AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಮನೆ ಕೆಲಸ, ಮಕ್ಕಳ ಆರೈಕೆಗಾಗಿ ತಿಂಗಳಿಗೆ 46 ಸಾವಿರ ರೂ ಖರ್ಚು ಮಾಡುವ ಬೆಂಗಳೂರಿನ ಮಹಿಳೆ

ಈಗಿನ ಕಾಲದಲ್ಲಿ ಗಂಡ ಹೆಂಡತಿ ಇಬ್ಬರೂ ಉದ್ಯೋಗದಲ್ಲಿರುವವರು. ಹೀಗಾಗಿ ಮಕ್ಕಳನ್ನು ನೋಡಿಕೊಳ್ಳಲು ಸಹಾಯಕಿರನ್ನು ನೇಮಿಸಿಕೊಳ್ತಾರೆ. ಆದರೆ ಬೆಂಗಳೂರಿನ ಮಹಿಳೆಯೊಬ್ಬರು ಮಕ್ಕಳನ್ನು ಆರೈಕೆ ಮಾಡುವ ಕೇರ್‌ ಟೇಕರ್‌ ಕೊಡುವ ಸಂಬಳದ ಬಗ್ಗೆ ಮಾತನಾಡಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಸಂಬಳ ಕೇಳಿ ಶಾಕ್ ಆಗಿದ್ದಾರೆ. ಈ ಕುರಿತಾದ ಸ್ಟೋರಿ ಇಲ್ಲಿದೆ.

Video: ಮನೆ ಕೆಲಸ, ಮಕ್ಕಳ ಆರೈಕೆಗಾಗಿ ತಿಂಗಳಿಗೆ 46 ಸಾವಿರ ರೂ ಖರ್ಚು ಮಾಡುವ ಬೆಂಗಳೂರಿನ ಮಹಿಳೆ
ಸಾಂದರ್ಭಿಕ ಚಿತ್ರImage Credit source: Pinterest
ಸಾಯಿನಂದಾ
|

Updated on: Feb 15, 2026 | 7:36 PM

Share

ಬೆಂಗಳೂರು, ಫೆಬ್ರವರಿ 15: ಕೆಲವು ವರ್ಷಗಳ ಹಿಂದೆ ಪುರುಷರು ಕೆಲಸಕ್ಕೆ ಹೋದರೆ, ಮಹಿಳೆಯರು ಮನೆ ಮಕ್ಕಳು ಸಂಸಾರವನ್ನು ನೋಡಿಕೊಳ್ಳುತ್ತಿದ್ದರು. ಆದರೆ ಈಗ ಕಾಲ ಬದಲಾಗಿದೆ, ಗಂಡ ಹೆಂಡ್ತಿ ಇಬ್ಬರೂ ದುಡಿದ್ರೂ ಖರ್ಚು ವೆಚ್ಚಗಳನ್ನು ಭರಿಸೋಕೆ ಆಗಲ್ಲ. ಇದೀಗ ಬೆಂಗಳೂರಿನ (Bengaluru) ಮಹಿಳೆಯೊಬ್ಬರು ತನ್ನ ಮಕ್ಕಳನ್ನು ಆರೈಕೆ ಮಾಡುವ ದಾದಿಯರಿಗೆ (caretaker) ಸಂಬಳ ಎಷ್ಟು ನೀಡುತ್ತಾರೆ ಎಂದು ರಿವೀಲ್ ಮಾಡಿದ್ದಾರೆ. ಅಷ್ಟೇ ಅಲ್ಲದೇ, ದಾದಿಯರು ಇದೀಗ ನಮ್ಮ ಕುಟುಂಬದ ಭಾಗವಾಗಿದ್ದಾರೆ ಎಂದು ಹೇಳಿದ್ದಾರೆ. ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಳ್ಳಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ಇವರ ಮಾತನ್ನು ಮೆಚ್ಚಿಕೊಂಡಿದ್ದಾರೆ.

ಪರ್ವೀನ್ ಚೌಧರಿ (parveen.cyclebreaker) ಮಹಿಳೆಯು ತಮ್ಮ ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಇದರಲ್ಲಿ ತನ್ನ ಮಕ್ಕಳ ಆರೈಕೆಗೆ ಇಬ್ಬರೂ ಸಹಾಯಕಿಯರನ್ನು ನೇಮಿಸಿಕೊಂಡಿರುವುದಾಗಿ ಹೇಳಿಕೊಂಡಿದ್ದಾರೆ. ಒಬ್ಬರು ಪ್ರಾಥಮಿಕ ಆರೈಕೆದಾರರಿಗೆ ತಿಂಗಳಿಗೆ 32,000 ರೂಪಾಯಿ ಸಂಬಳ ಕೊಡುತ್ತೇನೆ.

ವೈರಲ್ ವಿಡಿಯೋ ಇಲ್ಲಿದೆ

ಪ್ರತಿದಿನ 11 ಗಂಟೆಗಳ ಕಾಲ ಕೆಲಸ ಮಾಡುತ್ತಾರೆ ಹಾಗೂ ದ್ವಿತೀಯ ಸಹಾಯಕರೊಬ್ಬರಿಗೆ ತಿಂಗಳಿಗೆ 14,000 ರೂಪಾಯಿ ಕೊಡುತ್ತೇನೆ. ಇಬ್ಬರೂ ಸಹ ಅಡುಗೆ ಮಾಡುವುದು, ಮನೆ ಸ್ವಚ್ಛಗೊಳಿಸುವುದು ಹಾಗೂ ಮಕ್ಕಳನ್ನು ನೋಡಿಕೊಳ್ಳುತ್ತಾರೆ. ಹೀಗಾಗಿ ನನಗೆ ಕೆಲಸಕ್ಕೆ ಹೋಗಲು, ಪ್ರಯಾಣಿಸಲು ಕುಟುಂಬದ ಜವಾಬ್ದಾರಿಗಳನ್ನು ನಿಭಾಯಿಸಲು ಸಾಧ್ಯವಾಗುತ್ತದೆ. ಹೀಗಾಗಿ ಸಹಾಯಕ ಸಿಬ್ಬಂದಿಗೆ ತಿಂಗಳಿಗೆ 46,000 ರೂಪಾಯಿಗಳನ್ನು ಖರ್ಚು ಮಾಡುತ್ತೇನೆ ಎಂದು ಹೇಳಿರುವುದನ್ನು ನೋಡಬಹುದು.

ಇದನ್ನೂ ಓದಿ: 3 ಬಿಹೆಚ್‌ಕೆ ಮನೆಗೆ 16,883 ರೂ ವಿದ್ಯುತ್ ಬಿಲ್, ಮನೆಮಾಲೀಕ ಫುಲ್ ಶಾಕ್

ಈ ಪೋಸ್ಟ್ ಅಧಿಕ ವೀಕ್ಷಣೆಗಳನ್ನು ಪಡೆದುಕೊಂಡಿದ್ದು, ಒಬ್ಬ ಬಳಕೆದಾರ ದುಡ್ಡು ಇದ್ದವರಿಗೆ ಮನೆ ಕೆಲಸ ಹಾಗೂ ಮಕ್ಕಳ ಆರೈಕೆಗಾಗಿ ದಾದಿಯರನ್ನು ನೇಮಿಸಿಕೊಳ್ಳುವುದು ಕಷ್ಟವೇನಲ್ಲ ಎಂದು ಹೇಳಿದ್ದಾರೆ. ಮತ್ತೊಬ್ಬರು, ಮಕ್ಕಳ ಯಾರ ಜತೆಗೂ ಇರಲಿ, ತಾಯಿ ಇದ್ದಂತೆ ಆಗುವುದಿಲ್ಲ ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬರು, ಬೇರೆಯವರ ಮಕ್ಕಳನ್ನು ನಮ್ಮ ಮಕ್ಕಳಂತೆ ನೋಡಿಕೊಳ್ಳುವ ದಾದಿಯರು ಸಿಗುವುದು ತುಂಬಾನೇ ಕಡಿಮೆ ಎಂದು ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sainandha P
Sainandha P

ಮೂಲತಃ ಉಡುಪಿಯವರು. ಪ್ರತಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದಾರೆ. ಪ್ರತಿಷ್ಠಿತ ಕಾಲೇಜುಗಳಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡಿದ ಅನುಭವ ಇದೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಒಲವು ಹೆಚ್ಚಿರುವ ಇವರು ಕರ್ನಾಟಕ ಟೈಮ್ ವೆಬ್ ಸೈಟ್ ನಲ್ಲಿ ಕೆಲಸ ಮಾಡಿದ ಅನುಭವವಿದೆ. ಬಿಡುವು ಸಿಕ್ಕಾಗಲೆಲ್ಲಾ ಸಿನಿಮಾ ನೋಡುವುದು ಹಾಗೂ ಓದುವುದು ಇವರ ಹವ್ಯಾಸ

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ