Viral: ಇದು ನ್ಯಾಯವೇ?, ಇದು ಸಮಾನತೆಯೇ? ಮಹಿಳೆಯರಿಗಿರುವ ಉಚಿತ ಬಸ್‌ ಸೇವೆಯನ್ನು ಪ್ರಶ್ನಿಸಿ ಪೋಸ್ಟ್‌ ಹಂಚಿಕೊಂಡ ಬೆಂಗಳೂರಿನ ವ್ಯಕ್ತಿ

ಕರ್ನಾಟಕ ರಾಜ್ಯ ಸರ್ಕಾರ ಹೊಸ ವರ್ಷದ ಆರಂಭದಲ್ಲಿಯೇ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರವನ್ನು ಏರಿಸಿದೆ. ಒಂದೆಡೆ ಮಹಿಳೆಯರು ಫ್ರೀಯಾಗಿ ಬಸ್ಸಿನಲ್ಲಿ ಓಡಾತಿದ್ರೆ, ಇನ್ನೊಂದೆಡೆ ಪುರುಷ ಪ್ರಯಾಣಿಕರಿಗೆ ಟಿಕೆಟ್‌ ದರ ಹೆಚ್ಚಳ ಮಾಡಲಾಡಗಿದೆ. ಈ ಬಗ್ಗೆ ಭಾರೀ ಆಕ್ರೋಶ ಕೂಡಾ ವ್ಯಕ್ತವಾಗುತ್ತಿದೆ. ಇನ್ನೂ ಮಹಿಳೆಯರಿಗಿರುವ ಉಚಿತ ಬಸ್‌ ಸೇವೆಯನ್ನು ಪ್ರಶ್ನಿಸಿ ಬೆಂಗಳೂರಿನ ವ್ಯಕ್ತಿಯೊಬ್ಬರು ಪೋಸ್ಟ್‌ ಒಂದನ್ನು ಶೇರ್‌ ಮಾಡಿದ್ದಾರೆ. ಈ ಪೋಸ್ಟ್‌ ಇದೀಗ ಸಿಕ್ಕಾಪಟ್ಟೆ ವೈರಲ್‌ ಆಗುತ್ತಿದೆ.

Viral: ಇದು ನ್ಯಾಯವೇ?, ಇದು ಸಮಾನತೆಯೇ? ಮಹಿಳೆಯರಿಗಿರುವ ಉಚಿತ ಬಸ್‌ ಸೇವೆಯನ್ನು ಪ್ರಶ್ನಿಸಿ ಪೋಸ್ಟ್‌ ಹಂಚಿಕೊಂಡ ಬೆಂಗಳೂರಿನ ವ್ಯಕ್ತಿ
Bengaluru Man Shares 6 Thoughts Questioning Free Bus Rides For Women
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on: Jan 10, 2025 | 2:33 PM

ಕರ್ನಾಟಕ ರಾಜ್ಯ ಸರ್ಕಾರ ಹೊಸ ವರ್ಷದ ಆರಂಭದಲ್ಲಿಯೇ ಕೆಎಸ್‌ಆರ್‌ಟಿಸಿ ಬಸ್‌ ಟಿಕೆಟ್‌ ದರವನ್ನು ಏರಿಸಿದೆ. ನಮ್ಮ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್‌ ಸೇವೆ ಕೊಡಲಾಗುತ್ತಿದೆ. ಆದರೆ ಇದೀಗ ಪುರುಷ ಪ್ರಯಾಣಿಕರಿಗೆ ಸರ್ಕಾರಿ ಬಸ್ಸುಗಳಲ್ಲಿ ಟಿಕೆಟ್‌ ದರ ಏಕಾಏಕಿ ಹೆಚ್ಚಳ ಮಾಡಿದ್ದು, ಇದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಈ ಬಗ್ಗೆ ಬೆಂಗಳೂರಿನ ವ್ಯಕ್ತಿಯೊಬ್ಬರು ನೀವು ಹೀಗೆ ಮಹಿಳೆಯರಿಗೆ ಫ್ರೀ ಬಸ್‌ ಸೇವೆ ಕೊಡೋ ಬದ್ಲು ಅದೇ ಹಣವನ್ನು ಉತ್ತಮ ರೈತರಿಗೆ, ರಸ್ತೆ ಗುಂಡಿಗಳನ್ನು ಸರಿ ಮಾಡುವಂತಹ ಉತ್ತಮ ಕೆಲಸಕ್ಕೆ ಉಪಯೋಗಿಸಬಹುದಲ್ಲವೇ ಎಂದು ಪ್ರಶ್ನಿಸಿದ್ದಾರೆ. ಈ ಪೋಸ್ಟ್‌ ಇದೀಗ ಭಾರೀ ವೈರಲ್‌ ಆಗುತ್ತಿದೆ.

ಬೆಂಗಳೂರು ಮೂಲದ ಕಿರಣ್‌ ಕುಮಾರ್‌ (KiranKS) ಎಂಬವರು ಮಹಿಳೆಯರಿಗಿರುವ ಉಚಿತ ಬಸ್‌ ಪ್ರಯಾಣವನ್ನು ಪ್ರಶ್ನಿಸಿ, ತಮ್ಮ ಆರು ಆಲೋಚನೆಗಳ ಬಗ್ಗೆ ಸೋಷಿಯಲ್‌ ಮೀಡಿಯಾ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ ಹಂಚಿಕೊಂಡಿದ್ದಾರೆ.

“ಬೆಂಗಳೂರಿನಿಂದ ಮೈಸೂರಿಗೆ ಹೋಗಲು ಆರಾಮದಾಯಕವಾಗಿರುವ ಕೆಎಸ್‌ಆರ್‌ಟಿಸಿ ಬಸ್‌ ಹತ್ತಿದೆ. ಅಲ್ಲಿ ಟಿಕೆಟ್‌ ದರ 210 ಇತ್ತು. ಇದನ್ನು ನೋಡಿದಾಗ ನನಗೆ ಕೆಲವೊಂದು ಆಲೋಚನೆಗಳು ಬಂದವು;

  1. ಬಸ್ಸಿನ 50 ಪ್ರಯಾಣಿಕರಲ್ಲಿ ಸುಮಾರು 30 ಮಂದಿ ಮಹಿಳಾ ಪ್ರಯಾಣಿಕರು. ಅವರು ಆಧಾರ್‌ ತೋರಿಸಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಇದು ನ್ಯಾಯವೇ? ಇದು ಸಮಾನತೆಯೇ?
  2. ಅದರಲ್ಲಿರುವ 20 ಪುರುಷರು ಸಂಪೂರ್ಣ ಟಿಕೆಟ್‌ ಹಣ ಪಾವತಿಸಿ ಪ್ರಯಾಣ ಮಾಡ್ಬೇಕು. ಅದು ನ್ಯಾಯವೇ?
  3. ಒಬ್ಬ ವಯಸ್ಸಾದ ವ್ಯಕ್ತಿ ದರ ಪಾವತಿಸಲು ಹಣವನ್ನು ಹುಡುಕಲು ಹೆಣಗಾಡುತ್ತಿದ್ದರೆ, ಆತನ ಪಕ್ಕದಲ್ಲಿಯೇ ಕುಳಿತ ಹುಡುಗಿಯೊಬ್ಬಳು ವಿಡಿಯೋ ಕರೆಯಲ್ಲಿ ಮಾತನಾಡುತ್ತಾ ಆರಾಮವಾಗಿ ಪ್ರಯಾಣಿಸುತ್ತಿದ್ದಳು. ಅದು ನ್ಯಾಯವೇ?
  4. ರಾಜ್ಯವು ಅಷ್ಟೂ ಹೆಚ್ಚುವರಿ ಆದಾಯವನ್ನು ಹೊಂದಿದ್ದರೆ, ಈ 20 ಪುರುಷರಿಗೂ ಏಕೆ ಉಚಿತ ಪ್ರಯಾಣದ ಸೌಲಭ್ಯ ನೀಡಬಾರದು?
  5. ಪ್ರಪಂಚದಾದ್ಯಂತ ಸಹಾಯಧನ ಮತ್ತು ಸೌಲಭ್ಯಗಳನ್ನು ಬಡ ಜನರಿಗೆ ನೀಡಲಾಗುತ್ತದೆ. ಆದ್ರೆ ಇಲ್ಲಿ ಕೇವಲ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ನೀಡಿದ್ದಾರೆ. ಇದು ಸಮರ್ಥನೀಯವೇ?
  6. ಇದೇ ಹಣವನ್ನು ಬಿಟ್ಟಿ ಭಾಗ್ಯಗಳಿಗೆ ಬಳಸುವ ಬದಲು ಕಸ ತೆರವು ಗೊಳಿಸಲು, ರಸ್ತೆ ಗುಂಡಿಗಳನ್ನು ಸರಿ ಪಡಿಸಲು, ರೈತರಿಗೆ ನೀರಿನ ಸೌಲಭ್ಯ ಕೊಡಲು ಬಳಸಬಹುದಿತ್ತಲ್ಲವೇ?
  7. ಇನ್ನೂ ಅನೇಕ ಆಲೋಚನೆಗಳಿವೆ. ಆದರೆ ನಾವು ಉಚಿತಗಳಿಗಾಗಿ ಮತ ಹಾಕಿದ್ದೇವೆ” ಎಂಬ ಸುದೀರ್ಘ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ.

ಮತ್ತಷ್ಟು ಓದಿ:ಮನುಷ್ಯರನ್ನು ನೀರಿಗಿಳಿಯುವಂತೆ ಮಾಡಲು ಸಾವಿನ ನಾಟಕವಾಡುವ ಖತರ್ನಾಕ್‌ ಮೊಸಳೆಗಳು; ವಿಡಿಯೋ ವೈರಲ್‌

ಜನವರಿ 8 ರಂದು ಹಂಚಿಕೊಳ್ಳಲಾದ ಈ ವಿಡಿಯೋ 1.2 ಮಿಲಿಯನ್‌ ವೀಕ್ಷಣೆಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಸರ್‌ ಮುಂದಿನ ಬಾರಿ ಜಾಗರೂಕತೆಯಿಂದ ಆಲೋಚಿಸಿ ಮತ ಚಲಾಯಿಸಿʼ ಎಂದು ಹೇಳಿದ್ದಾರೆ. ಇನ್ನೊಬ್ಬ ಬಳಕೆದಾರರು ʼನಿಮ್ಮ ಮಾತು ಅಕ್ಷರಶಃ ನಿಜ ಸರ್‌ʼ ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರರು ʼಹೌದು ಸರ್‌ ಉಚಿತ ಸೌಲಭ್ಯಗಳಿಗಿಂತ ಸಮಾನತೆ ಮುಖ್ಯʼ ಎಂದು ಹೇಳಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಬಾಗಲಕೋಟೆ: ಬೆಳೆಗೆ ಜನರ ದೃಷ್ಟಿ ತಾಗದಿರಲು ಚಿತ್ರ ನಟಿಯರು ಕಾವಲು!
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ಹಾಸ್ಟೆಲ್​ಗೆ ಕಾಲಿಟ್ಟರೆ ಕಾಲು ಕತ್ತರಿಸ್ತೀನಿ ಎಂದು ಗದರಿದ ಶಾಸಕ ದರ್ಶನ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
Video: ರೈಲಿನಲ್ಲಿ ಕುಡುಕ ಪ್ರಯಾಣಿಕ ಹಾಗೂ ಟಿಟಿಇ ನಡುವೆ ಹೊಡೆದಾಟ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ