಡಿಗೆ ಎಂದು ಕೇಳಿದ್ದಾರೆ. ಮನೆ ಮಾಲೀಕರು ಹೇಳಿದ್ದನ್ನು ನೋಡಿ ಶಾಕ್ ಆದ ಮಹಿಳೆಯು ಪೋಸ್ಟ್ ಮಾಡಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅನು (Anu) ಹೆಸರಿನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್‌ನಲ್ಲಿ ಬೆಂಗಳೂರು ಬಾಡಿಗೆ ನನಗೆ ಅಚ್ಚರಿ ಮೂಡಿಸುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ. ಮೇಡಂ, ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ ಹೀಗಾಗಿ ಅದರ ಬಾಡಿಗೆ 80,000 ರೂ ಅಂದರೆ ಏನರ್ಥ ಎಂದು ಪ್ರಶ್ನೆ ಮಾಡಿದ್ದಾರೆ.

ವೈರಲ್‌ ಪೋಸ್ಟ್‌ ಇಲ್ಲಿದೆ

ಇದನ್ನೂ ಓದಿ: ತಿಂಗಳ ಸಂಬಳ 3 ಲಕ್ಷ ರೂ, ಖರ್ಚು ಆಗೋದು 2 ಲಕ್ಷಕ್ಕೂ ಹೆಚ್ಚು; ತನ್ನ ಖರ್ಚು ವೆಚ್ಚಗಳನ್ನು ವಿವರಿಸಿದ ಇಂಜಿನಿಯರ್

ಫೆಬ್ರವರಿ 13 ರಂದು ಹಂಚಿಕೊಳ್ಳಲಾದ ಈ ಪೋಸ್ಟ್ ಐದು ಸಾವಿರಕ್ಕೂ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿವೆ. ಒಬ್ಬ ಬಳಕೆದಾರ, ಪ್ರಮುಖ ನಗರಗಳಲ್ಲಿಯೂ ಇದೇ ಪರಿಸ್ಥಿತಿ. ಬಾಡಿಗೆ ಹೆಚ್ಚಿಸಲು ಅವರು ಹೊಸ ನವೀನ ಮಾರ್ಗಗಳನ್ನು ಕಂಡುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಕೆಲವರು ಇಲ್ಲಿ ಬಾಲ್ಕನಿ ಇದೆ, ಬಾಡಿಗೆ 1 ಲಕ್ಷ ಅಂತ ಹೇಳ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರು, ಬಾಡಿಗೆಯಲ್ಲಿ ವಿಟಮಿನ್ ಡಿ ಕೂಡ ಸೇರಿದೆಯಂತೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!