AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ನಮ್ಮ ಮೆಟ್ರೋದಲ್ಲಿ ಕುಳಿತು ವಿಮಲ್‌ ಪಾನ್‌ ಮಸಾಲಾ ಜಗಿದ ಪ್ರಯಾಣಿಕ; ಭದ್ರತೆ ಬಿಗಿಗೊಳಿಸಿದ ಬಿಎಂಆರ್‌ಸಿಎಲ್

ಎರಡು ಮೂರು ದಿನಗಳ ಹಿಂದೆ ಪ್ರಯಾಣಿಕನೊಬ್ಬ ನಮ್ಮ ಮೆಟ್ರೋದಲ್ಲಿ ಕುಳಿತು ಪಾನ್‌ ಮಸಾಲಾ ಜಗಿದ ವಿಡಿಯೋವೊಂದು ಸಾಕಷ್ಟು ವೈರಲ್‌ ಆಗಿತ್ತು. ಈ ಬಗ್ಗೆ ಸಾಕಷ್ಟು ಟೀಕೆಗಳು ಕೂಡಾ ವ್ಯಕ್ತವಾಗಿತ್ತು. ಆ ಬಳಿಕ ಇದೀಗ ಬೆಂಗಳೂರು ಮೆಟ್ರೋ ಕಠಿಣ ಭದ್ರತಾ ಕ್ರಮಗಳನ್ನು ಇನ್ನಷ್ಟು ಬಿಗಿ ಗೊಳಿಸಿದೆ. ಮೆಟ್ರೋದೊಳಗೆ ಜಗಿಯುವುದನ್ನು ಬ್ಯಾನ್‌ ಮಾಡಲಾಗಿದೆ. ನಿಯಮ ಉಲ್ಲಂಘಿಸಿದವರಿಗೆ ದಂಡ ವಿಧಿಸುವುದರ ಜೊತೆಗೆ ಸ್ವಚ್ಛತೆಯನ್ನು ಉತ್ತೇಜಿಸಲು ಮತ್ತು ತಂಬಾಕು ಬಳಕೆಯನ್ನು ಕಡಿಮೆ ಮಾಡಲು ಜಾಗೃತಿ ಅಭಿಯಾನಗಳನ್ನು ಸಹ ಪ್ರಾರಂಭಿಸಿದೆ.

Viral: ನಮ್ಮ ಮೆಟ್ರೋದಲ್ಲಿ ಕುಳಿತು ವಿಮಲ್‌ ಪಾನ್‌ ಮಸಾಲಾ ಜಗಿದ ಪ್ರಯಾಣಿಕ; ಭದ್ರತೆ ಬಿಗಿಗೊಳಿಸಿದ ಬಿಎಂಆರ್‌ಸಿಎಲ್
ಬೆಂಗಳೂರು ಮೆಟ್ರೋ Image Credit source: Google
ಮಾಲಾಶ್ರೀ ಅಂಚನ್​
|

Updated on: Apr 26, 2025 | 5:34 PM

Share

ಬೆಂಗಳೂರು, ಏ. 26: ಟ್ರೈನ್‌, ಮೆಟ್ರೋದಲ್ಲಿ (Metro)  ಕೆಲವೊಂದು ಬಾರಿ ಪ್ರಯಾಣಿಕರು ಹುಚ್ಚಾಟ ಮೆರೆಯುವಂತಹ ಘಟನೆಗಳು ನಡೆಯುತ್ತಲೇ ಇರುತ್ತವೆ. ಅದೇ ರೀತಿಯ ಘಟನೆ ಬೆಂಗಳೂರಿನ (Bengaluru) ನಮ್ಮ ಮೆಟ್ರೋದಲ್ಲಿ ಏಪ್ರಿಲ್‌ 21 ರಂದು ನಡೆದಿತ್ತು. ಹೌದು ಪ್ರಯಾಣಿಕನೊಬ್ಬ (Passenger) ಮೆಟ್ರೋದಲ್ಲಿ ಕುಳಿತು ವಿಮಲ್‌ ಪಾನ್‌ ಮಸಾಲ ಜಗಿದಂತಹ ಘಟನೆ ನಡೆದಿದ್ದು, ಈ ವಿಡಿಯೋ ವೈರಲ್‌ ಆದ ಬಿಎಂಆರ್‌ಸಿಎಲ್  (ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್)‌ ನಮ್ಮ ಮೆಟ್ರೋದಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಿದೆ. ಹೌದು ಬಿಎಂಆರ್‌ಸಿಎಲ್‌ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದ್ದು, ಇದೀಗ ಗುಟ್ಕಾ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಮೆಟ್ರೋದೊಳಗೆ ತೆಗೆದುಕೊಂಡು ಹೋಗುವುದನ್ನು ಬ್ಯಾನ್‌ ಮಾಡಿದೆ. ಆಗಾಗ್ಗೆ ತಪಾಸಣೆಯ ಜೊತೆಗೆ ಮೆಟ್ರೋದೊಳಗೆ ತಂಬಾಕು ಆಧಾರಿತ ಉತ್ಪನ್ನಗಳನ್ನು ಸೇವಿಸುವ ಪ್ರಯಾಣಿಕರಿಗೆ ದಂಡ ವಿಧಿಸುವ ನಿರ್ಧಾರವನ್ನು ಕೈಗೊಂಡಿದೆ. ಜೊತೆಗೆ ಸ್ವಚ್ಛತೆಯನ್ನು ಉತ್ತೇಜಿಸಲು ಮತ್ತು ತಂಬಾಕು ಬಳಕೆಯನ್ನು ಕಡಿಮೆ ಮಾಡಲು ಜಾಗೃತಿ ಅಭಿಯಾನಗಳನ್ನು ಸಹ ಪ್ರಾರಂಭಿಸಿದೆ.

ನಮ್ಮ ಮೆಟ್ರೋದಲ್ಲಿ ಕುಳಿತು ವಿಮಲ್‌ ಪಾನ್‌ ಮಸಾಲ ಜಗಿದ ಪ್ರಯಾಣಿಕ:

ಏಪ್ರಿಲ್‌ 21 ರಂದು ನಮ್ಮ ಮೆಟ್ರೋದಲ್ಲಿ ಪ್ರಯಾಣಿಕನೊಬ್ಬ ಗುಟ್ಕಾ ಜಗಿದಿದ್ದು, ಆತನನ್ನು ಸಹ ಪ್ರಯಾಣಿಕ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿತ್ತು. ಈ ಕುರಿತ ವಿಡಿಯೋವನ್ನು ಮದನ್‌ ರೆಡ್ಡಿ (Madhan Reddy) ಎಂಬವರು ತಮ್ಮ ಎಕ್ಸ್‌ ಖಾತೆಯಲ್ಲಿ ಶೇರ್‌ ಮಾಡಿಕೊಂಡಿದ್ದರು. ಈ ಘಟನೆ ನಡೆದ ಬಳಿಕ ಬಿಎಂಆರ್‌ಸಿಎಲ್‌ ನಮ್ಮ ಮೆಟ್ರೋದಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಿದೆ.

ಇದನ್ನೂ ಓದಿ
Image
ಫೋನ್​ ಕಸಿದುಕೊಂಡ ಶಿಕ್ಷಕಿಯ ಜಡೆಹಿಡಿದು ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ
Image
ಸ್ನಾನಕ್ಕೂ ಭಾರತದಿಂದ ನೀರು ಕೇಳಬೇಕು; ಟ್ರೋಲ್ ಮಾಡಿಕೊಂಡ ಪಾಕಿಸ್ತಾನೀಯರು!
Image
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
Image
ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ವಿವಾಹಕ್ಕೆ ವರನಿಗೆ ನೋ ಎಂಟ್ರಿ

ಇದನ್ನೂ ಓದಿ: ಫೋನ್​ ಕಸಿದುಕೊಂಡ ಶಿಕ್ಷಕಿಯ ಜಡೆ ಹಿಡಿದು ಚಪ್ಪಲಿಯಲ್ಲಿ ಬಾರಿಸಿದ ವಿದ್ಯಾರ್ಥಿನಿ

ವೈರಲ್‌ ವಿಡಿಯೋ ಇಲ್ಲಿದೆ ನೋಡಿ:

ಭದ್ರತೆ ಬಿಗಿಗೊಳಿಸಿದ ಬಿಎಂಆರ್‌ಸಿಎಲ್:

ಮೆಟ್ರೋದಲ್ಲಿ ತಪಾಸಣೆಯನ್ನು ಇನ್ನಷ್ಟು ಹೆಚ್ಚು ಮಾಡಿದ್ದು, ಲೋಹ ಶೋಧಕಗಳು ತಂಬಾಕು ಉತ್ಪನ್ನಗಳನ್ನು ಗುರುತಿಸಲು ಸಾಧ್ಯವಾಗದ ಕಾರಣ, ಮೆಟ್ರೋದ ಎಲ್ಲಾ ನಿಲ್ದಾಣಗಳಲ್ಲೂ ಭೌತಿಕ ತಪಾಸಣೆಯನ್ನು ಜಾರಿಗೆ ತರುವ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಬಿಎಂಆರ್‌ಸಿಎಲ್‌ ಗಸ್ತು ತಿರುಗುವಿಕೆಯನ್ನು ಹೆಚ್ಚಿಸಿದ್ದು, ಇದೀಗ ಗುಟ್ಕಾ ಸೇರಿದಂತೆ ತಂಬಾಕು ಉತ್ಪನ್ನಗಳನ್ನು ಮೆಟ್ರೋದೊಳಗೆ ತೆಗೆದುಕೊಂಡು ಹೋಗುವುದನ್ನು ಬ್ಯಾನ್‌ ಮಾಡಿದೆ. ಪ್ಲಾಟ್‌ಫಾರ್ಮ್‌ ಭದ್ರತಾ ಸಿಬ್ಬಂದಿಗಳಿಗೆ ಅಪರಾಧಿಗಳನ್ನು ಗುರುತಿಸಲು ತರಬೇತಿ ನೀಡಲಾಗುತ್ತಿದೆ. ಆಗಾಗ್ಗೆ ತಪಾಸಣೆಯ ಜೊತೆಗೆ ಮೆಟ್ರೋದೊಳಗೆ ತಂಬಾಕು ಆಧಾರಿತ ಉತ್ಪನ್ನಗಳನ್ನು ಸೇವಿಸುವ ಪ್ರಯಾಣಿಕರಿಗೆ ದಂಡ ವಿಧಿಸುವ ನಿರ್ಧಾರವನ್ನು ಕೈಗೊಂಡಿದೆ. ಜೊತೆಗೆ ಸ್ವಚ್ಛತೆಯನ್ನು ಉತ್ತೇಜಿಸಲು ಮತ್ತು ತಂಬಾಕು ಬಳಕೆಯನ್ನು ಕಡಿಮೆ ಮಾಡಲು ಜಾಗೃತಿ ಅಭಿಯಾನಗಳನ್ನು ಸಹ ಪ್ರಾರಂಭಿಸಿದೆ. ಈ ಉಪಕ್ರಮಗಳು ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಮತ್ತು ಎಲ್ಲಾ ಪ್ರಯಾಣಿಕರಿಗೆ ಆಹ್ಲಾದಕರ ಪ್ರಯಾಣದ ಅನುಭವವನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ